કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

પેજ નંબર:close

external-link copy
113 : 2

وَقَالَتِ الْیَهُوْدُ لَیْسَتِ النَّصٰرٰی عَلٰی شَیْءٍ ۪— وَّقَالَتِ النَّصٰرٰی لَیْسَتِ الْیَهُوْدُ عَلٰی شَیْءٍ ۙ— وَّهُمْ یَتْلُوْنَ الْكِتٰبَ ؕ— كَذٰلِكَ قَالَ الَّذِیْنَ لَا یَعْلَمُوْنَ مِثْلَ قَوْلِهِمْ ۚ— فَاللّٰهُ یَحْكُمُ بَیْنَهُمْ یَوْمَ الْقِیٰمَةِ فِیْمَا كَانُوْا فِیْهِ یَخْتَلِفُوْنَ ۟

ಕ್ರೈಸ್ತರು ಸತ್ಯದಲ್ಲಿಲ್ಲ ಎಂದು ಯಹೂದಿಗಳು ಹೇಳುತ್ತಾರೆ. ಯಹೂದಿಗಳು ಸತ್ಯದಲ್ಲಿಲ್ಲ ಎಂದು ಕ್ರೈಸ್ತರು ಹೇಳುತ್ತಾರೆ. ವಾಸ್ತವವಾಗಿ, ಅವರೆಲ್ಲರೂ ಗ್ರಂಥವನ್ನು (ತೋರಾ) ಪಠಿಸುತ್ತಾರೆ. ತಿಳುವಳಿಕೆಯಿಲ್ಲದ ಜನರು ಕೂಡ ಅವರು ಹೇಳಿದಂತೆಯೇ ಹೇಳುತ್ತಾರೆ. ಅವರು ಯಾವ ವಿಷಯದಲ್ಲಿ ಭಿನ್ನಮತ ತಳೆದರೋ ಅದರ ಬಗ್ಗೆ ಪುನರುತ್ಥಾನ ದಿನದಂದು ಅಲ್ಲಾಹು ಅವರ ನಡುವೆ ತೀರ್ಪು ನೀಡುವನು. info
التفاسير:

external-link copy
114 : 2

وَمَنْ اَظْلَمُ مِمَّنْ مَّنَعَ مَسٰجِدَ اللّٰهِ اَنْ یُّذْكَرَ فِیْهَا اسْمُهٗ وَسَعٰی فِیْ خَرَابِهَا ؕ— اُولٰٓىِٕكَ مَا كَانَ لَهُمْ اَنْ یَّدْخُلُوْهَاۤ اِلَّا خَآىِٕفِیْنَ ؕ۬— لَهُمْ فِی الدُّنْیَا خِزْیٌ وَّلَهُمْ فِی الْاٰخِرَةِ عَذَابٌ عَظِیْمٌ ۟

ಅಲ್ಲಾಹನ ಮಸೀದಿಗಳಲ್ಲಿ ಅವನ ಹೆಸರನ್ನು ಸ್ಮರಿಸುವುದನ್ನು ತಡೆಯುವವನಿಗಿಂತ ಮತ್ತು ಅವುಗಳ (ಮಸೀದಿಗಳ) ನಾಶಕ್ಕಾಗಿ ಪರಿಶ್ರಮಿಸುವವನಿಗಿಂತ ದೊಡ್ಡ ಅಕ್ರಮಿ ಯಾರು? ಅವರು ಭಯಪಡುವವರಾಗಿಯೇ ಹೊರತು ಅವುಗಳನ್ನು ಪ್ರವೇಶಿಸಬಾರದಿತ್ತು. ಅವರಿಗೆ ಇಹಲೋಕದಲ್ಲಿ ಅಪಮಾನವಿದೆ ಮತ್ತು ಪರಲೋಕದಲ್ಲಿ ಕಠೋರ ಶಿಕ್ಷೆಯಿದೆ. info
التفاسير:

external-link copy
115 : 2

وَلِلّٰهِ الْمَشْرِقُ وَالْمَغْرِبُ ۗ— فَاَیْنَمَا تُوَلُّوْا فَثَمَّ وَجْهُ اللّٰهِ ؕ— اِنَّ اللّٰهَ وَاسِعٌ عَلِیْمٌ ۟

ಪೂರ್ವ ಮತ್ತು ಪಶ್ಚಿಮವು ಅಲ್ಲಾಹನಿಗೆ ಸೇರಿದ್ದು. ನೀವು ಯಾವ ದಿಕ್ಕಿಗೆ ತಿರುಗಿದರೂ ಅಲ್ಲಿ ಅಲ್ಲಾಹನ ಮುಖವಿದೆ. ನಿಶ್ಚಯವಾಗಿಯೂ ಅಲ್ಲಾಹು ಅತ್ಯಂತ ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ. info
التفاسير:

external-link copy
116 : 2

وَقَالُوا اتَّخَذَ اللّٰهُ وَلَدًا ۙ— سُبْحٰنَهٗ ؕ— بَلْ لَّهٗ مَا فِی السَّمٰوٰتِ وَالْاَرْضِ ؕ— كُلٌّ لَّهٗ قٰنِتُوْنَ ۟

ಅಲ್ಲಾಹನಿಗೆ ಮಕ್ಕಳಿದ್ದಾರೆ ಎಂದು ಅವರು ಹೇಳುತ್ತಾರೆ. (ಇಲ್ಲ, ಬದಲಿಗೆ) ಅವನು ಪರಿಶುದ್ಧನು! ಭೂಮ್ಯಾಕಾಶಗಳಲ್ಲಿರುವ ಎಲ್ಲಾ ಸೃಷ್ಟಿಗಳೂ ಅವನಿಗೆ ಸೇರಿದ್ದು. ಎಲ್ಲವೂ ಅವನಿಗೆ ವಿಧೇಯವಾಗಿವೆ. info
التفاسير:

external-link copy
117 : 2

بَدِیْعُ السَّمٰوٰتِ وَالْاَرْضِ ؕ— وَاِذَا قَضٰۤی اَمْرًا فَاِنَّمَا یَقُوْلُ لَهٗ كُنْ فَیَكُوْنُ ۟

ಅವನು ಯಾವುದೇ ಪೂರ್ವ ಮಾದರಿಯಿಲ್ಲದೆ ಭೂಮ್ಯಾಕಾಶಗಳನ್ನು ಸೃಷ್ಟಿಸಿದವನು. ಅವನು ಒಂದು ವಿಷಯವನ್ನು ತೀರ್ಮಾನಿಸಿದರೆ, ಅದಕ್ಕೆ ಉಂಟಾಗು ಎಂದು ಹೇಳುವನು; ಆಗ ಅದು ಉಂಟಾಗುವುದು. info
التفاسير:

external-link copy
118 : 2

وَقَالَ الَّذِیْنَ لَا یَعْلَمُوْنَ لَوْلَا یُكَلِّمُنَا اللّٰهُ اَوْ تَاْتِیْنَاۤ اٰیَةٌ ؕ— كَذٰلِكَ قَالَ الَّذِیْنَ مِنْ قَبْلِهِمْ مِّثْلَ قَوْلِهِمْ ؕ— تَشَابَهَتْ قُلُوْبُهُمْ ؕ— قَدْ بَیَّنَّا الْاٰیٰتِ لِقَوْمٍ یُّوْقِنُوْنَ ۟

ಜ್ಞಾನವಿಲ್ಲದವರು ಹೇಳುತ್ತಾರೆ: “ಅಲ್ಲಾಹನೇಕೆ ನಮ್ಮೊಡನೆ ಮಾತನಾಡುವುದಿಲ್ಲ? ಅಥವಾ ನಮ್ಮ ಬಳಿಗೆ ಒಂದು ದೃಷ್ಟಾಂತವೇಕೆ ಬರುವುದಿಲ್ಲ?” ಇವರು ಹೇಳಿದಂತೆಯೇ ಇವರಿಗಿಂತ ಮೊದಲಿನವರೂ ಹೇಳಿದ್ದರು. ಇವರ ಮತ್ತು ಅವರ ಹೃದಯಗಳು ಸಮಾನವಾಗಿವೆ. ದೃಢವಿಶ್ವಾಸವಿಡುವ ಜನರಿಗೆ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ. info
التفاسير:

external-link copy
119 : 2

اِنَّاۤ اَرْسَلْنٰكَ بِالْحَقِّ بَشِیْرًا وَّنَذِیْرًا ۙ— وَّلَا تُسْـَٔلُ عَنْ اَصْحٰبِ الْجَحِیْمِ ۟

ನಿಶ್ಚಯವಾಗಿಯೂ ನಾವು ನಿಮ್ಮನ್ನು ಸುವಾರ್ತೆ ನೀಡುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿ ಸತ್ಯದೊಂದಿಗೆ ಕಳುಹಿಸಿದ್ದೇವೆ. ನರಕವಾಸಿಗಳ ಕುರಿತು ನಿಮ್ಮೊಂದಿಗೆ ಪ್ರಶ್ನಿಸಲಾಗುವುದಿಲ್ಲ. info
التفاسير: