Übersetzung der Bedeutungen von dem heiligen Quran - Die Kannada-Übersetzung - Hamza Batur.

Nummer der Seite:close

external-link copy
253 : 2

تِلْكَ الرُّسُلُ فَضَّلْنَا بَعْضَهُمْ عَلٰی بَعْضٍ ۘ— مِنْهُمْ مَّنْ كَلَّمَ اللّٰهُ وَرَفَعَ بَعْضَهُمْ دَرَجٰتٍ ؕ— وَاٰتَیْنَا عِیْسَی ابْنَ مَرْیَمَ الْبَیِّنٰتِ وَاَیَّدْنٰهُ بِرُوْحِ الْقُدُسِ ؕ— وَلَوْ شَآءَ اللّٰهُ مَا اقْتَتَلَ الَّذِیْنَ مِنْ بَعْدِهِمْ مِّنْ بَعْدِ مَا جَآءَتْهُمُ الْبَیِّنٰتُ وَلٰكِنِ اخْتَلَفُوْا فَمِنْهُمْ مَّنْ اٰمَنَ وَمِنْهُمْ مَّنْ كَفَرَ ؕ— وَلَوْ شَآءَ اللّٰهُ مَا اقْتَتَلُوْا ۫— وَلٰكِنَّ اللّٰهَ یَفْعَلُ مَا یُرِیْدُ ۟۠

ಆ ಸಂದೇಶವಾಹಕರಲ್ಲಿ ಕೆಲವರನ್ನು ನಾವು ಇತರ ಕೆಲವರಿಗಿಂತ ಶ್ರೇಷ್ಠಗೊಳಿಸಿದ್ದೇವೆ. ಅವರಲ್ಲಿ ಅಲ್ಲಾಹು (ನೇರವಾಗಿ) ಮಾತನಾಡಿದವರಿದ್ದಾರೆ. ಅವರಲ್ಲಿ ಕೆಲವರ ಪದವಿಗಳನ್ನು ಅವನು ಎತ್ತರಿಸಿದ್ದಾನೆ. ಮರ್ಯಮರ ಮಗ ಈಸಾರಿಗೆ ನಾವು ಪವಾಡಗಳನ್ನು ನೀಡಿದ್ದೇವೆ ಮತ್ತು ಪವಿತ್ರಾತ್ಮನ ಮೂಲಕ ಅವರನ್ನು ಬೆಂಬಲಿಸಿದ್ದೇವೆ. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರ ನಂತರದವರು ಅವರಿಗೆ ಸ್ಪಷ್ಟ ಸಾಕ್ಷ್ಯಾಧಾರಗಳು ಬಂದ ಬಳಿಕವೂ ಪರಸ್ಪರ ಹೊಡೆದಾಡುತ್ತಿರಲಿಲ್ಲ. ಆದರೆ ಅವರು ಭಿನ್ನಮತ ತಳೆದರು. ಅವರಲ್ಲಿ ಕೆಲವರು ಸತ್ಯವಿಶ್ವಾಸಿಗಳಾದರು ಮತ್ತು ಕೆಲವರು ಸತ್ಯನಿಷೇಧಿಗಳಾದರು. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರು ಪರಸ್ಪರ ಹೊಡೆದಾಡುತ್ತಿರಲಿಲ್ಲ. ಆದರೆ ಅಲ್ಲಾಹು ಅವನು ಬಯಸುವುದನ್ನು ಮಾಡುತ್ತಾನೆ. info
التفاسير:

external-link copy
254 : 2

یٰۤاَیُّهَا الَّذِیْنَ اٰمَنُوْۤا اَنْفِقُوْا مِمَّا رَزَقْنٰكُمْ مِّنْ قَبْلِ اَنْ یَّاْتِیَ یَوْمٌ لَّا بَیْعٌ فِیْهِ وَلَا خُلَّةٌ وَّلَا شَفَاعَةٌ ؕ— وَالْكٰفِرُوْنَ هُمُ الظّٰلِمُوْنَ ۟

ಓ ಸತ್ಯವಿಶ್ವಾಸಿಗಳೇ! ಯಾವುದೇ ವ್ಯವಹಾರ, ಗೆಳೆತನ ಅಥವಾ ಶಿಫಾರಸು ಇಲ್ಲದ ಒಂದು ದಿನ ಬರುವುದಕ್ಕೆ ಮೊದಲೇ ನಾವು ನಿಮಗೆ ಒದಗಿಸಿದ ಧನದಿಂದ ಖರ್ಚು ಮಾಡಿರಿ. ಸತ್ಯನಿಷೇಧಿಗಳೇ ಅಕ್ರಮಿಗಳು. info
التفاسير:

external-link copy
255 : 2

اَللّٰهُ لَاۤ اِلٰهَ اِلَّا هُوَ ۚ— اَلْحَیُّ الْقَیُّوْمُ ۚ۬— لَا تَاْخُذُهٗ سِنَةٌ وَّلَا نَوْمٌ ؕ— لَهٗ مَا فِی السَّمٰوٰتِ وَمَا فِی الْاَرْضِ ؕ— مَنْ ذَا الَّذِیْ یَشْفَعُ عِنْدَهٗۤ اِلَّا بِاِذْنِهٖ ؕ— یَعْلَمُ مَا بَیْنَ اَیْدِیْهِمْ وَمَا خَلْفَهُمْ ۚ— وَلَا یُحِیْطُوْنَ بِشَیْءٍ مِّنْ عِلْمِهٖۤ اِلَّا بِمَا شَآءَ ۚ— وَسِعَ كُرْسِیُّهُ السَّمٰوٰتِ وَالْاَرْضَ ۚ— وَلَا یَـُٔوْدُهٗ حِفْظُهُمَا ۚ— وَهُوَ الْعَلِیُّ الْعَظِیْمُ ۟

ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ನಿರಂತರ ಜೀವಿಸುವವನು ಮತ್ತು ಎಲ್ಲರನ್ನೂ ಸಂರಕ್ಷಿಸಿ ನಿಯಂತ್ರಿಸುವವನಾಗಿದ್ದಾನೆ. ತೂಕಡಿಕೆ ಅಥವಾ ನಿದ್ದೆ ಅವನನ್ನು ವಶಪಡಿಸುವುದಿಲ್ಲ. ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅವನಿಗೆ ಸೇರಿದ್ದು. ಅವನ ಅಪ್ಪಣೆಯಿಲ್ಲದೆ ಅವನ ಬಳಿ ಶಿಫಾರಸು ಮಾಡುವವನು ಯಾರು? ಅವರ ಮುಂದಿರುವುದನ್ನು ಮತ್ತು ಅವರ ಹಿಂದಿರುವುದನ್ನು ಅವನು ತಿಳಿಯುತ್ತಾನೆ. ಅವನ ಜ್ಞಾನದಿಂದ ಅವನು ಇಚ್ಛಿಸುವಷ್ಟನ್ನಲ್ಲದೆ (ಬೇರೇನನ್ನೂ) ತಿಳಿದುಕೊಳ್ಳಲು ಅವರಿಗೆ ಸಾಧ್ಯವಿಲ್ಲ. ಅವನ ಕುರ್ಸೀ ಭೂಮ್ಯಾಕಾಶಗಳನ್ನು ವ್ಯಾಪಿಸಿಕೊಂಡಿದೆ. ಅವುಗಳ ಸಂರಕ್ಷಣೆಯು ಅವನನ್ನು ಆಯಾಸಗೊಳಿಸುವುದಿಲ್ಲ. ಅವನು ಅತ್ಯುನ್ನತನು ಮತ್ತು ಮಹಾನನಾಗಿದ್ದಾನೆ .[1] info

[1] ಇದು ಆಯತುಲ್ ಕುರ್ಸಿ ಆಗಿದ್ದು ಹದೀಸ್ ಗಳಲ್ಲಿ ಇದರ ಅನೇಕ ಶ್ರೇಷ್ಠತೆಗಳ ಬಗ್ಗೆ ಉಲ್ಲೇಖಗಳಿವೆ.

التفاسير:

external-link copy
256 : 2

لَاۤ اِكْرَاهَ فِی الدِّیْنِ ۚ— قَدْ تَّبَیَّنَ الرُّشْدُ مِنَ الْغَیِّ ۚ— فَمَنْ یَّكْفُرْ بِالطَّاغُوْتِ وَیُؤْمِنْ بِاللّٰهِ فَقَدِ اسْتَمْسَكَ بِالْعُرْوَةِ الْوُثْقٰی ۗ— لَا انْفِصَامَ لَهَا ؕ— وَاللّٰهُ سَمِیْعٌ عَلِیْمٌ ۟

ಧರ್ಮದ ವಿಷಯದಲ್ಲಿ ಯಾವುದೇ ಬಲಾತ್ಕಾರವಿಲ್ಲ. ಸನ್ಮಾರ್ಗವು ದುರ್ಮಾರ್ಗದಿಂದ ಸ್ಪಷ್ಟವಾಗಿ ಬೇರ್ಪಟ್ಟಿದೆ. ಆದ್ದರಿಂದ ಯಾರು ಅಲ್ಲಾಹನ ಹೊರತಾದ ದೇವರುಗಳನ್ನು ನಿಷೇಧಿಸಿ ಅಲ್ಲಾಹನಲ್ಲಿ ಮಾತ್ರ ವಿಶ್ವಾಸವಿಡುತ್ತಾನೋ ಅವನು ಅತ್ಯಂತ ಬಲಿಷ್ಠ ಹಗ್ಗವನ್ನು ಹಿಡಿದುಕೊಂಡನು. ಅದು ಎಂದಿಗೂ ಕಡಿದು ಹೋಗುವುದಿಲ್ಲ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير: