Traduction des sens du Noble Coran - La traduction en Kannada - Hamzah Batûr

Numéro de la page: 158:151 close

external-link copy
68 : 7

اُبَلِّغُكُمْ رِسٰلٰتِ رَبِّیْ وَاَنَا لَكُمْ نَاصِحٌ اَمِیْنٌ ۟

ನನ್ನ ಪರಿಪಾಲಕನ (ಅಲ್ಲಾಹನ) ಸಂದೇಶಗಳನ್ನು ನಾನು ನಿಮಗೆ ತಲುಪಿಸುತ್ತೇನೆ. ನಿಶ್ಚಯವಾಗಿಯೂ ನಾನು ನಿಮ್ಮ ಪ್ರಾಮಾಣಿಕ ಹಿತೈಷಿಯಾಗಿದ್ದೇನೆ. info
التفاسير:

external-link copy
69 : 7

اَوَعَجِبْتُمْ اَنْ جَآءَكُمْ ذِكْرٌ مِّنْ رَّبِّكُمْ عَلٰی رَجُلٍ مِّنْكُمْ لِیُنْذِرَكُمْ ؕ— وَاذْكُرُوْۤا اِذْ جَعَلَكُمْ خُلَفَآءَ مِنْ بَعْدِ قَوْمِ نُوْحٍ وَّزَادَكُمْ فِی الْخَلْقِ بَصْۜطَةً ۚ— فَاذْكُرُوْۤا اٰلَآءَ اللّٰهِ لَعَلَّكُمْ تُفْلِحُوْنَ ۟

ನಿಮಗೆ ಎಚ್ಚರಿಕೆ ನೀಡಲು ನಿಮ್ಮಲ್ಲೇ ಇರುವ ಒಬ್ಬ ವ್ಯಕ್ತಿಯ ಮೂಲಕ ನಿಮ್ಮ ಪರಿಪಾಲಕನ (ಅಲ್ಲಾಹನ) ಉಪದೇಶವು ನಿಮ್ಮ ಬಳಿಗೆ ಬಂದಿರುವುದನ್ನು ಕಂಡು ನೀವು ಆಶ್ಚರ್ಯಪಡುತ್ತಿದ್ದೀರಾ? ನೂಹರ ಜನರ ಬಳಿಕ ಅಲ್ಲಾಹು ನಿಮ್ಮನ್ನು ಅವರ ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದನ್ನು ಸ್ಮರಿಸಿರಿ. ಅವನು ನಿಮಗೆ ದೇಹದಾರ್ಢ್ಯತೆಯನ್ನು ಹೆಚ್ಚಿಸಿಕೊಟ್ಟನು. ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ. ನೀವು ಯಶಸ್ವಿಯಾಗುವುದಕ್ಕಾಗಿ.” info
التفاسير:

external-link copy
70 : 7

قَالُوْۤا اَجِئْتَنَا لِنَعْبُدَ اللّٰهَ وَحْدَهٗ وَنَذَرَ مَا كَانَ یَعْبُدُ اٰبَآؤُنَا ۚ— فَاْتِنَا بِمَا تَعِدُنَاۤ اِنْ كُنْتَ مِنَ الصّٰدِقِیْنَ ۟

ಅವರು ಹೇಳಿದರು: “ನಾವು ಅಲ್ಲಾಹನನ್ನು ಮಾತ್ರ ಆರಾಧಿಸಬೇಕು ಮತ್ತು ನಮ್ಮ ಪೂರ್ವಜರು ಆರಾಧಿಸುತ್ತಿದ್ದ ದೇವರುಗಳನ್ನು ಬಿಟ್ಟುಬಿಡಬೇಕು ಎಂದು ಹೇಳಲು ನೀನು ನಮ್ಮ ಬಳಿಗೆ ಬಂದಿರುವೆಯಾ? ನೀನು ನಮಗೆ ಹೆದರಿಸುತ್ತಿರುವ ಆ ಶಿಕ್ಷೆಯನ್ನು ತಂದು ತೋರಿಸು. ನೀನು ಸತ್ಯವನ್ನೇ ಹೇಳುತ್ತಿದ್ದರೆ.” info
التفاسير:

external-link copy
71 : 7

قَالَ قَدْ وَقَعَ عَلَیْكُمْ مِّنْ رَّبِّكُمْ رِجْسٌ وَّغَضَبٌ ؕ— اَتُجَادِلُوْنَنِیْ فِیْۤ اَسْمَآءٍ سَمَّیْتُمُوْهَاۤ اَنْتُمْ وَاٰبَآؤُكُمْ مَّا نَزَّلَ اللّٰهُ بِهَا مِنْ سُلْطٰنٍ ؕ— فَانْتَظِرُوْۤا اِنِّیْ مَعَكُمْ مِّنَ الْمُنْتَظِرِیْنَ ۟

ಹೂದ್ ಹೇಳಿದರು: “ನಿಮ್ಮ ಪರಿಪಾಲಕನ (ಅಲ್ಲಾಹನ) ಶಿಕ್ಷೆ ಮತ್ತು ಕೋಪ ಈಗಾಗಲೇ ನಿಮ್ಮ ಮೇಲೆರಗಿದೆ. ನೀವು ಮತ್ತು ನಿಮ್ಮ ಪೂರ್ವಜರು ಹೆಸರಿಟ್ಟ ಕೆಲವು ದೇವರುಗಳ ಹೆಸರುಗಳನ್ನು ಹೇಳಿ ನೀವು ನನ್ನೊಂದಿಗೆ ತರ್ಕಿಸುತ್ತೀರಾ? ಅಲ್ಲಾಹು ಅದಕ್ಕೆ (ಅವರು ದೇವರುಗಳು ಎಂಬುದಕ್ಕೆ) ಯಾವುದೇ ಸಾಕ್ಷ್ಯಾಧಾರಗಳನ್ನು ಇಳಿಸಿಲ್ಲ. ನೀವು ಕಾಯಿರಿ. ನಿಶ್ಚಯವಾಗಿಯೂ ನಾನೂ ನಿಮ್ಮೊಂದಿಗೆ ಕಾಯುತ್ತೇನೆ.” info
التفاسير:

external-link copy
72 : 7

فَاَنْجَیْنٰهُ وَالَّذِیْنَ مَعَهٗ بِرَحْمَةٍ مِّنَّا وَقَطَعْنَا دَابِرَ الَّذِیْنَ كَذَّبُوْا بِاٰیٰتِنَا وَمَا كَانُوْا مُؤْمِنِیْنَ ۟۠

ನಂತರ ನಾವು ಹೂದರನ್ನು ಮತ್ತು ಅವರ ಅನುಯಾಯಿಗಳನ್ನು ನಮ್ಮ ದಯೆಯಿಂದ ರಕ್ಷಿಸಿದೆವು. ನಮ್ಮ ವಚನಗಳನ್ನು ನಿಷೇಧಿಸಿದವರನ್ನು ಮತ್ತು ವಿಶ್ವಾಸವಿಡದವರನ್ನು ನಾವು ನಿರ್ನಾಮ ಮಾಡಿದೆವು. info
التفاسير:

external-link copy
73 : 7

وَاِلٰی ثَمُوْدَ اَخَاهُمْ صٰلِحًا ۘ— قَالَ یٰقَوْمِ اعْبُدُوا اللّٰهَ مَا لَكُمْ مِّنْ اِلٰهٍ غَیْرُهٗ ؕ— قَدْ جَآءَتْكُمْ بَیِّنَةٌ مِّنْ رَّبِّكُمْ ؕ— هٰذِهٖ نَاقَةُ اللّٰهِ لَكُمْ اٰیَةً فَذَرُوْهَا تَاْكُلْ فِیْۤ اَرْضِ اللّٰهِ وَلَا تَمَسُّوْهَا بِسُوْٓءٍ فَیَاْخُذَكُمْ عَذَابٌ اَلِیْمٌ ۟

ಸಮೂದ್ ಗೋತ್ರದವರ ಬಳಿಗೆ ನಾವು ಅವರ ಸಹೋದರ ಸ್ವಾಲಿಹರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸ್ಪಷ್ಟ ಸಾಕ್ಷ್ಯಾಧಾರಗಳು ಬಂದಿವೆ. ಇದು ಅಲ್ಲಾಹನ ಒಂಟೆ. ಇದು ನಿಮಗೆ ದೃಷ್ಟಾಂತವಾಗಿದೆ. ಅದನ್ನು ಅದರ ಪಾಡಿಗೆ ಬಿಟ್ಟುಬಿಡಿ. ಅದು ಅಲ್ಲಾಹನ ಭೂಮಿಯಲ್ಲಿ ಮೇಯುತ್ತಿರಲಿ. ಅದಕ್ಕೆ ಯಾವುದೇ ತೊಂದರೆ ಕೊಡಬೇಡಿ. ಹಾಗೇನಾದರೂ ಆದರೆ ಯಾತನಾಮಯ ಶಿಕ್ಷೆಯು ನಿಮ್ಮನ್ನು ಹಿಡಿಯುವುದು. info
التفاسير: