ترجمهٔ معانی قرآن کریم - ترجمه‌ى كناديى - حمزه بتور

ಲುಕ್ಮಾನ್

external-link copy
1 : 31

الٓمّٓ ۟ۚ

ಅಲಿಫ್-ಲಾಮ್-ಮೀಮ್. info
التفاسير:

external-link copy
2 : 31

تِلْكَ اٰیٰتُ الْكِتٰبِ الْحَكِیْمِ ۟ۙ

ಇವು ವಿವೇಕಪೂರ್ಣ ಗ್ರಂಥದ ವಚನಗಳಾಗಿವೆ. info
التفاسير:

external-link copy
3 : 31

هُدًی وَّرَحْمَةً لِّلْمُحْسِنِیْنَ ۟ۙ

ಇದು ಒಳಿತು ಮಾಡುವವರಿಗೆ ಮಾರ್ಗದರ್ಶಿ ಮತ್ತು ದಯೆಯಾಗಿದೆ. info
التفاسير:

external-link copy
4 : 31

الَّذِیْنَ یُقِیْمُوْنَ الصَّلٰوةَ وَیُؤْتُوْنَ الزَّكٰوةَ وَهُمْ بِالْاٰخِرَةِ هُمْ یُوْقِنُوْنَ ۟ؕ

ಅವರು (ಒಳಿತು ಮಾಡುವವರು) ಯಾರೆಂದರೆ ನಮಾಝನ್ನು ಸಂಸ್ಥಾಪಿಸುವವರು, ಝಕಾತ್ ನೀಡುವವರು ಮತ್ತು ಪರಲೋಕದಲ್ಲಿ ದೃಢವಿಶ್ವಾಸವಿಡುವವರು. info
التفاسير:

external-link copy
5 : 31

اُولٰٓىِٕكَ عَلٰی هُدًی مِّنْ رَّبِّهِمْ وَاُولٰٓىِٕكَ هُمُ الْمُفْلِحُوْنَ ۟

ಅವರು ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಸನ್ಮಾರ್ಗದಲ್ಲಿದ್ದಾರೆ. ಅವರೇ ಯಶಸ್ವಿಯಾದವರು. info
التفاسير:

external-link copy
6 : 31

وَمِنَ النَّاسِ مَنْ یَّشْتَرِیْ لَهْوَ الْحَدِیْثِ لِیُضِلَّ عَنْ سَبِیْلِ اللّٰهِ بِغَیْرِ عِلْمٍ ۖۗ— وَّیَتَّخِذَهَا هُزُوًا ؕ— اُولٰٓىِٕكَ لَهُمْ عَذَابٌ مُّهِیْنٌ ۟

ಜನರಲ್ಲಿ ಕೆಲವರಿದ್ದಾರೆ. ಅವರು ಯಾವುದೇ ತಿಳುವಳಿಕೆಯಿಲ್ಲದೆ ಅಲ್ಲಾಹನ ಮಾರ್ಗದಿಂದ ಜನರನ್ನು ತಪ್ಪಿಸಲು ಮತ್ತು ಅದನ್ನು ತಮಾಷೆಯ ವಸ್ತುವನ್ನಾಗಿ ಸ್ವೀಕರಿಸಲು ಮೋಜಿನ ಮಾತುಗಳನ್ನು ಖರೀದಿಸಿ ತರುತ್ತಾರೆ. ಅವರಿಗೆ ಅವಮಾನಕರ ಶಿಕ್ಷೆಯಿದೆ. info
التفاسير:

external-link copy
7 : 31

وَاِذَا تُتْلٰی عَلَیْهِ اٰیٰتُنَا وَلّٰی مُسْتَكْبِرًا كَاَنْ لَّمْ یَسْمَعْهَا كَاَنَّ فِیْۤ اُذُنَیْهِ وَقْرًا ۚ— فَبَشِّرْهُ بِعَذَابٍ اَلِیْمٍ ۟

ಅವನಿಗೆ ನಮ್ಮ ವಚನಗಳನ್ನು ಓದಿ ಕೊಡಲಾದರೆ ಅವನು ಬೆನ್ನು ತೋರಿಸಿ ಅಹಂಕಾರದಿಂದ ನಡೆಯುತ್ತಾನೆ. ಅವನು ಅದನ್ನು ಕೇಳಿಯೇ ಇಲ್ಲ ಎಂಬಂತೆ. ಅವನ ಕಿವಿಗಳಲ್ಲಿ ಮುಚ್ಚಳವಿರುವಂತೆ. ಅವನಿಗೆ ಯಾತನಾಮಯ ಶಿಕ್ಷೆಯ ಬಗ್ಗೆ ಸುವಾರ್ತೆಯನ್ನು ನೀಡಿರಿ. info
التفاسير:

external-link copy
8 : 31

اِنَّ الَّذِیْنَ اٰمَنُوْا وَعَمِلُوا الصّٰلِحٰتِ لَهُمْ جَنّٰتُ النَّعِیْمِ ۟ۙ

ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಸುಖಸಮೃದ್ಧವಾದ ಸ್ವರ್ಗೋದ್ಯಾನಗಳಿವೆ. info
التفاسير:

external-link copy
9 : 31

خٰلِدِیْنَ فِیْهَا ؕ— وَعْدَ اللّٰهِ حَقًّا ؕ— وَهُوَ الْعَزِیْزُ الْحَكِیْمُ ۟

ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದು ಅಲ್ಲಾಹನ ಸತ್ಯ ವಾಗ್ದಾನವಾಗಿದೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير:

external-link copy
10 : 31

خَلَقَ السَّمٰوٰتِ بِغَیْرِ عَمَدٍ تَرَوْنَهَا وَاَلْقٰی فِی الْاَرْضِ رَوَاسِیَ اَنْ تَمِیْدَ بِكُمْ وَبَثَّ فِیْهَا مِنْ كُلِّ دَآبَّةٍ ؕ— وَاَنْزَلْنَا مِنَ السَّمَآءِ مَآءً فَاَنْۢبَتْنَا فِیْهَا مِنْ كُلِّ زَوْجٍ كَرِیْمٍ ۟

ನೀವು ನೋಡುವ ಯಾವುದೇ ಸ್ಥಂಭಗಳ ಆಧಾರವಿಲ್ಲದೆ ಅವನು ಆಕಾಶಗಳನ್ನು ಸೃಷ್ಟಿಸಿದ್ದಾನೆ. ಭೂಮಿಯು ನಿಮ್ಮೊಂದಿಗೆ ಅಲುಗಾಡದಿರಲು ಅವನು ಅದರಲ್ಲಿ ದೃಢವಾಗಿ ನಿಲ್ಲುವ ಪರ್ವತಗಳನ್ನು ಸ್ಥಾಪಿಸಿದ್ದಾನೆ. ಅವನು ಅದರಲ್ಲಿ ಎಲ್ಲಾ ರೀತಿಯ ಜೀವರಾಶಿಗಳನ್ನು ಹಬ್ಬಿಸಿದ್ದಾನೆ. ನಾವು ಆಕಾಶದಿಂದ ಮಳೆಯನ್ನು ಸುರಿಸಿದೆವು. ನಂತರ ಅದರಲ್ಲಿ ಎಲ್ಲಾ ವಿಧಗಳ ಉತ್ತಮ ಸಸ್ಯವರ್ಗಗಳನ್ನು ಬೆಳೆಸಿದೆವು. info
التفاسير:

external-link copy
11 : 31

هٰذَا خَلْقُ اللّٰهِ فَاَرُوْنِیْ مَاذَا خَلَقَ الَّذِیْنَ مِنْ دُوْنِهٖ ؕ— بَلِ الظّٰلِمُوْنَ فِیْ ضَلٰلٍ مُّبِیْنٍ ۟۠

ಇವೆಲ್ಲವೂ ಅಲ್ಲಾಹನ ಸೃಷ್ಟಿಗಳು. ಅವನ ಹೊರತಾಗಿ (ನೀವು ಆರಾಧಿಸುವ ದೇವರುಗಳು) ಏನು ಸೃಷ್ಟಿಸಿದ್ದಾರೆಂದು ನನಗೆ ತೋರಿಸಿಕೊಡಿ. ಅಲ್ಲ, ವಾಸ್ತವವಾಗಿ ಅಕ್ರಮಿಗಳು ಸ್ಪಷ್ಟ ದುರ್ಮಾರ್ಗದಲ್ಲಿದ್ದಾರೆ. info
التفاسير: