Traducción de los significados del Sagrado Corán - Traducción al Canarés- Hamza Batur

Número de página:close

external-link copy
82 : 7

وَمَا كَانَ جَوَابَ قَوْمِهٖۤ اِلَّاۤ اَنْ قَالُوْۤا اَخْرِجُوْهُمْ مِّنْ قَرْیَتِكُمْ ۚ— اِنَّهُمْ اُنَاسٌ یَّتَطَهَّرُوْنَ ۟

ಆಗ ಅವರ ಜನರ ಉತ್ತರವು, “ಇವರನ್ನು ನಿಮ್ಮ ಊರಿನಿಂದ ಓಡಿಸಿರಿ; ಇವರು ಪರಿಶುದ್ಧ ಜನರಾಗಿದ್ದಾರೆ!” ಎಂದು ಹೇಳುವುದಲ್ಲದೆ ಬೇರೇನೂ ಆಗಿರಲಿಲ್ಲ. info
التفاسير:

external-link copy
83 : 7

فَاَنْجَیْنٰهُ وَاَهْلَهٗۤ اِلَّا امْرَاَتَهٗ ۖؗ— كَانَتْ مِنَ الْغٰبِرِیْنَ ۟

ನಂತರ ನಾವು ಅವರನ್ನು ಮತ್ತು ಅವರ ಕುಟುಂಬವನ್ನು ರಕ್ಷಿಸಿದೆವು. ಅವರ ಪತ್ನಿಯ ಹೊರತು. ಆಕೆ ಶಿಕ್ಷೆಗೆ ಗುರಿಯಾದವರಲ್ಲಿ ಸೇರಿದವಳಾದಳು. info
التفاسير:

external-link copy
84 : 7

وَاَمْطَرْنَا عَلَیْهِمْ مَّطَرًا ؕ— فَانْظُرْ كَیْفَ كَانَ عَاقِبَةُ الْمُجْرِمِیْنَ ۟۠

ನಾವು ಅವರ ಮೇಲೆ (ಕಲ್ಲಿನ) ಮಳೆಯನ್ನು ಸುರಿಸಿದೆವು. ಅಪರಾಧಿಗಳ ಅಂತ್ಯವು ಹೇಗಿತ್ತೆಂದು ನೋಡಿ. info
التفاسير:

external-link copy
85 : 7

وَاِلٰی مَدْیَنَ اَخَاهُمْ شُعَیْبًا ؕ— قَالَ یٰقَوْمِ اعْبُدُوا اللّٰهَ مَا لَكُمْ مِّنْ اِلٰهٍ غَیْرُهٗ ؕ— قَدْ جَآءَتْكُمْ بَیِّنَةٌ مِّنْ رَّبِّكُمْ فَاَوْفُوا الْكَیْلَ وَالْمِیْزَانَ وَلَا تَبْخَسُوا النَّاسَ اَشْیَآءَهُمْ وَلَا تُفْسِدُوْا فِی الْاَرْضِ بَعْدَ اِصْلَاحِهَا ؕ— ذٰلِكُمْ خَیْرٌ لَّكُمْ اِنْ كُنْتُمْ مُّؤْمِنِیْنَ ۟ۚ

ಮದ್ಯನ್ ಗೋತ್ರದವರ ಬಳಿಗೆ ಅವರ ಸಹೋದರ ಶುಐಬರನ್ನು (ನಾವು ಕಳುಹಿಸಿದೆವು). ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ನಿಮಗೆ ಅವನ ಹೊರತು ಬೇರೆ ದೇವರಿಲ್ಲ. ನಿಶ್ಚಯವಾಗಿಯೂ ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸ್ಪಷ್ಟ ಸಾಕ್ಷ್ಯಾಧಾರಗಳು ಬಂದಿವೆ. ನೀವು ಅಳತೆ ಮತ್ತು ತೂಕವನ್ನು ಪೂರ್ತಿಯಾಗಿ ನೀಡಿರಿ. ಜನರಿಗೆ ಅವರ ಸಾಮಗ್ರಿಗಳನ್ನು ಕಡಿಮೆಗೊಳಿಸಬೇಡಿ. ಭೂಮಿಯಲ್ಲಿ ಸುಧಾರಣೆ ಮಾಡಿದ ಬಳಿಕ ಅಲ್ಲಿ ಕಿಡಿಗೇಡಿತನ ಮಾಡಬೇಡಿ. ಇದು ನಿಮಗೆ ಉತ್ತಮವಾಗಿದೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ. info
التفاسير:

external-link copy
86 : 7

وَلَا تَقْعُدُوْا بِكُلِّ صِرَاطٍ تُوْعِدُوْنَ وَتَصُدُّوْنَ عَنْ سَبِیْلِ اللّٰهِ مَنْ اٰمَنَ بِهٖ وَتَبْغُوْنَهَا عِوَجًا ۚ— وَاذْكُرُوْۤا اِذْ كُنْتُمْ قَلِیْلًا فَكَثَّرَكُمْ ۪— وَانْظُرُوْا كَیْفَ كَانَ عَاقِبَةُ الْمُفْسِدِیْنَ ۟

ಅಲ್ಲಾಹನಲ್ಲಿ ವಿಶ್ವಾಸವಿಟ್ಟವರನ್ನು ಬೆದರಿಸಲು, ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯಲು ಮತ್ತು ಆ ಮಾರ್ಗದಲ್ಲಿ ವಕ್ರತೆಯನ್ನು ಹುಡುಕಲು ನೀವು ದಾರಿಗಳಲ್ಲಿ ಕುಳಿತುಕೊಳ್ಳಬೇಡಿ. ನೀವು ಕಡಿಮೆ ಸಂಖ್ಯೆಯಲ್ಲಿದ್ದಿರಿ. ನಂತರ ಅವನು ನಿಮ್ಮ ಸಂಖ್ಯೆಯನ್ನು ಹೆಚ್ಚಿಸಿದ್ದನ್ನು ಸ್ಮರಿಸಿರಿ. ಕಿಡಿಗೇಡಿಗಳ ಅಂತ್ಯವು ಹೇಗಿತ್ತೆಂದು ನೋಡಿ. info
التفاسير:

external-link copy
87 : 7

وَاِنْ كَانَ طَآىِٕفَةٌ مِّنْكُمْ اٰمَنُوْا بِالَّذِیْۤ اُرْسِلْتُ بِهٖ وَطَآىِٕفَةٌ لَّمْ یُؤْمِنُوْا فَاصْبِرُوْا حَتّٰی یَحْكُمَ اللّٰهُ بَیْنَنَا ۚ— وَهُوَ خَیْرُ الْحٰكِمِیْنَ ۟

ನಿಮ್ಮಲ್ಲಿ ಒಂದು ಗುಂಪು ನನ್ನೊಂದಿಗೆ ಕಳುಹಿಸಲಾದ ಸಂದೇಶದಲ್ಲಿ ವಿಶ್ವಾಸವಿಟ್ಟು ಇನ್ನೊಂದು ಗುಂಪು ಅದರಲ್ಲಿ ವಿಶ್ವಾಸವಿಡದಿದ್ದರೆ—ಅಲ್ಲಾಹು ನಮ್ಮ ಮಧ್ಯೆ ತೀರ್ಪು ನೀಡುವ ತನಕ ತಾಳ್ಮೆಯಿಂದ ಕಾಯಿರಿ. ಅವನು ತೀರ್ಪು ನೀಡುವವರಲ್ಲಿ ಅತ್ಯುತ್ತಮನಾಗಿದ್ದಾನೆ.” info
التفاسير: