Firo maanaaji al-quraan tedduɗo oo - Eggo (nantino) ngo e haala Kannada - Hamza Batur

external-link copy
275 : 2

اَلَّذِیْنَ یَاْكُلُوْنَ الرِّبٰوا لَا یَقُوْمُوْنَ اِلَّا كَمَا یَقُوْمُ الَّذِیْ یَتَخَبَّطُهُ الشَّیْطٰنُ مِنَ الْمَسِّ ؕ— ذٰلِكَ بِاَنَّهُمْ قَالُوْۤا اِنَّمَا الْبَیْعُ مِثْلُ الرِّبٰوا ۘ— وَاَحَلَّ اللّٰهُ الْبَیْعَ وَحَرَّمَ الرِّبٰوا ؕ— فَمَنْ جَآءَهٗ مَوْعِظَةٌ مِّنْ رَّبِّهٖ فَانْتَهٰی فَلَهٗ مَا سَلَفَ ؕ— وَاَمْرُهٗۤ اِلَی اللّٰهِ ؕ— وَمَنْ عَادَ فَاُولٰٓىِٕكَ اَصْحٰبُ النَّارِ ۚ— هُمْ فِیْهَا خٰلِدُوْنَ ۟

ಬಡ್ಡಿ ತಿನ್ನುವವರು ಯಾರೋ ಅವರು ಶೈತಾನನ ಸ್ಪರ್ಶದಿಂದ ಹುಚ್ಚು ಹಿಡಿದವನು ಎದ್ದೇಳುವಂತೆಯೇ ವಿನಾ ಎದ್ದೇಳುವುದಿಲ್ಲ. ನಿಶ್ಚಯವಾಗಿಯೂ ವ್ಯಾಪಾರವು ಬಡ್ಡಿಯಂತೆ ಎಂದು ಅವರು ಹೇಳಿದ್ದೇ ಅದಕ್ಕೆ ಕಾರಣ. ಆದರೆ ಅಲ್ಲಾಹು ವ್ಯಾಪಾರವನ್ನು ಅನುಮತಿಸಿದ್ದಾನೆ ಮತ್ತು ಬಡ್ಡಿಯನ್ನು ನಿಷೇಧಿಸಿದ್ದಾನೆ. ಆದ್ದರಿಂದ, ಯಾರು ಅಲ್ಲಾಹನ ಕಡೆಯಿಂದ ಬಂದ ಉಪದೇಶವನ್ನು ಕೇಳಿದ ನಂತರ ಬಡ್ಡಿ ವ್ಯವಹಾರವನ್ನು ನಿಲ್ಲಿಸುತ್ತಾನೋ ಅವನಿಗೆ ಹಿಂದೆ ಪಡೆದುದರಲ್ಲಿ ದೋಷವಿಲ್ಲ; ಅವನ ವಿಚಾರಣೆಯು ಅಲ್ಲಾಹನಿಗೆ ಬಿಟ್ಟದ್ದು. ಆದರೆ ಯಾರು ಪುನಃ ಬಡ್ಡಿ ವ್ಯವಹಾರಕ್ಕೆ ಮರಳುತ್ತಾರೋ ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. info
التفاسير: