আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
32 : 5

مِنْ اَجْلِ ذٰلِكَ ؔۛۚ— كَتَبْنَا عَلٰی بَنِیْۤ اِسْرَآءِیْلَ اَنَّهٗ مَنْ قَتَلَ نَفْسًا بِغَیْرِ نَفْسٍ اَوْ فَسَادٍ فِی الْاَرْضِ فَكَاَنَّمَا قَتَلَ النَّاسَ جَمِیْعًا ؕ— وَمَنْ اَحْیَاهَا فَكَاَنَّمَاۤ اَحْیَا النَّاسَ جَمِیْعًا ؕ— وَلَقَدْ جَآءَتْهُمْ رُسُلُنَا بِالْبَیِّنٰتِ ؗ— ثُمَّ اِنَّ كَثِیْرًا مِّنْهُمْ بَعْدَ ذٰلِكَ فِی الْاَرْضِ لَمُسْرِفُوْنَ ۟

ಇದೇ ಕಾರಣದಿಂದ, ನಾವು ಇಸ್ರಾಯೇಲ್ ಮಕ್ಕಳಿಗೆ ಹೀಗೆ ವಿಧಿಸಿದೆವು: ಕೊಲೆಗೆ ಪ್ರತೀಕಾರವಾಗಿ ಅಥವಾ ಭೂಮಿಯಲ್ಲಿ ಕಿಡಿಗೇಡಿತನ ಮಾಡಿದ್ದಕ್ಕಾಗಿ ಹೊರತು ಒಬ್ಬ ವ್ಯಕ್ತಿಯನ್ನು ಯಾರಾದರೂ ಕೊಂದರೆ ಅದು ಸಂಪೂರ್ಣ ಮನುಕುಲವನ್ನು ಕೊಲ್ಲುವುದಕ್ಕೆ ಸಮಾನವಾಗಿದೆ ಮತ್ತು ಒಬ್ಬ ವ್ಯಕ್ತಿಯ ಜೀವವನ್ನು ಯಾರಾದರೂ ಉಳಿಸಿದರೆ ಅದು ಸಂಪೂರ್ಣ ಮನುಕುಲದ ಜೀವವನ್ನು ಉಳಿಸಿದ್ದಕ್ಕೆ ಸಮಾನವಾಗಿದೆ. ನಮ್ಮ ಸಂದೇಶವಾಹಕರು ಈಗಾಗಲೇ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಿದ್ದಾರೆ. ನಂತರ ಆ ಬಳಿಕವೂ ಅವರಲ್ಲಿ ಅನೇಕ ಮಂದಿ ಭೂಮಿಯಲ್ಲಿ ಅತಿರೇಕವೆಸಗುತ್ತಲೇ ಇದ್ದಾರೆ. info
التفاسير: