Übersetzung der Bedeutungen von dem heiligen Quran - Die Kannada-Übersetzung - Hamza Batur.

Nummer der Seite:close

external-link copy
6 : 30

وَعْدَ اللّٰهِ ؕ— لَا یُخْلِفُ اللّٰهُ وَعْدَهٗ وَلٰكِنَّ اَكْثَرَ النَّاسِ لَا یَعْلَمُوْنَ ۟

ಇದು ಅಲ್ಲಾಹನ ವಾಗ್ದಾನವಾಗಿದೆ. ಅಲ್ಲಾಹು ಅವನ ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. info
التفاسير:

external-link copy
7 : 30

یَعْلَمُوْنَ ظَاهِرًا مِّنَ الْحَیٰوةِ الدُّنْیَا ۖۚ— وَهُمْ عَنِ الْاٰخِرَةِ هُمْ غٰفِلُوْنَ ۟

ಅವರು ಇಹಲೋಕ ಜೀವನದ ಬಹಿರಂಗ ವಿಷಯಗಳನ್ನು ಮಾತ್ರ ತಿಳಿದಿದ್ದಾರೆ. ಆದರೆ ಪರಲೋಕದ ಬಗ್ಗೆ ಅವರಿಗೆ ಯಾವುದೇ ಜ್ಞಾನವಿಲ್ಲ. info
التفاسير:

external-link copy
8 : 30

اَوَلَمْ یَتَفَكَّرُوْا فِیْۤ اَنْفُسِهِمْ ۫— مَا خَلَقَ اللّٰهُ السَّمٰوٰتِ وَالْاَرْضَ وَمَا بَیْنَهُمَاۤ اِلَّا بِالْحَقِّ وَاَجَلٍ مُّسَمًّی ؕ— وَاِنَّ كَثِیْرًا مِّنَ النَّاسِ بِلِقَآئِ رَبِّهِمْ لَكٰفِرُوْنَ ۟

ಅವರು ಸ್ವಯಂ ಆಲೋಚಿಸುವುದಿಲ್ಲವೇ? ಅಲ್ಲಾಹು ಭೂಮ್ಯಾಕಾಶಗಳನ್ನು ಹಾಗೂ ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಸತ್ಯ ಸಮೇತವಾಗಿ ಮತ್ತು ಒಂದು ನಿಶ್ಚಿತ ಅವಧಿಯವರೆಗೆ ಮಾತ್ರ ಸೃಷ್ಟಿಸಿದ್ದಾನೆ. ಜನರಲ್ಲಿ ಹೆಚ್ಚಿನವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವುದನ್ನು ನಿಷೇಧಿಸಿದವರಾಗಿದ್ದಾರೆ. info
التفاسير:

external-link copy
9 : 30

اَوَلَمْ یَسِیْرُوْا فِی الْاَرْضِ فَیَنْظُرُوْا كَیْفَ كَانَ عَاقِبَةُ الَّذِیْنَ مِنْ قَبْلِهِمْ ؕ— كَانُوْۤا اَشَدَّ مِنْهُمْ قُوَّةً وَّاَثَارُوا الْاَرْضَ وَعَمَرُوْهَاۤ اَكْثَرَ مِمَّا عَمَرُوْهَا وَجَآءَتْهُمْ رُسُلُهُمْ بِالْبَیِّنٰتِ ؕ— فَمَا كَانَ اللّٰهُ لِیَظْلِمَهُمْ وَلٰكِنْ كَانُوْۤا اَنْفُسَهُمْ یَظْلِمُوْنَ ۟ؕ

ಅವರು ಭೂಮಿಯಲ್ಲಿ ಸಂಚರಿಸಿ, ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅವರು ಇವರಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದರು. ಅವರು ಭೂಮಿಯನ್ನು ಉತ್ತು ಬೇಸಾಯ ಮಾಡಿದರು. ಅವರು ಇವರಿಗಿಂತಲೂ ಹೆಚ್ಚು ಭೂಮಿಯಲ್ಲಿ ವಾಸವಾಗಿದ್ದರು. ನಮ್ಮ ಸಂದೇಶವಾಹಕರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದರು. ಅಲ್ಲಾಹು ಅವರಿಗೆ ಯಾವುದೇ ಅನ್ಯಾಯ ಮಾಡಲಿಲ್ಲ. ಆದರೆ ಅವರು ಸ್ವತಃ ಅವರೊಂದಿಗೇ ಅನ್ಯಾಯವೆಸಗಿದರು. info
التفاسير:

external-link copy
10 : 30

ثُمَّ كَانَ عَاقِبَةَ الَّذِیْنَ اَسَآءُوا السُّوْٓاٰۤی اَنْ كَذَّبُوْا بِاٰیٰتِ اللّٰهِ وَكَانُوْا بِهَا یَسْتَهْزِءُوْنَ ۟۠

ನಂತರ, ದುಷ್ಕರ್ಮವೆಸಗಿದವರ ಅಂತ್ಯವು ಅತ್ಯಂತ ದುಸ್ತರವಾಗಿತ್ತು. ಏಕೆಂದರೆ ಅವರು ಅಲ್ಲಾಹನ ವಚನಗಳನ್ನು ನಿಷೇಧಿಸಿದರು ಮತ್ತು ಅವುಗಳನ್ನು ತಮಾಷೆ ಮಾಡುತ್ತಿದ್ದರು. info
التفاسير:

external-link copy
11 : 30

اَللّٰهُ یَبْدَؤُا الْخَلْقَ ثُمَّ یُعِیْدُهٗ ثُمَّ اِلَیْهِ تُرْجَعُوْنَ ۟

ಅಲ್ಲಾಹು ಪ್ರಥಮ ಬಾರಿಗೆ ಸೃಷ್ಟಿಸುತ್ತಾನೆ. ನಂತರ ಅದನ್ನು ಪುನರಾವರ್ತಿಸುತ್ತಾನೆ. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. info
التفاسير:

external-link copy
12 : 30

وَیَوْمَ تَقُوْمُ السَّاعَةُ یُبْلِسُ الْمُجْرِمُوْنَ ۟

ಅಂತ್ಯಸಮಯವು ಸಂಭವಿಸುವ ದಿನ ಅಪರಾಧಿಗಳು ಹತಾಶರಾಗುವರು. info
التفاسير:

external-link copy
13 : 30

وَلَمْ یَكُنْ لَّهُمْ مِّنْ شُرَكَآىِٕهِمْ شُفَعٰٓؤُا وَكَانُوْا بِشُرَكَآىِٕهِمْ كٰفِرِیْنَ ۟

ಅವರು ಅಲ್ಲಾಹನೊಂದಿಗೆ ಸಹಭಾಗಿಗಳನ್ನಾಗಿ ಮಾಡಿದವರಲ್ಲಿ (ದೇವರುಗಳಲ್ಲಿ) ಯಾರೂ ಕೂಡ ಅವರಿಗೆ ಶಿಫಾರಸು ಮಾಡುವುದಿಲ್ಲ. ಸ್ವತಃ ಅವರೇ ಆ ಸಹಭಾಗಿಗಳನ್ನು ನಿಷೇಧಿಸುವರು. info
التفاسير:

external-link copy
14 : 30

وَیَوْمَ تَقُوْمُ السَّاعَةُ یَوْمَىِٕذٍ یَّتَفَرَّقُوْنَ ۟

ಅಂತ್ಯಸಮಯವು ಸಂಭವಿಸುವ ದಿನ. ಅಂದು ಅವರು ಪರಸ್ಪರ ಬೇರ್ಪಡುವರು. info
التفاسير:

external-link copy
15 : 30

فَاَمَّا الَّذِیْنَ اٰمَنُوْا وَعَمِلُوا الصَّلِحٰتِ فَهُمْ فِیْ رَوْضَةٍ یُّحْبَرُوْنَ ۟

ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರು ಉದ್ಯಾನವನದಲ್ಲಿ ಆನಂದದಿಂದ ನಲಿದಾಡುವರು. info
التفاسير: