Firo maanaaji al-quraan tedduɗo oo - Eggo (nantino) ngo e haala Kannada - Hamza Batur

Tonngoode hello ngoo:close

external-link copy
249 : 2

فَلَمَّا فَصَلَ طَالُوْتُ بِالْجُنُوْدِ ۙ— قَالَ اِنَّ اللّٰهَ مُبْتَلِیْكُمْ بِنَهَرٍ ۚ— فَمَنْ شَرِبَ مِنْهُ فَلَیْسَ مِنِّیْ ۚ— وَمَنْ لَّمْ یَطْعَمْهُ فَاِنَّهٗ مِنِّیْۤ اِلَّا مَنِ اغْتَرَفَ غُرْفَةً بِیَدِهٖ ۚ— فَشَرِبُوْا مِنْهُ اِلَّا قَلِیْلًا مِّنْهُمْ ؕ— فَلَمَّا جَاوَزَهٗ هُوَ وَالَّذِیْنَ اٰمَنُوْا مَعَهٗ ۙ— قَالُوْا لَا طَاقَةَ لَنَا الْیَوْمَ بِجَالُوْتَ وَجُنُوْدِهٖ ؕ— قَالَ الَّذِیْنَ یَظُنُّوْنَ اَنَّهُمْ مُّلٰقُوا اللّٰهِ ۙ— كَمْ مِّنْ فِئَةٍ قَلِیْلَةٍ غَلَبَتْ فِئَةً كَثِیْرَةً بِاِذْنِ اللّٰهِ ؕ— وَاللّٰهُ مَعَ الصّٰبِرِیْنَ ۟

ನಂತರ ತಾಲೂತ್ (ಸೌಲ್) ಸೈನ್ಯದೊಂದಿಗೆ ಹೊರಟಾಗ ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಒಂದು ನದಿಯ ಮೂಲಕ ನಿಮ್ಮನ್ನು ಪರೀಕ್ಷಿಸುವನು. ಯಾರು ಅದರ ನೀರನ್ನು ಕುಡಿಯುತ್ತಾನೋ ಅವನು ನನ್ನವನಲ್ಲ. ಯಾರು ಅದರ ರುಚಿ ನೋಡುವುದಿಲ್ಲವೋ ಅವನು ನನ್ನವನು; ಆದರೆ ತನ್ನ ಕೈಯಿಂದ ಒಂದು ಬೊಗಸೆ ಮಾತ್ರ ತೆಗೆದುಕೊಂಡವನ ಹೊರತು." ಆದರೆ ಅವರಲ್ಲಿ ಕೆಲವರ ಹೊರತು ಉಳಿದವರೆಲ್ಲರೂ ಅದರ ನೀರನ್ನು ಕುಡಿದರು. ನಂತರ ತಾಲೂತ್ ಮತ್ತು ಅವರ ಜೊತೆಗಿರುವ ಸತ್ಯವಿಶ್ವಾಸಿಗಳು ಆ ನದಿಯನ್ನು ದಾಟಿದಾಗ ಅವರು ಹೇಳಿದರು: "ಇಂದು ನಮಗೆ ಜಾಲೂತ್ (ಗೋಲಿಯತ್) ಮತ್ತು ಅವನ ಸೈನ್ಯದೊಡನೆ ಹೋರಾಡುವ ಶಕ್ತಿಯಿಲ್ಲ." ಆದರೆ ನಾವು ಅಲ್ಲಾಹನನ್ನು ಭೇಟಿಯಾಗಲಿದ್ದೇವೆ ಎಂಬ ದೃಢವಿಶ್ವಾಸವಿದ್ದವರು ಹೇಳಿದರು: "ಎಷ್ಟೆಷ್ಟು ಚಿಕ್ಕ ಸೈನ್ಯಗಳು ಅಲ್ಲಾಹನ ಅಪ್ಪಣೆಯೊಂದಿಗೆ ಎಷ್ಟೆಷ್ಟು ದೊಡ್ಡ ಸೈನ್ಯಗಳನ್ನು ಸೋಲಿಸಿವೆ! ಅಲ್ಲಾಹು ತಾಳ್ಮೆಯುಳ್ಳವರ ಜೊತೆಗಿದ್ದಾನೆ." info
التفاسير:

external-link copy
250 : 2

وَلَمَّا بَرَزُوْا لِجَالُوْتَ وَجُنُوْدِهٖ قَالُوْا رَبَّنَاۤ اَفْرِغْ عَلَیْنَا صَبْرًا وَّثَبِّتْ اَقْدَامَنَا وَانْصُرْنَا عَلَی الْقَوْمِ الْكٰفِرِیْنَ ۟ؕ

ನಂತರ ಜಾಲೂತ್ (ಗೋಲಿಯತ್) ಮತ್ತು ಅವನ ಸೈನ್ಯಕ್ಕೆ ಮುಖಾಮುಖಿಯಾಗಿ ನಿಂತಾಗ ಅವರು ಹೀಗೆ ಪ್ರಾರ್ಥಿಸಿದರು: "ಓ ನಮ್ಮ ಪರಿಪಾಲಕನೇ! ನಮಗೆ ಸ್ಥೈರ್ಯವನ್ನು ದಯಪಾಲಿಸು, ನಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸು ಮತ್ತು ಸತ್ಯನಿಷೇಧಿಗಳಾದ ಜನರ ವಿರುದ್ಧ ನಮಗೆ ಸಹಾಯ ಮಾಡು." info
التفاسير:

external-link copy
251 : 2

فَهَزَمُوْهُمْ بِاِذْنِ اللّٰهِ ۙ۫— وَقَتَلَ دَاوٗدُ جَالُوْتَ وَاٰتٰىهُ اللّٰهُ الْمُلْكَ وَالْحِكْمَةَ وَعَلَّمَهٗ مِمَّا یَشَآءُ ؕ— وَلَوْلَا دَفْعُ اللّٰهِ النَّاسَ بَعْضَهُمْ بِبَعْضٍ لَّفَسَدَتِ الْاَرْضُ وَلٰكِنَّ اللّٰهَ ذُوْ فَضْلٍ عَلَی الْعٰلَمِیْنَ ۟

ನಂತರ ಅಲ್ಲಾಹನ ಅಪ್ಪಣೆಯಿಂದ ಅವರು ಅವರನ್ನು (ವೈರಿಗಳನ್ನು) ಸೋಲಿಸಿದರು. ದಾವೂದ್ ಜಾಲೂತನನ್ನು ಕೊಂದರು. ಅಲ್ಲಾಹು ಅವರಿಗೆ (ದಾವೂದರಿಗೆ) ಸಾಮ್ರಾಜ್ಯವನ್ನು ಮತ್ತು ವಿವೇಕವನ್ನು ದಯಪಾಲಿಸಿದನು ಹಾಗೂ ಅವನು ಇಚ್ಛಿಸಿದಷ್ಟು ವಿಷಯಗಳನ್ನು ಅವರಿಗೆ ಕಲಿಸಿಕೊಟ್ಟನು. ಅಲ್ಲಾಹು ಕೆಲವು ಜನರಿಗೆ ಇತರ ಕೆಲವರ ಮೂಲಕ ತಡೆಯೊಡ್ಡದಿರುತ್ತಿದ್ದರೆ ಭೂಲೋಕದಲ್ಲಿ ಅರಾಜಕತೆ ತಾಂಡವವಾಡುತ್ತಿತ್ತು. ಅದರೆ ಅಲ್ಲಾಹು ಸರ್ವಲೋಕದವರ ಮೇಲೆ ಬಹಳ ಔದಾರ್ಯವುಳ್ಳವನಾಗಿದ್ದಾನೆ. info
التفاسير:

external-link copy
252 : 2

تِلْكَ اٰیٰتُ اللّٰهِ نَتْلُوْهَا عَلَیْكَ بِالْحَقِّ ؕ— وَاِنَّكَ لَمِنَ الْمُرْسَلِیْنَ ۟

ಇವೆಲ್ಲವೂ ಅಲ್ಲಾಹನ ವಚನಗಳಾಗಿವೆ. ನಾವು ಇವುಗಳನ್ನು ಸತ್ಯ ಸಮೇತ ನಿಮಗೆ ಓದಿಕೊಡುತ್ತಿದ್ದೇವೆ. ನಿಶ್ಚಯವಾಗಿಯೂ ನೀವು ಸಂದೇಶವಾಹಕರಲ್ಲಿ ಒಬ್ಬರಾಗಿದ್ದೀರಿ. info
التفاسير: