Firo maanaaji al-quraan tedduɗo oo - Eggo (nantino) ngo e haala Kannada - Hamza Batur

Tonngoode hello ngoo:close

external-link copy
6 : 39

خَلَقَكُمْ مِّنْ نَّفْسٍ وَّاحِدَةٍ ثُمَّ جَعَلَ مِنْهَا زَوْجَهَا وَاَنْزَلَ لَكُمْ مِّنَ الْاَنْعَامِ ثَمٰنِیَةَ اَزْوَاجٍ ؕ— یَخْلُقُكُمْ فِیْ بُطُوْنِ اُمَّهٰتِكُمْ خَلْقًا مِّنْ بَعْدِ خَلْقٍ فِیْ ظُلُمٰتٍ ثَلٰثٍ ؕ— ذٰلِكُمُ اللّٰهُ رَبُّكُمْ لَهُ الْمُلْكُ ؕ— لَاۤ اِلٰهَ اِلَّا هُوَ ۚ— فَاَنّٰی تُصْرَفُوْنَ ۟

ಅವನು ನಿಮ್ಮನ್ನು ಒಂದೇ ದೇಹದಿಂದ ಸೃಷ್ಟಿಸಿದನು. ನಂತರ ಅದರಿಂದ ಅದರ ಸಂಗಾತಿಯನ್ನು ಉಂಟುಮಾಡಿದನು. ಅವನು ನಿಮಗೆ ಜಾನುವಾರುಗಳಲ್ಲಿ ಎಂಟು ಜೋಡಿಗಳನ್ನು ಇಳಿಸಿಕೊಟ್ಟನು. ಅವನು ನಿಮ್ಮನ್ನು ನಿಮ್ಮ ತಾಯಂದಿರ ಉದರಗಳಲ್ಲಿ ಮೂರು ರೀತಿಯ ಕತ್ತಲೆಗಳೊಳಗೆ ಒಂದು ಹಂತದ ಬಳಿಕ ಮತ್ತೊಂದು ಹಂತವಾಗಿ ಸೃಷ್ಟಿಸುತ್ತಾನೆ. ಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಸಾರ್ವಭೌಮತ್ವವು ಅವನಿಗೆ ಸೇರಿದ್ದು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಆದರೂ ನೀವು (ಸತ್ಯದಿಂದ) ತಪ್ಪಿಹೋಗುವುದು ಹೇಗೆ? info
التفاسير:

external-link copy
7 : 39

اِنْ تَكْفُرُوْا فَاِنَّ اللّٰهَ غَنِیٌّ عَنْكُمْ ۫— وَلَا یَرْضٰی لِعِبَادِهِ الْكُفْرَ ۚ— وَاِنْ تَشْكُرُوْا یَرْضَهُ لَكُمْ ؕ— وَلَا تَزِرُ وَازِرَةٌ وِّزْرَ اُخْرٰی ؕ— ثُمَّ اِلٰی رَبِّكُمْ مَّرْجِعُكُمْ فَیُنَبِّئُكُمْ بِمَا كُنْتُمْ تَعْمَلُوْنَ ؕ— اِنَّهٗ عَلِیْمٌۢ بِذَاتِ الصُّدُوْرِ ۟

ನೀವು ಕೃತಘ್ನತೆ ತೋರುವುದಾದರೆ ನಿಶ್ಚಯವಾಗಿಯೂ ಅಲ್ಲಾಹನಿಗೆ ನಿಮ್ಮ ಅಗತ್ಯವಿಲ್ಲ. ದಾಸರು ಕೃತಘ್ನರಾಗುವುದನ್ನು ಅವನು ಇಷ್ಟಪಡುವುದಿಲ್ಲ. ನೀವು ಕೃತಜ್ಞರಾಗುವುದಾದರೆ ಅವನು ಅದನ್ನು ನಿಮಗಾಗಿ ಇಷ್ಟಪಡುವನು. ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ನಂತರ ನಿಮ್ಮನ್ನು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ. info
التفاسير:

external-link copy
8 : 39

وَاِذَا مَسَّ الْاِنْسَانَ ضُرٌّ دَعَا رَبَّهٗ مُنِیْبًا اِلَیْهِ ثُمَّ اِذَا خَوَّلَهٗ نِعْمَةً مِّنْهُ نَسِیَ مَا كَانَ یَدْعُوْۤا اِلَیْهِ مِنْ قَبْلُ وَجَعَلَ لِلّٰهِ اَنْدَادًا لِّیُضِلَّ عَنْ سَبِیْلِهٖ ؕ— قُلْ تَمَتَّعْ بِكُفْرِكَ قَلِیْلًا ۖۗ— اِنَّكَ مِنْ اَصْحٰبِ النَّارِ ۟

ಮನುಷ್ಯನಿಗೆ ಏನಾದರೂ ತೊಂದರೆಯುಂಟಾದರೆ ಅವನು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ತಿರುಗಿ ಅವನನ್ನು ಕರೆದು ಪ್ರಾರ್ಥಿಸುತ್ತಾನೆ. ನಂತರ ಅಲ್ಲಾಹು ಅವನಿಗೆ ತನ್ನ ಕಡೆಯ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಮೊದಲು ಯಾವುದಕ್ಕಾಗಿ ಪ್ರಾರ್ಥಿಸಿದ್ದನೋ ಅದನ್ನು ಅವನು ಮರೆತುಬಿಡುತ್ತಾನೆ ಮತ್ತು ಅಲ್ಲಾಹನಿಗೆ ಸರಿಸಮಾನರನ್ನು ನಿಶ್ಚಯಿಸಿ ಜನರನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುತ್ತಾನೆ. ಹೇಳಿರಿ: “ನೀನು ನಿನ್ನ ಈ ಸತ್ಯನಿಷೇಧದಿಂದ ಸ್ವಲ್ಪ ಕಾಲದವರೆಗೆ ಆನಂದದಿಂದ ಜೀವಿಸು. ನಿಶ್ಚಯವಾಗಿಯೂ ನೀನು ನರಕವಾಸಿಗಳಲ್ಲಿ ಸೇರಿಕೊಳ್ಳುವೆ.” info
التفاسير:

external-link copy
9 : 39

اَمَّنْ هُوَ قَانِتٌ اٰنَآءَ الَّیْلِ سَاجِدًا وَّقَآىِٕمًا یَّحْذَرُ الْاٰخِرَةَ وَیَرْجُوْا رَحْمَةَ رَبِّهٖ ؕ— قُلْ هَلْ یَسْتَوِی الَّذِیْنَ یَعْلَمُوْنَ وَالَّذِیْنَ لَا یَعْلَمُوْنَ ؕ— اِنَّمَا یَتَذَكَّرُ اُولُوا الْاَلْبَابِ ۟۠

ಯಾರು ರಾತ್ರಿಯ ಸಮಯವನ್ನು ಸಾಷ್ಟಾಂಗ ಮತ್ತು ನಮಾಝ್ ಮಾಡುತ್ತಾ (ಆರಾಧನೆಯಲ್ಲಿ) ಕಳೆಯುತ್ತಾನೋ, ಪರಲೋಕವನ್ನು ಭಯಪಡುತ್ತಾನೋ ಮತ್ತು ತನ್ನ ಪರಿಪಾಲಕನ (ಅಲ್ಲಾಹನ) ದಯೆಯನ್ನು ಆಶಿಸುತ್ತಾನೋ (ಇಂತಹವನು ಮತ್ತು ಇದಕ್ಕೆ ವಿರುದ್ಧವಾಗಿ ವರ್ತಿಸುವವನು ಸಮಾನರಾಗುವರೇ)? ಹೇಳಿರಿ: “ಜ್ಞಾನವುಳ್ಳವರು ಮತ್ತು ಜ್ಞಾನವಿಲ್ಲದವರು ಸಮಾನರೇ?” ಬುದ್ಧಿವಂತರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ. info
التفاسير:

external-link copy
10 : 39

قُلْ یٰعِبَادِ الَّذِیْنَ اٰمَنُوا اتَّقُوْا رَبَّكُمْ ؕ— لِلَّذِیْنَ اَحْسَنُوْا فِیْ هٰذِهِ الدُّنْیَا حَسَنَةٌ ؕ— وَاَرْضُ اللّٰهِ وَاسِعَةٌ ؕ— اِنَّمَا یُوَفَّی الصّٰبِرُوْنَ اَجْرَهُمْ بِغَیْرِ حِسَابٍ ۟

ಹೇಳಿರಿ: “ಓ ನನ್ನ ಸತ್ಯವಿಶ್ವಾಸಿ ದಾಸರೇ! ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ಯಾರು ಈ ಐಹಿಕ ಜೀವನದಲ್ಲಿ ಒಳಿತು ಮಾಡುತ್ತಾರೋ ಅವರಿಗೆ ಒಳಿತಿದೆ. ಅಲ್ಲಾಹನ ಭೂಮಿಯು ವಿಶಾಲವಾಗಿದೆ. ನಿಶ್ಚಯವಾಗಿಯೂ ತಾಳ್ಮೆಯಿಂದಿರುವವರಿಗೆ ಅವರ ಪ್ರತಿಫಲವನ್ನು ಲೆಕ್ಕವಿಲ್ಲದೆ ಪೂರ್ಣವಾಗಿ ನೀಡಲಾಗುವುದು.” info
التفاسير: