আল-কোৰআনুল কাৰীমৰ অৰ্থানুবাদ - কানাড়া অনুবাদ- হামঝাহ বাতৌৰ

external-link copy
89 : 5

لَا یُؤَاخِذُكُمُ اللّٰهُ بِاللَّغْوِ فِیْۤ اَیْمَانِكُمْ وَلٰكِنْ یُّؤَاخِذُكُمْ بِمَا عَقَّدْتُّمُ الْاَیْمَانَ ۚ— فَكَفَّارَتُهٗۤ اِطْعَامُ عَشَرَةِ مَسٰكِیْنَ مِنْ اَوْسَطِ مَا تُطْعِمُوْنَ اَهْلِیْكُمْ اَوْ كِسْوَتُهُمْ اَوْ تَحْرِیْرُ رَقَبَةٍ ؕ— فَمَنْ لَّمْ یَجِدْ فَصِیَامُ ثَلٰثَةِ اَیَّامٍ ؕ— ذٰلِكَ كَفَّارَةُ اَیْمَانِكُمْ اِذَا حَلَفْتُمْ ؕ— وَاحْفَظُوْۤا اَیْمَانَكُمْ ؕ— كَذٰلِكَ یُبَیِّنُ اللّٰهُ لَكُمْ اٰیٰتِهٖ لَعَلَّكُمْ تَشْكُرُوْنَ ۟

ನೀವು ಅರ್ಥವಿಲ್ಲದೆ[1] ಮಾಡುವ ಪ್ರತಿಜ್ಞೆಗಳಿಗಾಗಿ ಅಲ್ಲಾಹು ನಿಮ್ಮನ್ನು ಹಿಡಿಯುವುದಿಲ್ಲ. ಆದರೆ ನೀವು ದೃಢನಿರ್ಧಾರದಿಂದ ಮಾಡಿದ ಪ್ರತಿಜ್ಞೆಗಳಿಗಾಗಿ ಅವನು ನಿಮ್ಮನ್ನು ಹಿಡಿಯುತ್ತಾನೆ. ಅದಕ್ಕೆ ಪರಿಹಾರವೇನೆಂದರೆ, ಹತ್ತು ಮಂದಿ ಬಡವರಿಗೆ ನೀವು ನಿಮ್ಮ ಮನೆಯವರಿಗೆ ಉಣಿಸುವ ಮಧ್ಯಮ ರೀತಿಯ ಆಹಾರವನ್ನು ಉಣಿಸುವುದು, ಅಥವಾ ಅವರಿಗೆ ಬಟ್ಟೆ-ಬರೆ ನೀಡುವುದು, ಅಥವಾ ಒಬ್ಬ ಗುಲಾಮನನ್ನು ಸ್ವತಂತ್ರಗೊಳಿಸುವುದು. ಯಾರಿಗೆ ಇದು ಸಾಧ್ಯವಿಲ್ಲವೋ ಅವನು ಮೂರು ದಿನ ಉಪವಾಸ ಆಚರಿಸಬೇಕು. ಇದು ನೀವು ನಿಮ್ಮ ಪ್ರತಿಜ್ಞೆಗಳನ್ನು ಉಲ್ಲಂಘಿಸಿದರೆ ನೀಡಬೇಕಾದ ಪರಿಹಾರವಾಗಿದೆ. ನಿಮ್ಮ ಪ್ರತಿಜ್ಞೆಗಳನ್ನು ಕಾಯ್ದುಕೊಳ್ಳಿರಿ. ಹೀಗೆ ಅಲ್ಲಾಹು ನಿಮಗೆ ಅವನ ವಚನಗಳನ್ನು ವಿವರಿಸಿಕೊಡುತ್ತಾನೆ. ನೀವು ಕೃತಜ್ಞರಾಗುವುದಕ್ಕಾಗಿ. info

[1] ಅಂದರೆ ದೃಢನಿರ್ಧಾರವಿಲ್ಲದೆ ಅಭ್ಯಾಸಬಲದಿಂದ ಮಾಡುವ ಪ್ರತಿಜ್ಞೆಗಳು.

التفاسير: