ಅವನು ನಿಮಗೆ ಶವ, ರಕ್ತ, ಹಂದಿ ಮಾಂಸ ಮತ್ತು ಅಲ್ಲಾಹೇತರರ ಹೆಸರನ್ನು ಘೋಷಿಸಲಾದ ವಸ್ತುಗಳನ್ನು ಮಾತ್ರ ನಿಷೇಧಿಸಿದ್ದಾನೆ. ಆದರೆ ಯಾರಾದರೂ (ಇವುಗಳನ್ನು ಸೇವಿಸಲು) ನಿರ್ಬಂಧಿತನಾದರೆ ಅವನ ಮೇಲೆ ದೋಷವಿಲ್ಲ. ಆದರೆ ಅವನು ಅಗತ್ಯಕ್ಕಿಂತ ಹೆಚ್ಚು ಸೇವಿಸಬಾರದು ಮತ್ತು (ಅಲ್ಲಾಹು ಅನುಮತಿಸಿದ) ಎಲ್ಲೆಯನ್ನು ಮೀರಬಾರದು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.