Prijevod značenja časnog Kur'ana - Prijevod na kannada jezik (južno indijski jezik) - Hamza Betur

Broj stranice:close

external-link copy
52 : 4

اُولٰٓىِٕكَ الَّذِیْنَ لَعَنَهُمُ اللّٰهُ ؕ— وَمَنْ یَّلْعَنِ اللّٰهُ فَلَنْ تَجِدَ لَهٗ نَصِیْرًا ۟ؕ

ಅವರೇ ಅಲ್ಲಾಹನ ಶಾಪಕ್ಕೆ ಗುರಿಯಾದವರು. ಯಾರು ಅಲ್ಲಾಹನ ಶಾಪಕ್ಕೆ ಗುರಿಯಾಗುತ್ತಾರೋ ಅವರಿಗೆ ಯಾವುದೇ ಸಹಾಯಕನನ್ನು ನೀವು ಕಾಣಲಾರಿರಿ. info
التفاسير:

external-link copy
53 : 4

اَمْ لَهُمْ نَصِیْبٌ مِّنَ الْمُلْكِ فَاِذًا لَّا یُؤْتُوْنَ النَّاسَ نَقِیْرًا ۟ۙ

ಆಧಿಪತ್ಯದಲ್ಲಿ ಅವರಿಗೇನಾದರೂ ಪಾಲಿದೆಯೇ? ಇದ್ದರೆ ಅವರು ಜನರಿಗೆ ಖರ್ಜೂರ ಬೀಜದ ಪೊರೆಯನ್ನೂ ನೀಡುತ್ತಿರಲಿಲ್ಲ. info
التفاسير:

external-link copy
54 : 4

اَمْ یَحْسُدُوْنَ النَّاسَ عَلٰی مَاۤ اٰتٰىهُمُ اللّٰهُ مِنْ فَضْلِهٖ ۚ— فَقَدْ اٰتَیْنَاۤ اٰلَ اِبْرٰهِیْمَ الْكِتٰبَ وَالْحِكْمَةَ وَاٰتَیْنٰهُمْ مُّلْكًا عَظِیْمًا ۟

ಜನರಿಗೆ ಅಲ್ಲಾಹು ತನ್ನ ಔದಾರ್ಯದಿಂದ ನೀಡಿದ್ದನ್ನು ಕಂಡು ಅವರಿಗೆ ಹೊಟ್ಟೆ ಉರಿಯುತ್ತಿದೆಯೇ? ಹಾಗಾದರೆ, ನಾವು ಇಬ್ರಾಹೀಮರ ಕುಟುಂಬಕ್ಕೆ ಗ್ರಂಥ ಮತ್ತು ವಿವೇಕವನ್ನು ನೀಡಿದ್ದೇವೆ. ಅವರಿಗೆ ನಾವು ಮಹಾ ಸಾಮ್ರಾಜ್ಯವನ್ನು ಕೂಡ ನೀಡಿದ್ದೇವೆ. info
التفاسير:

external-link copy
55 : 4

فَمِنْهُمْ مَّنْ اٰمَنَ بِهٖ وَمِنْهُمْ مَّنْ صَدَّ عَنْهُ ؕ— وَكَفٰی بِجَهَنَّمَ سَعِیْرًا ۟

ಅವರಲ್ಲಿ ಕೆಲವರು ಅದರಲ್ಲಿ (ಗ್ರಂಥದಲ್ಲಿ) ವಿಶ್ವಾಸವಿಡುತ್ತಾರೆ ಮತ್ತು ಅವರಲ್ಲಿ ಕೆಲವರು ಅದನ್ನು ದ್ವೇಷಿಸುತ್ತಾರೆ. ಅವರಿಗೆ ಧಗಧಗಿಸುವ ನರಕಾಗ್ನಿಯೇ ಸಾಕು. info
التفاسير:

external-link copy
56 : 4

اِنَّ الَّذِیْنَ كَفَرُوْا بِاٰیٰتِنَا سَوْفَ نُصْلِیْهِمْ نَارًا ؕ— كُلَّمَا نَضِجَتْ جُلُوْدُهُمْ بَدَّلْنٰهُمْ جُلُوْدًا غَیْرَهَا لِیَذُوْقُوا الْعَذَابَ ؕ— اِنَّ اللّٰهَ كَانَ عَزِیْزًا حَكِیْمًا ۟

ನಿಶ್ಚಯವಾಗಿಯೂ ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ—ಅವರನ್ನು ನಾವು ನರಕಾಗ್ನಿಯಲ್ಲಿ ಹಾಕಿ ಉರಿಸುವೆವು. ಅವರ ಚರ್ಮಗಳು ಬೆಂದು ಕರಟುವಾಗಲೆಲ್ಲಾ, ಅವರು ಶಿಕ್ಷೆಯನ್ನು ಅನುಭವಿಸುತ್ತಲೇ ಇರಲು, ನಾವು ಅವರಿಗೆ ಬೇರೆ ಚರ್ಮಗಳನ್ನು ಬದಲಿಯಾಗಿ ನೀಡುವೆವು. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير:

external-link copy
57 : 4

وَالَّذِیْنَ اٰمَنُوْا وَعَمِلُوا الصّٰلِحٰتِ سَنُدْخِلُهُمْ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَاۤ اَبَدًا ؕ— لَهُمْ فِیْهَاۤ اَزْوَاجٌ مُّطَهَّرَةٌ ؗ— وَّنُدْخِلُهُمْ ظِلًّا ظَلِیْلًا ۟

ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರನ್ನು ನಾವು ಸದ್ಯವೇ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವೆವು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಿ ಅವರಿಗೆ ಪರಿಶುದ್ಧ ಸಂಗಾತಿಗಳಿರುವರು. ನಾವು ಅವರನ್ನು ಶಾಶ್ವತ ನೆರಳಿಗೆ ಪ್ರವೇಶ ಮಾಡಿಸುವೆವು. info
التفاسير:

external-link copy
58 : 4

اِنَّ اللّٰهَ یَاْمُرُكُمْ اَنْ تُؤَدُّوا الْاَمٰنٰتِ اِلٰۤی اَهْلِهَا ۙ— وَاِذَا حَكَمْتُمْ بَیْنَ النَّاسِ اَنْ تَحْكُمُوْا بِالْعَدْلِ ؕ— اِنَّ اللّٰهَ نِعِمَّا یَعِظُكُمْ بِهٖ ؕ— اِنَّ اللّٰهَ كَانَ سَمِیْعًا بَصِیْرًا ۟

ನಂಬಿಕೆಯಿಂದ ನೀಡಲಾದ ವಸ್ತುಗಳನ್ನು ಅವುಗಳ ಹಕ್ಕುದಾರರಿಗೆ ಕೊಟ್ಟುಬಿಡಲು ಮತ್ತು ಜನರ ನಡುವೆ ತೀರ್ಪು ನೀಡುವಾಗ ನ್ಯಾಯವಾಗಿಯೇ ತೀರ್ಪು ನೀಡಲು ಅಲ್ಲಾಹು ನಿಮಗೆ ಆಜ್ಞಾಪಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ನಿಮಗೆ ನೀಡುವ ಉಪದೇಶವು ಬಹಳ ಉತ್ತಮವಾಗಿದೆ! ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ನೋಡುವವನಾಗಿದ್ದಾನೆ. info
التفاسير:

external-link copy
59 : 4

یٰۤاَیُّهَا الَّذِیْنَ اٰمَنُوْۤا اَطِیْعُوا اللّٰهَ وَاَطِیْعُوا الرَّسُوْلَ وَاُولِی الْاَمْرِ مِنْكُمْ ۚ— فَاِنْ تَنَازَعْتُمْ فِیْ شَیْءٍ فَرُدُّوْهُ اِلَی اللّٰهِ وَالرَّسُوْلِ اِنْ كُنْتُمْ تُؤْمِنُوْنَ بِاللّٰهِ وَالْیَوْمِ الْاٰخِرِ ؕ— ذٰلِكَ خَیْرٌ وَّاَحْسَنُ تَاْوِیْلًا ۟۠

ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಅನುಸರಿಸಿರಿ ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ನಿಮ್ಮ ಮೇಲೆ ಅಧಿಕಾರವಿರುವವರನ್ನೂ ಅನುಸರಿಸಿರಿ. ನಿಮ್ಮ ಮಧ್ಯೆ ಯಾವುದೇ ವಿಷಯದಲ್ಲಿ ಭಿನ್ನಮತವುಂಟಾದರೆ ಅದನ್ನು ಅಲ್ಲಾಹನಿಗೆ ಮತ್ತು ಸಂದೇಶವಾಹಕರಿಗೆ ಮರಳಿಸಿರಿ—ನೀವು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರಾಗಿದ್ದರೆ. ಅದು ಅತ್ಯುತ್ತಮ ಮಾರ್ಗವಾಗಿದ್ದು ಅತ್ಯುತ್ತಮ ಪರಿಣಾಮವನ್ನು ಹೊಂದಿದೆ. info
التفاسير: