Traduction des sens du Noble Coran - La traduction en Kannada - Hamzah Batûr

Numéro de la page: 556:556 close

external-link copy
10 : 64

وَالَّذِیْنَ كَفَرُوْا وَكَذَّبُوْا بِاٰیٰتِنَاۤ اُولٰٓىِٕكَ اَصْحٰبُ النَّارِ خٰلِدِیْنَ فِیْهَا ؕ— وَبِئْسَ الْمَصِیْرُ ۟۠

ಸತ್ಯವನ್ನು ನಿಷೇಧಿಸಿದವರು ಮತ್ತು ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ. info
التفاسير:

external-link copy
11 : 64

مَاۤ اَصَابَ مِنْ مُّصِیْبَةٍ اِلَّا بِاِذْنِ اللّٰهِ ؕ— وَمَنْ یُّؤْمِنْ بِاللّٰهِ یَهْدِ قَلْبَهٗ ؕ— وَاللّٰهُ بِكُلِّ شَیْءٍ عَلِیْمٌ ۟

ಯಾವುದೇ ವಿಪತ್ತು ಅಲ್ಲಾಹನ ಅಪ್ಪಣೆಯಿಂದಲ್ಲದೆ ಸಂಭವಿಸುವುದಿಲ್ಲ. ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಅವನ ಹೃದಯವನ್ನು ಅಲ್ಲಾಹು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ. info
التفاسير:

external-link copy
12 : 64

وَاَطِیْعُوا اللّٰهَ وَاَطِیْعُوا الرَّسُوْلَ ۚ— فَاِنْ تَوَلَّیْتُمْ فَاِنَّمَا عَلٰی رَسُوْلِنَا الْبَلٰغُ الْمُبِیْنُ ۟

ನೀವು ಅಲ್ಲಾಹು ಅವನ ಮತ್ತು ಸಂದೇಶವಾಹಕರ ಆಜ್ಞಾಪಾಲನೆ ಮಾಡಿರಿ. ನೀವೇನಾದರೂ ವಿಮುಖರಾಗುವುದಾದರೆ, ನಮ್ಮ ಸಂದೇಶವಾಹಕರ ಕರ್ತವ್ಯವು ಸಂದೇಶವನ್ನು ಸ್ಪಷ್ಟವಾಗಿ ತಲುಪಿಸುವುದು ಮಾತ್ರವಾಗಿದೆ. info
التفاسير:

external-link copy
13 : 64

اَللّٰهُ لَاۤ اِلٰهَ اِلَّا هُوَ ؕ— وَعَلَی اللّٰهِ فَلْیَتَوَكَّلِ الْمُؤْمِنُوْنَ ۟

ಅಲ್ಲಾಹು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ. info
التفاسير:

external-link copy
14 : 64

یٰۤاَیُّهَا الَّذِیْنَ اٰمَنُوْۤا اِنَّ مِنْ اَزْوَاجِكُمْ وَاَوْلَادِكُمْ عَدُوًّا لَّكُمْ فَاحْذَرُوْهُمْ ۚ— وَاِنْ تَعْفُوْا وَتَصْفَحُوْا وَتَغْفِرُوْا فَاِنَّ اللّٰهَ غَفُوْرٌ رَّحِیْمٌ ۟

ಓ ಸತ್ಯವಿಶ್ವಾಸಿಗಳೇ! ನಿಶ್ಚಯವಾಗಿಯೂ ನಿಮ್ಮ ಪತ್ನಿಯರಲ್ಲಿ ಮತ್ತು ನಿಮ್ಮ ಮಕ್ಕಳಲ್ಲಿ ನಿಮಗೆ ವೈರಿಗಳಿದ್ದಾರೆ. ಆದ್ದರಿಂದ ಅವರ ಬಗ್ಗೆ ಜಾಗರೂಕರಾಗಿರಿ. ನೀವು ಮನ್ನಿಸುವುದಾದರೆ, (ಅವರ ತಪ್ಪುಗಳನ್ನು) ನಿರ್ಲಕ್ಷಿಸುವುದಾದರೆ ಮತ್ತು ಅವರಿಗೆ ಕ್ಷಮಿಸುವುದಾದರೆ ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.[1] info

[1] ಮಕ್ಕಾದಲ್ಲಿ ಇಸ್ಲಾಂ ಸ್ವೀಕರಿಸಿದವರು ಮದೀನಕ್ಕೆ ಹಿಜ್ರ (ವಲಸೆ) ಮಾಡಬೇಕೆಂಬ ಆಜ್ಞೆಯು ಪ್ರಬಲವಾಗಿದ್ದ ಕಾಲದಲ್ಲಿ ಮಕ್ಕಾದಲ್ಲಿ ಕೆಲವರು ಇಸ್ಲಾಂ ಸ್ವೀಕರಿಸಿದರು. ಆದರೆ ಅವರ ಪತ್ನಿಯರು ಮತ್ತು ಮಕ್ಕಳು ಅವರನ್ನು ಮದೀನಕ್ಕೆ ವಲಸೆ ಹೋಗದಂತೆ ತಡೆದರು. ನಂತರ ಕೆಲವು ವರ್ಷಗಳ ಬಳಿಕ ಅವರು ಮದೀನಕ್ಕೆ ಬಂದಾಗ ಅಲ್ಲಿ ಇತರ ಮುಸಲ್ಮಾನರು ಬಹಳಷ್ಟು ಧಾರ್ಮಿಕ ವಿಚಾರಗಳನ್ನು ಕಲಿತುಕೊಂಡು ಅಪಾರ ಪುಣ್ಯ ಸಂಪಾದಿಸಿದ್ದನ್ನು ಕಂಡು ಇವರಿಗೆ ಮರುಕವಾಯಿತು. ತಮ್ಮನ್ನು ಮದೀನಕ್ಕೆ ಹಿಜ್ರ ಮಾಡದಂತೆ ತಡೆದ ಪತ್ನಿಯರು ಮತ್ತು ಮಕ್ಕಳನ್ನು ಶಿಕ್ಷಿಸಲು ಅವರು ಮುಂದಾದರು. ಆಗ ಅಲ್ಲಾಹು ಈ ವಚನವನ್ನು ಅವತೀರ್ಣಗೊಳಿಸಿದನು. ಅವರು ಮಾಡಿದ ತಪ್ಪನ್ನು ಕ್ಷಮಿಸಲು ಮತ್ತು ನಿರ್ಲಕ್ಷಿಸಲು ಅಲ್ಲಾಹು ಆಜ್ಞಾಪಿಸಿದನು.

التفاسير:

external-link copy
15 : 64

اِنَّمَاۤ اَمْوَالُكُمْ وَاَوْلَادُكُمْ فِتْنَةٌ ؕ— وَاللّٰهُ عِنْدَهٗۤ اَجْرٌ عَظِیْمٌ ۟

ನಿಮ್ಮ ಆಸ್ತಿ ಮತ್ತು ಮಕ್ಕಳು ಒಂದು ಪರೀಕ್ಷೆಯಾಗಿದೆ. ಅಲ್ಲಾಹನ ಬಳಿ ಮಹಾ ಪ್ರತಿಫಲವಿದೆ. info
التفاسير:

external-link copy
16 : 64

فَاتَّقُوا اللّٰهَ مَا اسْتَطَعْتُمْ وَاسْمَعُوْا وَاَطِیْعُوْا وَاَنْفِقُوْا خَیْرًا لِّاَنْفُسِكُمْ ؕ— وَمَنْ یُّوْقَ شُحَّ نَفْسِهٖ فَاُولٰٓىِٕكَ هُمُ الْمُفْلِحُوْنَ ۟

ಆದ್ದರಿಂದ ನಿಮಗೆ ಸಾಧ್ಯವಾಗುವಷ್ಟರ ಮಟ್ಟಿಗೆ ನೀವು ಅಲ್ಲಾಹನನ್ನು ಭಯಪಡಿರಿ. ಕಿವಿಗೊಟ್ಟು ಕೇಳಿರಿ ಮತ್ತು ಅನುಸರಿಸಿರಿ. ನಿಮಗೆ ಒಳಿತಾಗಿರುವ ವಿಧದಲ್ಲಿ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ. ಯಾರನ್ನು ಅವರ ಮನಸ್ಸಿನ ಆಸೆಬುರುಕತನದಿಂದ ಕಾಪಾಡಲಾಗಿದೆಯೋ ಅವರು ಯಶಸ್ವಿಯಾದವರು. info
التفاسير:

external-link copy
17 : 64

اِنْ تُقْرِضُوا اللّٰهَ قَرْضًا حَسَنًا یُّضٰعِفْهُ لَكُمْ وَیَغْفِرْ لَكُمْ ؕ— وَاللّٰهُ شَكُوْرٌ حَلِیْمٌ ۟ۙ

ನೀವು ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡುವುದಾದರೆ ಅವನು ಅದನ್ನು ನಿಮಗೆ ಹಲವು ಪಟ್ಟು ದ್ವಿಗುಣಗೊಳಿಸುವನು ಮತ್ತು ನಿಮ್ಮನ್ನು ಕ್ಷಮಿಸುವನು. ಅಲ್ಲಾಹು ಕೃತಜ್ಞನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ. info
التفاسير:

external-link copy
18 : 64

عٰلِمُ الْغَیْبِ وَالشَّهَادَةِ الْعَزِیْزُ الْحَكِیْمُ ۟۠

ಅವನು ದೃಶ್ಯ-ಅದೃಶ್ಯಗಳನ್ನು ತಿಳಿದವನಾಗಿದ್ದಾನೆ ಮತ್ತು ಪ್ರಬಲನು ಹಾಗೂ ವಿವೇಕಪೂರ್ಣನಾಗಿದ್ದಾನೆ. info
التفاسير: