የቅዱስ ቁርዓን ይዘት ትርጉም - የካናድኛ ትርጉም - በሐምዛ ቡቱር

external-link copy
237 : 2

وَاِنْ طَلَّقْتُمُوْهُنَّ مِنْ قَبْلِ اَنْ تَمَسُّوْهُنَّ وَقَدْ فَرَضْتُمْ لَهُنَّ فَرِیْضَةً فَنِصْفُ مَا فَرَضْتُمْ اِلَّاۤ اَنْ یَّعْفُوْنَ اَوْ یَعْفُوَا الَّذِیْ بِیَدِهٖ عُقْدَةُ النِّكَاحِ ؕ— وَاَنْ تَعْفُوْۤا اَقْرَبُ لِلتَّقْوٰی ؕ— وَلَا تَنْسَوُا الْفَضْلَ بَیْنَكُمْ ؕ— اِنَّ اللّٰهَ بِمَا تَعْمَلُوْنَ بَصِیْرٌ ۟

ನೀವು ನಿಮ್ಮ ಪತ್ನಿಯರನ್ನು ಸೇರುವುದಕ್ಕೆ ಮೊದಲು ಅವರಿಗೆ ವಿಚ್ಛೇದನ ನೀಡಿದರೆ, ಮತ್ತು ಈಗಾಗಲೇ ನೀವು ಅವರಿಗೆ ವಧುದಕ್ಷಿಣೆಯನ್ನು ನಿಶ್ಚಯಿಸಿದ್ದರೆ, ನಿಶ್ಚಯಿಸಿದ ವಧುದಕ್ಷಿಣೆಯ ಅರ್ಧವನ್ನು ಅವರಿಗೆ ಕೊಟ್ಟುಬಿಡಿ. ಆದರೆ, ಅವರು ಮಾಫಿ ಮಾಡಿದರೆ ಹೊರತು.[1] ಅಥವಾ ವಿವಾಹ ಕರಾರು ಯಾರ ಕೈಯಲ್ಲಿದೆಯೋ ಅವನು ಮಾಫಿ ಮಾಡಿದರೆ ಹೊರತು.[2] ನೀವು ಮಾಫಿ ಮಾಡುವುದು ದೇವಭಯಕ್ಕೆ ಹೆಚ್ಚು ನಿಕಟವಾಗಿದೆ. ನೀವು ನಿಮ್ಮ ನಡುವಿನ ಸೌಜನ್ಯವನ್ನು ಮರೆಯಬೇಡಿ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ. info

[1] ಅಂದರೆ ಪತ್ನಿ ವಧುದಕ್ಷಿಣೆಯ ಅರ್ಧ ಹಕ್ಕು ತನಗೆ ಬೇಡವೆಂದು ಹೇಳಿ ವಧುದಕ್ಷಿಣೆಯನ್ನು ಪೂರ್ಣವಾಗಿ ಹಿಂದಿರುಗಿಸುವುದು. [2] ವಿವಾಹ ಕರಾರು ಕೈಯಲ್ಲಿರುವವನು ಎಂದರೆ ಗಂಡ. ಅಂದರೆ, ಅವನು ವಧುದಕ್ಷಿಣೆಯ ಅರ್ಧ ಭಾಗವನ್ನು ಪಡೆಯುವ ತನ್ನ ಹಕ್ಕನ್ನು ಮಾಫಿ ಮಾಡಿ ವಧುದಕ್ಷಿಣೆಯನ್ನು ಸಂಪೂರ್ಣವಾಗಿ ಹೆಂಡತಿಗೆ ಬಿಟ್ಟುಕೊಡುವುದು.

التفاسير: