“ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಯಾರು?” ಎಂದು ನೀವು ಅವರೊಡನೆ ಕೇಳಿದರೆ ಅವರು ಖಂಡಿತವಾಗಿಯೂ “ಅಲ್ಲಾಹು” ಎಂದು ಹೇಳುತ್ತಾರೆ. ಕೇಳಿರಿ: “ಹಾಗಾದರೆ ಅಲ್ಲಾಹನನ್ನು ಬಿಟ್ಟು ನೀವು ಕರೆದು ಪ್ರಾರ್ಥಿಸುತ್ತಿರುವ ದೇವರುಗಳ ಬಗ್ಗೆ ನೀವು ಯೋಚಿಸಿದ್ದೀರಾ? ಅಲ್ಲಾಹು ನನಗೆ ಏನಾದರೂ ತೊಂದರೆ ನೀಡಲು ಬಯಸಿದರೆ ಆ ತೊಂದರೆಯನ್ನು ನಿವಾರಿಸಲು ಅವರಿಗೆ ಸಾಧ್ಯವೇ? ಅಥವಾ ಅವನು ನನಗೆ ದಯೆ ತೋರಲು ಬಯಸಿದರೆ ಅವನ ದಯೆಯನ್ನು ತಡೆಯಲು ಅವರಿಗೆ ಸಾಧ್ಯವೇ?” ಹೇಳಿರಿ: “ನನಗೆ ಅಲ್ಲಾಹು ಸಾಕು. ಭರವಸೆಯಿಡುವವರು ಅವನಲ್ಲಿಯೇ ಭರವಸೆಯಿಡಲಿ.”