Translation of the Meanings of the Noble Qur'an - Kannada translation - Hamza Butur

Page Number:close

external-link copy
144 : 7

قَالَ یٰمُوْسٰۤی اِنِّی اصْطَفَیْتُكَ عَلَی النَّاسِ بِرِسٰلٰتِیْ وَبِكَلَامِیْ ۖؗ— فَخُذْ مَاۤ اٰتَیْتُكَ وَكُنْ مِّنَ الشّٰكِرِیْنَ ۟

ಅಲ್ಲಾಹು ಹೇಳಿದನು: “ಓ ಮೂಸಾ! ನಿಶ್ಚಯವಾಗಿಯೂ ಮನುಷ್ಯರ ಪೈಕಿ ನಾನು ನಿಮ್ಮನ್ನು ನನ್ನ ಸಂದೇಶಗಳಿಂದ ಮತ್ತು ನನ್ನ (ನೇರ) ಮಾತಿನಿಂದ ಆರಿಸಿದ್ದೇನೆ. ಆದ್ದರಿಂದ ನಾನು ನಿಮಗೆ ನೀಡಿದ್ದನ್ನು ಬಿಗಿಯಾಗಿ ಹಿಡಿದುಕೊಳ್ಳಿ ಮತ್ತು ಕೃತಜ್ಞರಾಗಿರುವ ಜನರಲ್ಲಿ ಸೇರಿಕೊಳ್ಳಿ.” info
التفاسير:

external-link copy
145 : 7

وَكَتَبْنَا لَهٗ فِی الْاَلْوَاحِ مِنْ كُلِّ شَیْءٍ مَّوْعِظَةً وَّتَفْصِیْلًا لِّكُلِّ شَیْءٍ ۚ— فَخُذْهَا بِقُوَّةٍ وَّاْمُرْ قَوْمَكَ یَاْخُذُوْا بِاَحْسَنِهَا ؕ— سَاُورِیْكُمْ دَارَ الْفٰسِقِیْنَ ۟

ನಾವು ಅವರಿಗೆ (ಮೂಸಾರಿಗೆ) ಹಲಗೆಗಳಲ್ಲಿ ಎಲ್ಲವನ್ನೂ—ಹಿತೋಪದೇಶ ಮತ್ತು ಎಲ್ಲಾ ವಿಷಯಗಳ ವಿವರಣೆಯನ್ನು—ಬರೆದುಕೊಟ್ಟೆವು. (ನಾವು ಹೇಳಿದೆವು): “ಇದನ್ನು ಬಿಗಿಯಾಗಿ ಹಿಡಿದುಕೊಳ್ಳಿ ಮತ್ತು ಇದರಲ್ಲಿರುವ ಉತ್ತಮ ವಿಷಯಗಳನ್ನು ಸ್ವೀಕರಿಸಲು ನಿಮ್ಮ ಜನರಿಗೆ ಆದೇಶಿಸಿರಿ. ದುಷ್ಕರ್ಮಿಗಳ ವಾಸ್ತವ್ಯವನ್ನು ನಾನು ಸದ್ಯವೇ ನಿಮಗೆ ತೋರಿಸಿಕೊಡುವೆನು.” info
التفاسير:

external-link copy
146 : 7

سَاَصْرِفُ عَنْ اٰیٰتِیَ الَّذِیْنَ یَتَكَبَّرُوْنَ فِی الْاَرْضِ بِغَیْرِ الْحَقِّ ؕ— وَاِنْ یَّرَوْا كُلَّ اٰیَةٍ لَّا یُؤْمِنُوْا بِهَا ۚ— وَاِنْ یَّرَوْا سَبِیْلَ الرُّشْدِ لَا یَتَّخِذُوْهُ سَبِیْلًا ۚ— وَاِنْ یَّرَوْا سَبِیْلَ الْغَیِّ یَتَّخِذُوْهُ سَبِیْلًا ؕ— ذٰلِكَ بِاَنَّهُمْ كَذَّبُوْا بِاٰیٰتِنَا وَكَانُوْا عَنْهَا غٰفِلِیْنَ ۟

ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರಪಡುವವರನ್ನು ನಾನು ನನ್ನ ವಚನಗಳಿಂದ ತಿರುಗಿಸಿಬಿಡುವೆನು. ಅವರು ದೃಷ್ಟಾಂತಗಳೆಲ್ಲವನ್ನು ನೋಡಿದರೂ ಸಹ ಅದರಲ್ಲಿ ವಿಶ್ವಾಸವಿಡುವುದಿಲ್ಲ. ಅವರು ಒಳಿತಿನ ಮಾರ್ಗವನ್ನು ಕಂಡರೆ ಅದನ್ನು ತಮ್ಮ ಮಾರ್ಗವಾಗಿ ಸ್ವೀಕರಿಸುವುದಿಲ್ಲ. ಅವರು ಕೆಟ್ಟ ಮಾರ್ಗವನ್ನು ಕಂಡರೆ ಅದನ್ನು ತಮ್ಮ ಮಾರ್ಗವಾಗಿ ಸ್ವೀಕರಿಸುತ್ತಾರೆ. ಅದೇಕೆಂದರೆ, ಅವರು ನಮ್ಮ ವಚನಗಳನ್ನು ನಿಷೇಧಿಸುತ್ತಿದ್ದರು ಮತ್ತು ಅವುಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದರು. info
التفاسير:

external-link copy
147 : 7

وَالَّذِیْنَ كَذَّبُوْا بِاٰیٰتِنَا وَلِقَآءِ الْاٰخِرَةِ حَبِطَتْ اَعْمَالُهُمْ ؕ— هَلْ یُجْزَوْنَ اِلَّا مَا كَانُوْا یَعْمَلُوْنَ ۟۠

ನಮ್ಮ ವಚನಗಳನ್ನು ಮತ್ತು ಪರಲೋಕದ ಭೇಟಿಯನ್ನು ನಿಷೇಧಿಸಿದವರು ಯಾರೋ—ಅವರ ಕರ್ಮಗಳು ನಿಷ್ಫಲವಾಗಿವೆ. ಅವರಿಗೆ ಅವರು ಮಾಡಿದ ಕರ್ಮಗಳ ಪ್ರತಿಫಲವನ್ನಲ್ಲದೆ ಬೇರೇನಾದರೂ ನೀಡಲಾಗುವುದೇ? info
التفاسير:

external-link copy
148 : 7

وَاتَّخَذَ قَوْمُ مُوْسٰی مِنْ بَعْدِهٖ مِنْ حُلِیِّهِمْ عِجْلًا جَسَدًا لَّهٗ خُوَارٌ ؕ— اَلَمْ یَرَوْا اَنَّهٗ لَا یُكَلِّمُهُمْ وَلَا یَهْدِیْهِمْ سَبِیْلًا ۘ— اِتَّخَذُوْهُ وَكَانُوْا ظٰلِمِیْنَ ۟

ಮೂಸಾರ ನಿರ್ಗಮನದ ಬಳಿಕ ಅವರ ಜನರು (ಇಸ್ರಾಯೇಲ್ ಮಕ್ಕಳು) ತಮ್ಮ ಆಭರಣಗಳಿಂದ ಧ್ವನಿ ಹೊರಡಿಸುವ ಒಂದು ಕರುವಿನ ರೂಪವನ್ನು (ದೇವರಾಗಿ) ಮಾಡಿಕೊಂಡರು. ಅದು ಅವರೊಡನೆ ಮಾತನಾಡುವುದಿಲ್ಲ ಮತ್ತು ಅವರಿಗೆ ಸನ್ಮಾರ್ಗ ತೋರಿಸುವುದಿಲ್ಲವೆಂದು ಅವರಿಗೆ ತಿಳಿದಿಲ್ಲವೇ? ಅವರು ಅದನ್ನು (ದೇವರಾಗಿ) ಮಾಡಿಕೊಂಡರು. ಅವರು ಅಕ್ರಮಿಗಳಾಗಿದ್ದರು. info
التفاسير:

external-link copy
149 : 7

وَلَمَّا سُقِطَ فِیْۤ اَیْدِیْهِمْ وَرَاَوْا اَنَّهُمْ قَدْ ضَلُّوْا ۙ— قَالُوْا لَىِٕنْ لَّمْ یَرْحَمْنَا رَبُّنَا وَیَغْفِرْ لَنَا لَنَكُوْنَنَّ مِنَ الْخٰسِرِیْنَ ۟

(ನಂತರ ತಮ್ಮ ತಪ್ಪನ್ನು ಅರಿತು) ಅವರು ಮರುಗಿದಾಗ, ಮತ್ತು ಅವರು ದಾರಿತಪ್ಪಿದ್ದಾರೆಂದು ಅವರಿಗೆ ಮನವರಿಕೆಯಾದಾಗ, ಅವರು ಹೇಳಿದರು: “ನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ದಯೆ ತೋರದಿದ್ದರೆ ಮತ್ತು ನಮ್ಮನ್ನು ಕ್ಷಮಿಸದಿದ್ದರೆ, ನಿಶ್ಚಯವಾಗಿಯೂ ನಾವು ನಷ್ಟಹೊಂದಿದವರಲ್ಲಿ ಸೇರುವೆವು.” info
التفاسير: