Firo maanaaji al-quraan tedduɗo oo - Eggo (nantino) ngo e haala Kannada - Hamza Batur

Tonngoode hello ngoo: 44:2 close

external-link copy
265 : 2

وَمَثَلُ الَّذِیْنَ یُنْفِقُوْنَ اَمْوَالَهُمُ ابْتِغَآءَ مَرْضَاتِ اللّٰهِ وَتَثْبِیْتًا مِّنْ اَنْفُسِهِمْ كَمَثَلِ جَنَّةٍ بِرَبْوَةٍ اَصَابَهَا وَابِلٌ فَاٰتَتْ اُكُلَهَا ضِعْفَیْنِ ۚ— فَاِنْ لَّمْ یُصِبْهَا وَابِلٌ فَطَلٌّ ؕ— وَاللّٰهُ بِمَا تَعْمَلُوْنَ بَصِیْرٌ ۟

ಅಲ್ಲಾಹನ ಸಂಪ್ರೀತಿಯನ್ನು ಹುಡುಕುತ್ತಾ ದೃಢಮನಸ್ಸಿನಿಂದ ಮತ್ತು ಮನಸ್ಸಂತೃಪ್ತಿಯಿಂದ ತಮ್ಮ ಧನವನ್ನು ಖರ್ಚು ಮಾಡುವವರ ಉದಾಹರಣೆಯು ಎತ್ತರದ ಸ್ಥಳದಲ್ಲಿರುವ ಒಂದು ತೋಟದಂತೆ. ಅದಕ್ಕೆ ಜಡಿಮಳೆಯು ಸುರಿದಾಗ ಅದು ಇಮ್ಮಡಿ ಫಲವನ್ನು ನೀಡುತ್ತದೆ. ಅದಕ್ಕೆ ಜಡಿಮಳೆ ಸುರಿಯದಿದ್ದರೂ ತುಂತುರು ಮಳೆ ಸಾಕಾಗುತ್ತದೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ. info
التفاسير:

external-link copy
266 : 2

اَیَوَدُّ اَحَدُكُمْ اَنْ تَكُوْنَ لَهٗ جَنَّةٌ مِّنْ نَّخِیْلٍ وَّاَعْنَابٍ تَجْرِیْ مِنْ تَحْتِهَا الْاَنْهٰرُ ۙ— لَهٗ فِیْهَا مِنْ كُلِّ الثَّمَرٰتِ ۙ— وَاَصَابَهُ الْكِبَرُ وَلَهٗ ذُرِّیَّةٌ ضُعَفَآءُ ۖۚ— فَاَصَابَهَاۤ اِعْصَارٌ فِیْهِ نَارٌ فَاحْتَرَقَتْ ؕ— كَذٰلِكَ یُبَیِّنُ اللّٰهُ لَكُمُ الْاٰیٰتِ لَعَلَّكُمْ تَتَفَكَّرُوْنَ ۟۠

ನಿಮ್ಮಲ್ಲೊಬ್ಬನಿಗೆ ತಳಭಾಗದಿಂದ ನದಿಗಳು ಹರಿಯುವ, ಖರ್ಜೂರ ಮತ್ತು ದ್ರಾಕ್ಷಿಯ ಹಾಗೂ ಎಲ್ಲಾ ರೀತಿಯ ಹಣ್ಣು-ಹಂಪಲುಗಳಿರುವ ಒಂದು ತೋಟವಿದ್ದು, ಅವನು ವೃದ್ಧನಾಗಿದ್ದು ಬಲಹೀನರಾದ ಮಕ್ಕಳೂ ಇರುವ ಸ್ಥಿತಿಯಲ್ಲಿ ಆ ತೋಟಕ್ಕೆ ಬೆಂಕಿಯ ಬಿರುಗಾಳಿ ಬೀಸಿ ಅದರಿಂದ ಆ ತೋಟವು ಸುಟ್ಟು ಕರಕಲಾಗುವುದನ್ನು ನೀವು ಬಯಸುತ್ತೀರಾ? ಈ ರೀತಿ ಅಲ್ಲಾಹು ತನ್ನ ವಚನಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ. ನೀವು ಆಲೋಚಿಸುವುದಕ್ಕಾಗಿ. info
التفاسير:

external-link copy
267 : 2

یٰۤاَیُّهَا الَّذِیْنَ اٰمَنُوْۤا اَنْفِقُوْا مِنْ طَیِّبٰتِ مَا كَسَبْتُمْ وَمِمَّاۤ اَخْرَجْنَا لَكُمْ مِّنَ الْاَرْضِ ۪— وَلَا تَیَمَّمُوا الْخَبِیْثَ مِنْهُ تُنْفِقُوْنَ وَلَسْتُمْ بِاٰخِذِیْهِ اِلَّاۤ اَنْ تُغْمِضُوْا فِیْهِ ؕ— وَاعْلَمُوْۤا اَنَّ اللّٰهَ غَنِیٌّ حَمِیْدٌ ۟

ಓ ಸತ್ಯವಿಶ್ವಾಸಿಗಳೇ! ನೀವು ಸಂಪಾದಿಸಿದ ಉತ್ತಮ ವಸ್ತುಗಳಿಂದ ಮತ್ತು ನಾವು ನಿಮಗೆ ಭೂಮಿಯಿಂದ ಉತ್ಪಾದಿಸಿಕೊಟ್ಟ ವಸ್ತುಗಳಿಂದ ಖರ್ಚು (ದಾನ) ಮಾಡಿರಿ. ನೀವು ಕಣ್ಣು ಮುಚ್ಚಿಕೊಂಡಲ್ಲದೆ ಸ್ವೀಕರಿಸದ ಕೆಟ್ಟ ವಸ್ತುಗಳನ್ನು ಖರ್ಚು (ದಾನ) ಮಾಡಲು ಮುಂದಾಗಬೇಡಿ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ. info
التفاسير:

external-link copy
268 : 2

اَلشَّیْطٰنُ یَعِدُكُمُ الْفَقْرَ وَیَاْمُرُكُمْ بِالْفَحْشَآءِ ۚ— وَاللّٰهُ یَعِدُكُمْ مَّغْفِرَةً مِّنْهُ وَفَضْلًا ؕ— وَاللّٰهُ وَاسِعٌ عَلِیْمٌ ۟

ಶೈತಾನನು ನಿಮಗೆ ಬಡತನದ ಬಗ್ಗೆ ಬೆದರಿಸುತ್ತಾನೆ ಮತ್ತು ಅಶ್ಲೀಲತೆಯನ್ನು ಆದೇಶಿಸುತ್ತಾನೆ. ಅಲ್ಲಾಹು ನಿಮಗೆ ಅವನ ಕ್ಷಮೆ ಮತ್ತು ಔದಾರ್ಯದ ಬಗ್ಗೆ ವಾಗ್ದಾನ ಮಾಡುತ್ತಾನೆ. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ. info
التفاسير:

external-link copy
269 : 2

یُّؤْتِی الْحِكْمَةَ مَنْ یَّشَآءُ ۚ— وَمَنْ یُّؤْتَ الْحِكْمَةَ فَقَدْ اُوْتِیَ خَیْرًا كَثِیْرًا ؕ— وَمَا یَذَّكَّرُ اِلَّاۤ اُولُوا الْاَلْبَابِ ۟

ಅವನು ಇಚ್ಛಿಸುವವರಿಗೆ ಅವನು ವಿವೇಕವನ್ನು ದಯಪಾಲಿಸುತ್ತಾನೆ. ಯಾರಿಗೆ ವಿವೇಕವನ್ನು ದಯಪಾಲಿಸಲಾಗಿದೆಯೋ ಅವನಿಗೆ ಅತ್ಯಧಿಕ ಒಳಿತುಗಳನ್ನು ದಯಪಾಲಿಸಲಾಗಿದೆ. ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಸ್ವೀಕರಿಸುವುದಿಲ್ಲ. info
التفاسير: