আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

পৃষ্ঠা নং:close

external-link copy
65 : 22

اَلَمْ تَرَ اَنَّ اللّٰهَ سَخَّرَ لَكُمْ مَّا فِی الْاَرْضِ وَالْفُلْكَ تَجْرِیْ فِی الْبَحْرِ بِاَمْرِهٖ ؕ— وَیُمْسِكُ السَّمَآءَ اَنْ تَقَعَ عَلَی الْاَرْضِ اِلَّا بِاِذْنِهٖ ؕ— اِنَّ اللّٰهَ بِالنَّاسِ لَرَءُوْفٌ رَّحِیْمٌ ۟

ಭೂಮಿಯಲ್ಲಿರುವ ಎಲ್ಲಾ ವಸ್ತುಗಳನ್ನು ಅಲ್ಲಾಹು ನಿಮಗೆ ನಿಯಂತ್ರಿಸಿಕೊಟ್ಟಿದ್ದಾನೆ ಎಂಬುದನ್ನು ನೀವು ನೋಡುವುದಿಲ್ಲವೇ? ಅವನ ಆಜ್ಞೆಯಂತೆ ಸಮುದ್ರದಲ್ಲಿ ಸಂಚರಿಸುವ ನಾವೆಗಳನ್ನು ಕೂಡ (ಅವನು ನಿಯಂತ್ರಿಸಿಕೊಟ್ಟಿದ್ದಾನೆ). ಆಕಾಶವು ಅವನ ಅಪ್ಪಣೆಯಿಲ್ಲದೆ ಭೂಮಿಯ ಮೇಲೆ ಬೀಳದಂತೆ ಅವನು ಅದನ್ನು ಆಧರಿಸಿ ಹಿಡಿದಿದ್ದಾನೆ. ನಿಶ್ಚಯವಾಗಿಯೂ ಅಲ್ಲಾಹು ಜನರ ಮೇಲೆ ಅತ್ಯಂತ ಅನುಕಂಪವಿರುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير:

external-link copy
66 : 22

وَهُوَ الَّذِیْۤ اَحْیَاكُمْ ؗ— ثُمَّ یُمِیْتُكُمْ ثُمَّ یُحْیِیْكُمْ ؕ— اِنَّ الْاِنْسَانَ لَكَفُوْرٌ ۟

ನಿಮಗೆ ಜೀವ ನೀಡಿದವನು ಅವನೇ. ನಂತರ ಅವನು ನಿಮ್ಮನ್ನು ಮೃತಪಡಿಸುತ್ತಾನೆ. ನಂತರ ನಿಮಗೆ ಪುನಃ ಜೀವ ನೀಡುತ್ತಾನೆ. ನಿಶ್ಚಯವಾಗಿಯೂ ಮನುಷ್ಯನು ಅತ್ಯಂತ ಕೃತಘ್ನನಾಗಿದ್ದಾನೆ. info
التفاسير:

external-link copy
67 : 22

لِكُلِّ اُمَّةٍ جَعَلْنَا مَنْسَكًا هُمْ نَاسِكُوْهُ فَلَا یُنَازِعُنَّكَ فِی الْاَمْرِ وَادْعُ اِلٰی رَبِّكَ ؕ— اِنَّكَ لَعَلٰی هُدًی مُّسْتَقِیْمٍ ۟

ನಾವು ಪ್ರತಿಯೊಂದು ಸಮುದಾಯಕ್ಕೂ ಆರಾಧನಾ ವಿಧಾನವನ್ನು ನಿಶ್ಚಯಿಸಿದ್ದೇವೆ. ಅವರು ಅದನ್ನೇ ಪಾಲಿಸುತ್ತಾರೆ. ಆದ್ದರಿಂದ ಅವರು ಈ ವಿಷಯದಲ್ಲಿ ನಿಮ್ಮೊಂದಿಗೆ ತರ್ಕ ಮಾಡಬಾರದು. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಮಾರ್ಗಕ್ಕೆ ಅವರನ್ನು ಕರೆಯಿರಿ. ನಿಶ್ಚಯವಾಗಿಯೂ ನೀವು ನೇರವಾದ ಮಾರ್ಗದಲ್ಲಿದ್ದೀರಿ. info
التفاسير:

external-link copy
68 : 22

وَاِنْ جٰدَلُوْكَ فَقُلِ اللّٰهُ اَعْلَمُ بِمَا تَعْمَلُوْنَ ۟

ಅವರು ನಿಮ್ಮೊಂದಿಗೆ ತರ್ಕ ಮಾಡಿದರೆ, ಹೇಳಿರಿ: “ನೀವು ಮಾಡುವ ಕರ್ಮಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. info
التفاسير:

external-link copy
69 : 22

اَللّٰهُ یَحْكُمُ بَیْنَكُمْ یَوْمَ الْقِیٰمَةِ فِیْمَا كُنْتُمْ فِیْهِ تَخْتَلِفُوْنَ ۟

ನೀವು ಭಿನ್ನಾಭಿಪ್ರಾಯದಲ್ಲಿರುವ ವಿಷಯದಲ್ಲಿ ಅಲ್ಲಾಹು ಪುನರುತ್ಥಾನ ದಿನದಂದು ನಿಮ್ಮ ನಡುವೆ ತೀರ್ಪು ನೀಡುತ್ತಾನೆ.” info
التفاسير:

external-link copy
70 : 22

اَلَمْ تَعْلَمْ اَنَّ اللّٰهَ یَعْلَمُ مَا فِی السَّمَآءِ وَالْاَرْضِ ؕ— اِنَّ ذٰلِكَ فِیْ كِتٰبٍ ؕ— اِنَّ ذٰلِكَ عَلَی اللّٰهِ یَسِیْرٌ ۟

ಭೂಮ್ಯಾಕಾಶದಲ್ಲಿರುವುದನ್ನು ಅಲ್ಲಾಹು ತಿಳಿಯುತ್ತಾನೆಂದು ನಿಮಗೆ ಗೊತ್ತಿಲ್ಲವೇ? ನಿಶ್ಚಯವಾಗಿಯೂ ಅವಲ್ಲವೂ ಒಂದು ಗ್ರಂಥದಲ್ಲಿದೆ. ನಿಶ್ಚಯವಾಗಿಯೂ ಅಲ್ಲಾಹನಿಗೆ ಅದು ಬಹಳ ಸುಲಭದ ವಿಷಯವಾಗಿದೆ. info
التفاسير:

external-link copy
71 : 22

وَیَعْبُدُوْنَ مِنْ دُوْنِ اللّٰهِ مَا لَمْ یُنَزِّلْ بِهٖ سُلْطٰنًا وَّمَا لَیْسَ لَهُمْ بِهٖ عِلْمٌ ؕ— وَمَا لِلظّٰلِمِیْنَ مِنْ نَّصِیْرٍ ۟

ಅವರು ಅಲ್ಲಾಹನನ್ನು ಬಿಟ್ಟು ಅವನು ಯಾವುದೇ ಸಾಕ್ಷ್ಯಾಧಾರವನ್ನು ಇಳಿಸದವರನ್ನು ಆರಾಧಿಸುತ್ತಿದ್ದಾರೆ. ಅವರಿಗೂ ಸಹ ಅದರ ಬಗ್ಗೆ ಯಾವುದೇ ಜ್ಞಾನವಿಲ್ಲ. ಅಕ್ರಮಿಗಳಿಗೆ ಯಾವುದೇ ಸಹಾಯಕರಿಲ್ಲ. info
التفاسير:

external-link copy
72 : 22

وَاِذَا تُتْلٰی عَلَیْهِمْ اٰیٰتُنَا بَیِّنٰتٍ تَعْرِفُ فِیْ وُجُوْهِ الَّذِیْنَ كَفَرُوا الْمُنْكَرَ ؕ— یَكَادُوْنَ یَسْطُوْنَ بِالَّذِیْنَ یَتْلُوْنَ عَلَیْهِمْ اٰیٰتِنَا ؕ— قُلْ اَفَاُنَبِّئُكُمْ بِشَرٍّ مِّنْ ذٰلِكُمْ ؕ— اَلنَّارُ ؕ— وَعَدَهَا اللّٰهُ الَّذِیْنَ كَفَرُوْا ؕ— وَبِئْسَ الْمَصِیْرُ ۟۠

ನಮ್ಮ ಸ್ಪಷ್ಟ ವಚನಗಳನ್ನು ಅವರಿಗೆ ಓದಿಕೊಡಲಾದರೆ, ಸತ್ಯನಿಷೇಧಿಗಳ ಮುಖಗಳಲ್ಲಿ ಅತೃಪ್ತಿ ವ್ಯಕ್ತವಾಗುವುದನ್ನು ಕಾಣಬಹುದು. ಅವರಿಗೆ ನಮ್ಮ ವಚನಗಳನ್ನು ಓದಿಕೊಡುವವರ ಮೇಲೆ ಹಲ್ಲೆ ಮಾಡುವಷ್ಟರ ಮಟ್ಟಿಗೆ ಅವರು ತಲುಪುತ್ತಾರೆ. ಹೇಳಿರಿ: “ಅದಕ್ಕಿಂತಲೂ ನಿಕೃಷ್ಟವಾದ ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ? ನರಕಾಗ್ನಿ! ಅಲ್ಲಾಹು ಅದನ್ನು ಸತ್ಯನಿಷೇಧಿಗಳಿಗೆ ವಾಗ್ದಾನ ಮಾಡಿದ್ದಾನೆ. ಅದು ಬಹಳ ನಿಕೃಷ್ಟ ಗಮ್ಯಸ್ಥಾನವಾಗಿದೆ.” info
التفاسير: