ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡುತ್ತಾರೋ ಅವರನ್ನು ನಾವು ಸದ್ಯದಲ್ಲೇ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವೆವು. ಅವರು ಅದರಲ್ಲಿ ಶಾಶ್ವತವಾಗಿರುವರು. ಅವರಿಗೆ ಅಲ್ಲಿ ಪರಿಶುದ್ಧರಾದ ಪತ್ನಿಯರಿರುವರು ನಾವು ದಟ್ಟವಾದ ನೆರಳುಗಳಲ್ಲಿ ಅವರನ್ನು ಪ್ರವೇಶಗೊಳಿಸುವೆವು.