Übersetzung der Bedeutungen von dem heiligen Quran - Die Kannada-Übersetzung - Hamza Batur.

Nummer der Seite:close

external-link copy
33 : 30

وَاِذَا مَسَّ النَّاسَ ضُرٌّ دَعَوْا رَبَّهُمْ مُّنِیْبِیْنَ اِلَیْهِ ثُمَّ اِذَاۤ اَذَاقَهُمْ مِّنْهُ رَحْمَةً اِذَا فَرِیْقٌ مِّنْهُمْ بِرَبِّهِمْ یُشْرِكُوْنَ ۟ۙ

ಜನರಿಗೆ ಏನಾದರೂ ತೊಂದರೆಯುಂಟಾದರೆ, ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ಸಂಪೂರ್ಣವಾಗಿ ತಿರುಗಿ ಅವನನ್ನು ಕರೆದು ಪ್ರಾರ್ಥಿಸುತ್ತಾರೆ. ನಂತರ ಅಲ್ಲಾಹು ಅವರಿಗೆ ತನ್ನ ದಯೆಯ ರುಚಿಯನ್ನು ತೋರಿಸಿದರೆ, ಅವರಲ್ಲೊಂದು ಗುಂಪು ತಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಸಹಭಾಗಿತ್ವ (ಶಿರ್ಕ್) ಮಾಡುತ್ತಾರೆ. info
التفاسير:

external-link copy
34 : 30

لِیَكْفُرُوْا بِمَاۤ اٰتَیْنٰهُمْ ؕ— فَتَمَتَّعُوْا ۥ— فَسَوْفَ تَعْلَمُوْنَ ۟

ನಾವು ಅವರಿಗೆ ದಯಪಾಲಿಸಿದ ಅನುಗ್ರಹಗಳಿಗೆ ಕೃತಘ್ನತೆ ತೋರಲೆಂದು! ಸರಿ, ನೀವು ಆನಂದಿಸಿ. ಸದ್ಯವೇ ನಿಮಗೆ ತಿಳಿಯಲಿದೆ. info
التفاسير:

external-link copy
35 : 30

اَمْ اَنْزَلْنَا عَلَیْهِمْ سُلْطٰنًا فَهُوَ یَتَكَلَّمُ بِمَا كَانُوْا بِهٖ یُشْرِكُوْنَ ۟

ನಾವು ಅವರಿಗೆ ಏನಾದರೂ ಸಾಕ್ಷ್ಯಾಧಾರವನ್ನು ಅವತೀರ್ಣಗೊಳಿಸಿದ್ದು, ಅದು ಅವರು ಮಾಡುತ್ತಿರುವ ಸಹಭಾಗಿತ್ವದ (ಶಿರ್ಕ್‌) ಬಗ್ಗೆ ಮಾತನಾಡುತ್ತದೆಯೇ? info
التفاسير:

external-link copy
36 : 30

وَاِذَاۤ اَذَقْنَا النَّاسَ رَحْمَةً فَرِحُوْا بِهَا ؕ— وَاِنْ تُصِبْهُمْ سَیِّئَةٌ بِمَا قَدَّمَتْ اَیْدِیْهِمْ اِذَا هُمْ یَقْنَطُوْنَ ۟

ನಾವು ಮನುಷ್ಯರಿಗೆ ದಯೆಯ ರುಚಿಯನ್ನು ತೋರಿಸಿದರೆ ಅವರು ಸಂತೋಷಪಡುತ್ತಾರೆ. ಆದರೆ, ಅವರ ಕೈಗಳು ಮುಂದಕ್ಕೆ ಕಳುಹಿಸಿರುವ ದುಷ್ಕರ್ಮಗಳ ಕಾರಣದಿಂದ ಅವರಿಗೇನಾದರೂ ಅನಾಹುತ ಸಂಭವಿಸಿದರೆ ಅಗೋ! ಅವರು ಹತಾಶರಾಗಿ ಬಿಡುತ್ತಾರೆ. info
التفاسير:

external-link copy
37 : 30

اَوَلَمْ یَرَوْا اَنَّ اللّٰهَ یَبْسُطُ الرِّزْقَ لِمَنْ یَّشَآءُ وَیَقْدِرُ ؕ— اِنَّ فِیْ ذٰلِكَ لَاٰیٰتٍ لِّقَوْمٍ یُّؤْمِنُوْنَ ۟

ಅಲ್ಲಾಹು ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆಂದು ಅವರು ನೋಡಿಲ್ಲವೇ?ನಿಶ್ಚಯವಾಗಿಯೂ ವಿಶ್ವಾಸವಿಡುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ. info
التفاسير:

external-link copy
38 : 30

فَاٰتِ ذَا الْقُرْبٰى حَقَّهٗ وَالْمِسْكِیْنَ وَابْنَ السَّبِیْلِ ؕ— ذٰلِكَ خَیْرٌ لِّلَّذِیْنَ یُرِیْدُوْنَ وَجْهَ اللّٰهِ ؗ— وَاُولٰٓىِٕكَ هُمُ الْمُفْلِحُوْنَ ۟

ಆದ್ದರಿಂದ ನೀವು ಕುಟುಂಬ ಸಂಬಂಧಿಕರಿಗೆ ಅವರ ಹಕ್ಕನ್ನು ನೀಡಿರಿ. ಬಡವರಿಗೂ, ಪ್ರಯಾಣಿಕರಿಗೂ (ಅವರ ಹಕ್ಕನ್ನು ನೀಡಿರಿ). ಅಲ್ಲಾಹನ ಮುಖವನ್ನು ಬಯಸುವವರಿಗೆ ಅದು ಉತ್ತಮವಾಗಿದೆ. ಅವರೇ ಯಶಸ್ವಿಯಾದವರು. info
التفاسير:

external-link copy
39 : 30

وَمَاۤ اٰتَیْتُمْ مِّنْ رِّبًا لِّیَرْبُوَاۡ فِیْۤ اَمْوَالِ النَّاسِ فَلَا یَرْبُوْا عِنْدَ اللّٰهِ ۚ— وَمَاۤ اٰتَیْتُمْ مِّنْ زَكٰوةٍ تُرِیْدُوْنَ وَجْهَ اللّٰهِ فَاُولٰٓىِٕكَ هُمُ الْمُضْعِفُوْنَ ۟

ಜನರ ಧನದಲ್ಲಿ ಹೆಚ್ಚಾಗುತ್ತಾ ಇರಲು ನೀವು ಏನನ್ನು ಬಡ್ಡಿಗೆ ನೀಡುತ್ತೀರೋ ಅದು ಅಲ್ಲಾಹನ ಬಳಿ ಹೆಚ್ಚಾಗುವುದಿಲ್ಲ. ಆದರೆ ನೀವು ಅಲ್ಲಾಹನ ಮುಖವನ್ನು ಬಯಸಿ ನೀಡುವ ಝಕಾತ್—ಅವರೇ ಇಮ್ಮಡಿ ಪ್ರತಿಫಲವನ್ನು ಪಡೆಯುವವರು. info
التفاسير:

external-link copy
40 : 30

اَللّٰهُ الَّذِیْ خَلَقَكُمْ ثُمَّ رَزَقَكُمْ ثُمَّ یُمِیْتُكُمْ ثُمَّ یُحْیِیْكُمْ ؕ— هَلْ مِنْ شُرَكَآىِٕكُمْ مَّنْ یَّفْعَلُ مِنْ ذٰلِكُمْ مِّنْ شَیْءٍ ؕ— سُبْحٰنَهٗ وَتَعٰلٰى عَمَّا یُشْرِكُوْنَ ۟۠

ಅಲ್ಲಾಹನೇ ನಿಮ್ಮನ್ನು ಸೃಷ್ಟಿಸಿದವನು. ನಂತರ ಅವನು ನಿಮಗೆ ಉಪಜೀವನವನ್ನು ಒದಗಿಸಿದನು. ನಂತರ ಅವನು ನಿಮ್ಮನ್ನು ಮೃತಪಡಿಸುತ್ತಾನೆ. ನಂತರ ಪುನಃ ನಿಮಗೆ ಜೀವವನ್ನು ನೀಡುತ್ತಾನೆ. ನೀವು ಅಲ್ಲಾಹನೊಂದಿಗೆ ಸಹಭಾಗಿಗಳಾಗಿ ಮಾಡಿದವರಲ್ಲಿ (ನಿಮ್ಮ ದೇವರುಗಳಲ್ಲಿ) ಯಾರಾದರೂ ಒಬ್ಬರು ಇವುಗಳಲ್ಲಿ ಯಾವುದಾದರೂ ಒಂದನ್ನು ಮಾಡುವರೇ? ಅವರು ಮಾಡುವ ಸಹಭಾಗಿತ್ವದಿಂದ (ಶಿರ್ಕ್‌ನಿಂದ) ಅಲ್ಲಾಹು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ. info
التفاسير:

external-link copy
41 : 30

ظَهَرَ الْفَسَادُ فِی الْبَرِّ وَالْبَحْرِ بِمَا كَسَبَتْ اَیْدِی النَّاسِ لِیُذِیْقَهُمْ بَعْضَ الَّذِیْ عَمِلُوْا لَعَلَّهُمْ یَرْجِعُوْنَ ۟

ಮನುಷ್ಯರು ಮಾಡಿದ ದುಷ್ಕರ್ಮಗಳ ಕಾರಣದಿಂದ ನೆಲದಲ್ಲೂ, ಕಡಲಲ್ಲೂ ವಿನಾಶವು ಹರಡಿಕೊಂಡಿದೆ. ಅವರು ಮಾಡಿದ ಕೆಲವು ಕರ್ಮಗಳ ರುಚಿಯನ್ನು ಅವರಿಗೆ ತೋರಿಸಲೆಂದು. ಅವರು (ಸತ್ಯಮಾರ್ಗಕ್ಕೆ) ಮರಳಿ ಬರುವುದಕ್ಕಾಗಿ. info
التفاسير: