Firo maanaaji al-quraan tedduɗo oo - Eggo (nantino) ngo e haala Kannada - Hamza Batur

Tonngoode hello ngoo:close

external-link copy
6 : 5

یٰۤاَیُّهَا الَّذِیْنَ اٰمَنُوْۤا اِذَا قُمْتُمْ اِلَی الصَّلٰوةِ فَاغْسِلُوْا وُجُوْهَكُمْ وَاَیْدِیَكُمْ اِلَی الْمَرَافِقِ وَامْسَحُوْا بِرُءُوْسِكُمْ وَاَرْجُلَكُمْ اِلَی الْكَعْبَیْنِ ؕ— وَاِنْ كُنْتُمْ جُنُبًا فَاطَّهَّرُوْا ؕ— وَاِنْ كُنْتُمْ مَّرْضٰۤی اَوْ عَلٰی سَفَرٍ اَوْ جَآءَ اَحَدٌ مِّنْكُمْ مِّنَ الْغَآىِٕطِ اَوْ لٰمَسْتُمُ النِّسَآءَ فَلَمْ تَجِدُوْا مَآءً فَتَیَمَّمُوْا صَعِیْدًا طَیِّبًا فَامْسَحُوْا بِوُجُوْهِكُمْ وَاَیْدِیْكُمْ مِّنْهُ ؕ— مَا یُرِیْدُ اللّٰهُ لِیَجْعَلَ عَلَیْكُمْ مِّنْ حَرَجٍ وَّلٰكِنْ یُّرِیْدُ لِیُطَهِّرَكُمْ وَلِیُتِمَّ نِعْمَتَهٗ عَلَیْكُمْ لَعَلَّكُمْ تَشْكُرُوْنَ ۟

ಓ ಸತ್ಯವಿಶ್ವಾಸಿಗಳೇ! ನೀವು ನಮಾಝ್‍ಗಾಗಿ ಸಿದ್ಧರಾದರೆ ನಿಮ್ಮ ಮುಖಗಳನ್ನು ಮತ್ತು ಮೊಣಕೈಗಳವರೆಗೆ ಎರಡು ಕೈಗಳನ್ನು ತೊಳೆಯಿರಿ, ತಲೆಗಳನ್ನು ಸವರಿರಿ ಮತ್ತು ಎರಡು ಕಾಲುಗಳನ್ನು ಹರಡುಗಂಟಿನ ತನಕ ತೊಳೆಯಿರಿ. ನೀವು ದೊಡ್ಡ ಅಶುದ್ಧಿಯಲ್ಲಿದ್ದರೆ (ಸ್ನಾನ ಮಾಡಿ) ಶುದ್ಧರಾಗಿರಿ. ನೀವು ಅನಾರೋಗ್ಯದಲ್ಲಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ; ಅಥವಾ ನಿಮ್ಮಲ್ಲೊಬ್ಬನು ಮಲಮೂತ್ರ ವಿಸರ್ಜನೆ ಮಾಡಿ ಬಂದಿದ್ದರೆ, ಅಥವಾ ಮಹಿಳೆಯರನ್ನು ಸ್ಪರ್ಶಿಸಿದ್ದರೆ (ಲೈಂಗಿಕ ಸಂಪರ್ಕ ಮಾಡಿದ್ದರೆ); ನಂತರ ನಿಮಗೆ ಶುದ್ಧಿಯಾಗಲು ನೀರು ದೊರೆಯದಿದ್ದರೆ, ಶುದ್ಧ ಮಣ್ಣಿನಿಂದ ತಯಮ್ಮುಮ್ ಮಾಡಿ, ಮುಖ ಮತ್ತು ಕೈಗಳನ್ನು ಸವರಿರಿ. ಅಲ್ಲಾಹು ನಿಮಗೆ ತೊಂದರೆ ಮಾಡಲು ಬಯಸುವುದಿಲ್ಲ. ಆದರೆ ಅವನು ನಿಮ್ಮನ್ನು ಶುದ್ಧೀಕರಿಸಲು ಮತ್ತು ತನ್ನ ಅನುಗ್ರಹವನ್ನು ನಿಮಗೆ ಪೂರ್ತಿ ಮಾಡಿಕೊಡಲು ಬಯಸುತ್ತಾನೆ. ನೀವು ಕೃತಜ್ಞರಾಗುವುದಕ್ಕಾಗಿ. info
التفاسير:

external-link copy
7 : 5

وَاذْكُرُوْا نِعْمَةَ اللّٰهِ عَلَیْكُمْ وَمِیْثَاقَهُ الَّذِیْ وَاثَقَكُمْ بِهٖۤ ۙ— اِذْ قُلْتُمْ سَمِعْنَا وَاَطَعْنَا ؗ— وَاتَّقُوا اللّٰهَ ؕ— اِنَّ اللّٰهَ عَلِیْمٌۢ بِذَاتِ الصُّدُوْرِ ۟

“ನಾವು ಕೇಳಿದ್ದೇವೆ ಮತ್ತು ಅನುಸರಿಸಿದ್ದೇವೆ” ಎಂದು ನೀವು ಹೇಳಿದ ಸಂದರ್ಭ ಅಲ್ಲಾಹು ನಿಮಗೆ ನೀಡಿರುವ ಅನುಗ್ರಹವನ್ನು ಮತ್ತು ಅವನು ನಿಮ್ಮಿಂದ ಬಲಿಷ್ಠ ಕರಾರು ಪಡೆದಿರುವುದನ್ನು ಸ್ಮರಿಸಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ. info
التفاسير:

external-link copy
8 : 5

یٰۤاَیُّهَا الَّذِیْنَ اٰمَنُوْا كُوْنُوْا قَوّٰمِیْنَ لِلّٰهِ شُهَدَآءَ بِالْقِسْطِ ؗ— وَلَا یَجْرِمَنَّكُمْ شَنَاٰنُ قَوْمٍ عَلٰۤی اَلَّا تَعْدِلُوْا ؕ— اِعْدِلُوْا ۫— هُوَ اَقْرَبُ لِلتَّقْوٰی ؗ— وَاتَّقُوا اللّٰهَ ؕ— اِنَّ اللّٰهَ خَبِیْرٌ بِمَا تَعْمَلُوْنَ ۟

ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನಿಗಾಗಿ ಸದಾ ದೃಢವಾಗಿ ನಿಂತು ನ್ಯಾಯ-ನಿಷ್ಠೆಗೆ ಸಾಕ್ಷಿಯಾಗಿರಿ. ಕೆಲವು ಜನರೊಡನೆ ನಿಮಗಿರುವ ದ್ವೇಷವು ನ್ಯಾಯಯುತವಾಗಿ ವರ್ತಿಸದಂತೆ ನಿಮ್ಮನ್ನು ಪ್ರೇರೇಪಿಸದಿರಲಿ. ನ್ಯಾಯಯುತವಾಗಿ ನಡೆದುಕೊಳ್ಳಿ. ಅದು ದೇವಭಯಕ್ಕೆ ಅತ್ಯಂತ ಹತ್ತಿರದಲ್ಲಿದೆ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ನೀವು ಮಾಡುವುದನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಾನೆ. info
التفاسير:

external-link copy
9 : 5

وَعَدَ اللّٰهُ الَّذِیْنَ اٰمَنُوْا وَعَمِلُوا الصّٰلِحٰتِ ۙ— لَهُمْ مَّغْفِرَةٌ وَّاَجْرٌ عَظِیْمٌ ۟

ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರಿಗೆ ಅಲ್ಲಾಹು ಕ್ಷಮೆ ಮತ್ತು ಮಹಾ ಪ್ರತಿಫಲದ ವಾಗ್ದಾನ ಮಾಡಿದ್ದಾನೆ. info
التفاسير: