Traducción de los significados del Sagrado Corán - Traducción al Canarés- Hamza Batur

Número de página:close

external-link copy
12 : 60

یٰۤاَیُّهَا النَّبِیُّ اِذَا جَآءَكَ الْمُؤْمِنٰتُ یُبَایِعْنَكَ عَلٰۤی اَنْ لَّا یُشْرِكْنَ بِاللّٰهِ شَیْـًٔا وَّلَا یَسْرِقْنَ وَلَا یَزْنِیْنَ وَلَا یَقْتُلْنَ اَوْلَادَهُنَّ وَلَا یَاْتِیْنَ بِبُهْتَانٍ یَّفْتَرِیْنَهٗ بَیْنَ اَیْدِیْهِنَّ وَاَرْجُلِهِنَّ وَلَا یَعْصِیْنَكَ فِیْ مَعْرُوْفٍ فَبَایِعْهُنَّ وَاسْتَغْفِرْ لَهُنَّ اللّٰهَ ؕ— اِنَّ اللّٰهَ غَفُوْرٌ رَّحِیْمٌ ۟

ಓ ಪ್ರವಾದಿಯವರೇ! ಮಹಿಳೆಯರು ನಿಮ್ಮ ಬಳಿಗೆ ಬಂದು, ಅವರು ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದಿಲ್ಲ, ಕಳ್ಳತನ ಮಾಡುವುದಿಲ್ಲ, ವ್ಯಭಿಚಾರ ಮಾಡುವುದಿಲ್ಲ, ತಮ್ಮ ಮಕ್ಕಳನ್ನು ಕೊಲ್ಲುವುದಿಲ್ಲ, ತಮ್ಮ ಕೈಕಾಲುಗಳ ಮುಂದೆ ಸುಳ್ಳಾರೋಪವನ್ನು ಸೃಷ್ಟಿಸಿ ತರುವುದಿಲ್ಲ ಮತ್ತು ಒಳಿತಿನ ಕಾರ್ಯದಲ್ಲಿ ನಿಮಗೆ ಅವಿಧೇಯತೆ ತೋರುವುದಿಲ್ಲ ಎಂದು ಹೇಳುತ್ತಾ ಪ್ರತಿಜ್ಞೆ ಮಾಡಿದರೆ, ಅವರ ಪ್ರತಿಜ್ಞೆಯನ್ನು ಸ್ವೀಕರಿಸಿರಿ ಮತ್ತು ಅವರಿಗೋಸ್ಕರ ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير:

external-link copy
13 : 60

یٰۤاَیُّهَا الَّذِیْنَ اٰمَنُوْا لَا تَتَوَلَّوْا قَوْمًا غَضِبَ اللّٰهُ عَلَیْهِمْ قَدْ یَىِٕسُوْا مِنَ الْاٰخِرَةِ كَمَا یَىِٕسَ الْكُفَّارُ مِنْ اَصْحٰبِ الْقُبُوْرِ ۟۠

ಓ ಸತ್ಯವಿಶ್ವಾಸಿಗಳೇ! ಅಲ್ಲಾಹನ ಕೋಪಕ್ಕೆ ಪಾತ್ರರಾದ ಜನರೊಡನೆ ಮೈತ್ರಿ ಮಾಡಿಕೊಳ್ಳಬೇಡಿ. ಅವರು ಪರಲೋಕದ ವಿಷಯದಲ್ಲಿ ನಿರಾಶರಾಗಿದ್ದಾರೆ. ಸಮಾಧಿಯಲ್ಲಿರುವ ಜನರ ಬಗ್ಗೆ ಸತ್ಯನಿಷೇಧಿಗಳು ನಿರಾಶರಾದಂತೆ. info
التفاسير: