Prijevod značenja časnog Kur'ana - Prijevod na kannada jezik (južno indijski jezik) - Hamza Betur

ಅಲ್- ಹಿಜ್ರ್

external-link copy
1 : 15

الٓرٰ ۫— تِلْكَ اٰیٰتُ الْكِتٰبِ وَقُرْاٰنٍ مُّبِیْنٍ ۟

ಅಲಿಫ್ ಲಾಮ್ ರಾ. ಇವು ದೈವಿಕ ಗ್ರಂಥದ ವಚನಗಳು ಮತ್ತು ಸ್ಪಷ್ಟ ಕುರ್‌ಆನ್ ಆಗಿದೆ. info
التفاسير:

external-link copy
2 : 15

رُبَمَا یَوَدُّ الَّذِیْنَ كَفَرُوْا لَوْ كَانُوْا مُسْلِمِیْنَ ۟

”ನಾವು ಮುಸಲ್ಮಾನರಾಗಿದ್ದರೆ!” ಎಂದು ಕೆಲವೊಮ್ಮೆ ಸತ್ಯನಿಷೇಧಿಗಳು ಹಾರೈಸುವರು.[1] info

[1] ಮರಣದ ಸಮಯದಲ್ಲಿ, ದೇವದೂತರು ನರಕಾಗ್ನಿಯನ್ನು ತೋರಿಸುವಾಗ, ಅವರನ್ನು ನರಕಾಗ್ನಿಗೆ ಎಸೆಯುವಾಗ, ಪಾಪಿಗಳಾದ ಸತ್ಯವಿಶ್ವಾಸಿಗಳನ್ನು ನರಕ ಶಿಕ್ಷೆಯಿಂದ ಬಿಡುಗಡೆಗೊಳಿಸುವಾಗ, ಮುಸಲ್ಮಾನರು ವಿಚಾರಣೆ ನಡೆದು ಸ್ವರ್ಗಕ್ಕೆ ಹೋಗುವಾಗ ಮುಂತಾದ ಸಂದರ್ಭಗಳಲ್ಲಿ ನಾವು ಮುಸಲ್ಮಾನರಾಗಿದ್ದರೆ ಎಂದು ಅವರು ಹಾರೈಸುವರು. ಆದರೆ ಈ ಹಾರೈಕೆಯಿಂದ ಅವರಿಗೆ ಯಾವುದೇ ಪ್ರಯೋಜನವಿರುವುದಿಲ್ಲ.

التفاسير:

external-link copy
3 : 15

ذَرْهُمْ یَاْكُلُوْا وَیَتَمَتَّعُوْا وَیُلْهِهِمُ الْاَمَلُ فَسَوْفَ یَعْلَمُوْنَ ۟

ಅವರನ್ನು ಬಿಟ್ಟುಬಿಡಿ. ಅವರು ತಿನ್ನುತ್ತಲೂ, ಆನಂದಿಸುತ್ತಲೂ, ಹುಸಿ ಭರವಸೆಗಳಲ್ಲಿ ತಲ್ಲೀನರಾಗುತ್ತಲೂ ಇರಲಿ. ಸದ್ಯವೇ ಅವರು ತಿಳಿಯುವರು. info
التفاسير:

external-link copy
4 : 15

وَمَاۤ اَهْلَكْنَا مِنْ قَرْیَةٍ اِلَّا وَلَهَا كِتَابٌ مَّعْلُوْمٌ ۟

ನಾವು ಯಾವುದೇ ಊರನ್ನು ಅದಕ್ಕೆ ಒಂದು ನಿಗದಿತ ಅವಧಿಯನ್ನು ನೀಡದೆ ನಾಶ ಮಾಡಿಲ್ಲ. info
التفاسير:

external-link copy
5 : 15

مَا تَسْبِقُ مِنْ اُمَّةٍ اَجَلَهَا وَمَا یَسْتَاْخِرُوْنَ ۟

ಯಾವುದೇ ಜನತೆ ತಮ್ಮ ನಿಗದಿತ ಅವಧಿಯನ್ನು ದಾಟಿಹೋಗುವುದಿಲ್ಲ, ಹಿಂದೆ ಉಳಿಯುವುದೂ ಇಲ್ಲ. info
التفاسير:

external-link copy
6 : 15

وَقَالُوْا یٰۤاَیُّهَا الَّذِیْ نُزِّلَ عَلَیْهِ الذِّكْرُ اِنَّكَ لَمَجْنُوْنٌ ۟ؕ

ಸತ್ಯನಿಷೇಧಿಗಳು ಹೇಳಿದರು: “ಓ ದೇವವಾಣಿ ಅವತೀರ್ಣವಾಗುವವನೇ! ನಿಜಕ್ಕೂ ನೀನೊಬ್ಬ ಮಾನಸಿಕ ಅಸ್ವಸ್ಥ. info
التفاسير:

external-link copy
7 : 15

لَوْ مَا تَاْتِیْنَا بِالْمَلٰٓىِٕكَةِ اِنْ كُنْتَ مِنَ الصّٰدِقِیْنَ ۟

ನೀನು ಸತ್ಯವಂತನಾಗಿದ್ದರೆ ನೀನೇಕೆ ನಮ್ಮ ಬಳಿಗೆ ದೇವದೂತರುಗಳನ್ನು ತರುವುದಿಲ್ಲ?” info
التفاسير:

external-link copy
8 : 15

مَا نُنَزِّلُ الْمَلٰٓىِٕكَةَ اِلَّا بِالْحَقِّ وَمَا كَانُوْۤا اِذًا مُّنْظَرِیْنَ ۟

ನಾವು ದೇವದೂತರುಗಳನ್ನು ಸತ್ಯ ಸಮೇತವಾಗಿಯೇ ಇಳಿಸುತ್ತೇವೆ.[1] ಆಗ ಅವರಿಗೆ ಯಾವುದೇ ಕಾಲಾವಕಾಶ ನೀಡಲಾಗಿರುವುದಿಲ್ಲ. info

[1] ಯಾವುದಾದರೂ ಶಿಕ್ಷೆಯನ್ನು ಕಳುಹಿಸುವುದಕ್ಕಾಗಿಯೇ ಹೊರತು ನಾವು ದೇವದೂತರುಗಳನ್ನು ಇಳಿಸುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಅವರೆಲ್ಲರೂ ನಾಶವಾಗುತ್ತಾರೆ. ಅವರಿಗೆ ಪಶ್ಚಾತ್ತಾಪಪಡಲು ಯಾವುದೇ ಕಾಲಾವಕಾಶ ನೀಡಲಾಗುವುದಿಲ್ಲ.

التفاسير:

external-link copy
9 : 15

اِنَّا نَحْنُ نَزَّلْنَا الذِّكْرَ وَاِنَّا لَهٗ لَحٰفِظُوْنَ ۟

ಈ ಕುರ್‌ಆನನ್ನು ಅವತೀರ್ಣಗೊಳಿಸಿದ್ದು ನಾವೇ. ನಾವೇ ಇದನ್ನು ಸಂರಕ್ಷಿಸುತ್ತೇವೆ. info
التفاسير:

external-link copy
10 : 15

وَلَقَدْ اَرْسَلْنَا مِنْ قَبْلِكَ فِیْ شِیَعِ الْاَوَّلِیْنَ ۟

ನಿಮಗಿಂತ ಮೊದಲು ನಾವು ಹಿಂದಿನ ಕಾಲದ ಜನರ ಅನೇಕ ಪಂಗಡಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದೆವು. info
التفاسير:

external-link copy
11 : 15

وَمَا یَاْتِیْهِمْ مِّنْ رَّسُوْلٍ اِلَّا كَانُوْا بِهٖ یَسْتَهْزِءُوْنَ ۟

ಯಾವುದೇ ಸಂದೇಶವಾಹಕರು ಅವರ ಬಳಿಗೆ ಬಂದಾಗಲೆಲ್ಲಾ ಅವರು ತಮಾಷೆ ಮಾಡಿ ನಗುತ್ತಿದ್ದರು. info
التفاسير:

external-link copy
12 : 15

كَذٰلِكَ نَسْلُكُهٗ فِیْ قُلُوْبِ الْمُجْرِمِیْنَ ۟ۙ

ಅಪರಾಧಿಗಳ ಹೃದಯಗಳಲ್ಲಿ ನಾವು ಈ ರೀತಿ ಅದನ್ನು (ತಮಾಷೆ ಮಾಡುವುದನ್ನು) ತೂರಿಸಿ ಬಿಡುತ್ತೇವೆ. info
التفاسير:

external-link copy
13 : 15

لَا یُؤْمِنُوْنَ بِهٖ وَقَدْ خَلَتْ سُنَّةُ الْاَوَّلِیْنَ ۟

ಅವರು ಅದರಲ್ಲಿ ವಿಶ್ವಾಸವಿಡುವುದಿಲ್ಲ. ಹಿಂದಿನ ಕಾಲದ ಜನರ ಮೇಲಿನ ಶಿಕ್ಷಾಕ್ರಮವು ಈಗಾಗಲೇ ಜರುಗಿ ಬಿಟ್ಟಿದೆ. info
التفاسير:

external-link copy
14 : 15

وَلَوْ فَتَحْنَا عَلَیْهِمْ بَابًا مِّنَ السَّمَآءِ فَظَلُّوْا فِیْهِ یَعْرُجُوْنَ ۟ۙ

ನಾವು ಅವರ ಮೇಲೆ ಆಕಾಶದ ದ್ವಾರವನ್ನು ತೆರೆದುಕೊಟ್ಟು ಅವರು ಅದಕ್ಕೆ ಏರಿಹೋದರೂ ಸಹ, info
التفاسير:

external-link copy
15 : 15

لَقَالُوْۤا اِنَّمَا سُكِّرَتْ اَبْصَارُنَا بَلْ نَحْنُ قَوْمٌ مَّسْحُوْرُوْنَ ۟۠

ಅವರು ಹೇಳುವರು: “ನಮ್ಮನ್ನು ಮಂತ್ರಮುಗ್ಧಗೊಳಿಸಲಾಗಿದೆ. ಅಲ್ಲ, ನಮಗೆ ಮಾಟ ಮಾಡಲಾಗಿದೆ.”[1] info

[1] ದೇವದೂತರು ಬರಬೇಕು ಎಂದು ಸತ್ಯನಿಷೇಧಿಗಳು ಆಗ್ರಹಿಸುವುದು ಕೇವಲ ಸತ್ಯವಿಶ್ವಾಸಿಗಳಾಗುವುದರಿಂದ ನುಣುಚಿಕೊಳ್ಳಲು ಮಾತ್ರ. ಅವರಿಗೆ ಆಕಾಶದ ಬಾಗಿಲುಗಳನ್ನು ತೆರೆದುಕೊಟ್ಟು ಅವರು ಅದಕ್ಕೆ ಏರಿ ಹೋಗಿ ಅಲ್ಲಿನ ಸ್ಥಿತಿಗಳನ್ನು ಕಣ್ಣಾರೆ ನೋಡಿದರೂ ಅವರು ಸಂದೇಶವಾಹಕರಲ್ಲಿ ವಿಶ್ವಾಸವಿಡುವುದಿಲ್ಲ. ನಮ್ಮನ್ನು ಮಂತ್ರಮುಗ್ಧಗೊಳಿಸಲಾಗಿದೆ ಅಥವಾ ನಮಗೆ ಮಾಟ ಮಾಡಲಾಗಿದೆ ಎಂದೇ ಅವರು ಹೇಳುವರು.

التفاسير: