કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

ಕ್ವಾಫ್

external-link copy
1 : 50

قٓ ۫— وَالْقُرْاٰنِ الْمَجِیْدِ ۟ۚ

ಕ್ವಾಫ್. ಈ ಮಹತ್ವಪೂರ್ಣ ಕುರ್‌ಆನಿನ ಮೇಲಾಣೆ. info
التفاسير:

external-link copy
2 : 50

بَلْ عَجِبُوْۤا اَنْ جَآءَهُمْ مُّنْذِرٌ مِّنْهُمْ فَقَالَ الْكٰفِرُوْنَ هٰذَا شَیْءٌ عَجِیْبٌ ۟ۚ

ಅವರಿಂದಲೇ ಅವರಿಗೆ ಒಬ್ಬ ಮುನ್ನೆಚ್ಚರಿಕೆಗಾರ (ಪ್ರವಾದಿ) ಬಂದಿರುವುದನ್ನು ಕಂಡು ಅವರು ಆಶ್ಚರ್ಯಪಡುತ್ತಾರೆ. ಸತ್ಯನಿಷೇಧಿಗಳು ಹೇಳುತ್ತಾರೆ: “ಇದೊಂದು ಆಶ್ಚರ್ಯಕರ ಸಂಗತಿಯಾಗಿದೆ. info
التفاسير:

external-link copy
3 : 50

ءَاِذَا مِتْنَا وَكُنَّا تُرَابًا ۚ— ذٰلِكَ رَجْعٌ بَعِیْدٌ ۟

ನಾವು ಸತ್ತು ಮಣ್ಣಾಗಿ ಬಿಟ್ಟ ಬಳಿಕ (ಪುನಃ ಜೀವ ಪಡೆಯುವೆವೇ)? ಈ ಮರಳುವಿಕೆ ಬಹಳ ದೂರದ (ಅಸಂಭವ್ಯ) ಸಂಗತಿಯಾಗಿದೆ.” info
التفاسير:

external-link copy
4 : 50

قَدْ عَلِمْنَا مَا تَنْقُصُ الْاَرْضُ مِنْهُمْ ۚ— وَعِنْدَنَا كِتٰبٌ حَفِیْظٌ ۟

ನಿಶ್ಚಯವಾಗಿಯೂ ಭೂಮಿಯು ಅವರಿಂದ ಏನನ್ನು ಕಡಿಮೆ ಮಾಡುತ್ತಿದೆಯೆಂದು ನಮಗೆ ತಿಳಿದಿದೆ. ನಮ್ಮ ಬಳಿ ಎಲ್ಲವನ್ನೂ ನೆನಪಿಡುವ ಒಂದು ಗ್ರಂಥವಿದೆ.[1] info

[1] ಮನುಷ್ಯನು ಸಮಾಧಿಗೆ ಸೇರಿದ ಬಳಿಕ ಅವನ ಮಾಂಸ ಮತ್ತು ಮೂಳೆಗಳನ್ನು ಭೂಮಿ ತಿನ್ನುತ್ತದೆ. ಅಂದರೆ ಅವನು ಭೂಮಿಯಲ್ಲಿ ಜೀರ್ಣವಾಗಿ ಬಿಡುತ್ತಾನೆ. ಅವನ ಮಾಂಸ, ಮೂಳೆಗಳು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಭೂಮಿ ತಿನ್ನುವುದನ್ನು ಅಲ್ಲಾಹು ತಿಳಿಯುತ್ತಾನೆ. ಅವೆಲ್ಲವೂ ಒಂದು ಗ್ರಂಥದಲ್ಲಿ ದಾಖಲಾಗಿರುತ್ತದೆ. ಆದ್ದರಿಂದ ಅವನನ್ನು ಪುನಃ ಸೃಷ್ಟಿಸುವುದು ಅಲ್ಲಾಹನಿಗೆ ಕಷ್ಟವೇ ಅಲ್ಲ.

التفاسير:

external-link copy
5 : 50

بَلْ كَذَّبُوْا بِالْحَقِّ لَمَّا جَآءَهُمْ فَهُمْ فِیْۤ اَمْرٍ مَّرِیْجٍ ۟

ವಾಸ್ತವವಾಗಿ, ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದ್ದರಿಂದ ಅವರು ಗೊಂದಲಪೂರ್ಣ (ಅನಿಶ್ಚಿತ) ಸ್ಥಿತಿಯಲ್ಲಿದ್ದಾರೆ. info
التفاسير:

external-link copy
6 : 50

اَفَلَمْ یَنْظُرُوْۤا اِلَی السَّمَآءِ فَوْقَهُمْ كَیْفَ بَنَیْنٰهَا وَزَیَّنّٰهَا وَمَا لَهَا مِنْ فُرُوْجٍ ۟

ಅವರ ಮೇಲ್ಭಾಗದಲ್ಲಿರುವ ಆಕಾಶವನ್ನು ಅವರು ನೋಡುವುದಿಲ್ಲವೇ? ನಾವು ಅದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವು ಎಂದು? ಅದರಲ್ಲಿ ಯಾವುದೇ ಬಿರುಕುಗಳಿಲ್ಲ. info
التفاسير:

external-link copy
7 : 50

وَالْاَرْضَ مَدَدْنٰهَا وَاَلْقَیْنَا فِیْهَا رَوَاسِیَ وَاَنْۢبَتْنَا فِیْهَا مِنْ كُلِّ زَوْجٍ بَهِیْجٍ ۟ۙ

ನಾವು ಭೂಮಿಯನ್ನು ಹರಡಿಸಿದೆವು ಮತ್ತು ಅದರಲ್ಲಿ ಪರ್ವತಗಳನ್ನು ಸ್ಥಾಪಿಸಿದೆವು. ನಾವು ಅದರಲ್ಲಿ ಎಲ್ಲಾ ವಿಧಗಳ ಸುಂದರ ವಸ್ತುಗಳನ್ನು ಬೆಳೆಸಿದೆವು. info
التفاسير:

external-link copy
8 : 50

تَبْصِرَةً وَّذِكْرٰی لِكُلِّ عَبْدٍ مُّنِیْبٍ ۟

(ಅಲ್ಲಾಹನ ಕಡೆಗೆ ಮರಳುವ) ಪ್ರತಿಯೊಬ್ಬ ದಾಸನಿಗೂ ಅಂತರ್ದೃಷ್ಟಿ ಮತ್ತು ಉಪದೇಶದ ರೂಪದಲ್ಲಿ. info
التفاسير:

external-link copy
9 : 50

وَنَزَّلْنَا مِنَ السَّمَآءِ مَآءً مُّبٰرَكًا فَاَنْۢبَتْنَا بِهٖ جَنّٰتٍ وَّحَبَّ الْحَصِیْدِ ۟ۙ

ನಾವು ಆಕಾಶದಿಂದ ಸಮೃದ್ಧವಾದ ಮಳೆಯನ್ನು ಸುರಿಸಿದೆವು. ಅದರ ಮೂಲಕ ತೋಟಗಳನ್ನು ಮತ್ತು ಕಟಾವು ಮಾಡುವ ಧಾನ್ಯಗಳನ್ನು ಬೆಳೆಸಿದೆವು. info
التفاسير:

external-link copy
10 : 50

وَالنَّخْلَ بٰسِقٰتٍ لَّهَا طَلْعٌ نَّضِیْدٌ ۟ۙ

ಮತ್ತು ಪದರ ಪದರ ಗೊನೆಗಳಿರುವ ಎತ್ತರವಾದ ಖರ್ಜೂರದ ಮರಗಳನ್ನು (ಬೆಳೆಸಿದೆವು) info
التفاسير:

external-link copy
11 : 50

رِّزْقًا لِّلْعِبَادِ ۙ— وَاَحْیَیْنَا بِهٖ بَلْدَةً مَّیْتًا ؕ— كَذٰلِكَ الْخُرُوْجُ ۟

ದಾಸರ ಉಪಜೀವನಕ್ಕಾಗಿ. ನಾವು ಅದರಿಂದ (ಆ ನೀರಿನಿಂದ) ನಿರ್ಜೀವವಾಗಿದ್ದ ಪ್ರದೇಶಕ್ಕೆ ಜೀವವನ್ನು ನೀಡಿದೆವು. ಇದೇ ರೀತಿ (ಸಮಾಧಿಗಳಿಂದ ನಿಮ್ಮನ್ನು) ಹೊರತೆಗೆಯಲಾಗುವುದು. info
التفاسير:

external-link copy
12 : 50

كَذَّبَتْ قَبْلَهُمْ قَوْمُ نُوْحٍ وَّاَصْحٰبُ الرَّسِّ وَثَمُوْدُ ۟ۙ

ಇವರಿಗಿಂತ ಮೊದಲು ನೂಹರ ಜನತೆ, ರಸ್ಸ್‌ನ ಜನರು ಮತ್ತು ಸಮೂದ್ ಗೋತ್ರದವರು ಸತ್ಯವನ್ನು ನಿಷೇಧಿಸಿದರು. info
التفاسير:

external-link copy
13 : 50

وَعَادٌ وَّفِرْعَوْنُ وَاِخْوَانُ لُوْطٍ ۟ۙ

ಆದ್ ಗೋತ್ರದವರು, ಫರೋಹ ಮತ್ತು ಲೂತರ ಸಹೋದರರು (ಜನರು) ಕೂಡ. info
التفاسير:

external-link copy
14 : 50

وَّاَصْحٰبُ الْاَیْكَةِ وَقَوْمُ تُبَّعٍ ؕ— كُلٌّ كَذَّبَ الرُّسُلَ فَحَقَّ وَعِیْدِ ۟

ಐಕತ್‌ನ ಜನರು ಮತ್ತು ತುಬ್ಬಅ್‌ನ ಜನರು ಕೂಡ. ಅವರೆಲ್ಲರೂ ಸಂದೇಶವಾಹಕರುಗಳನ್ನು ನಿಷೇಧಿಸಿದರು. ಆದ್ದರಿಂದ ಅವರ ಮೇಲೆ ನನ್ನ ವಾಗ್ದಾನವು ಖಾತ್ರಿಯಾಗಿ ಬಿಟ್ಟಿತು. info
التفاسير:

external-link copy
15 : 50

اَفَعَیِیْنَا بِالْخَلْقِ الْاَوَّلِ ؕ— بَلْ هُمْ فِیْ لَبْسٍ مِّنْ خَلْقٍ جَدِیْدٍ ۟۠

ನಾವು ಪ್ರಥಮ ಬಾರಿ ಸೃಷ್ಟಿಸಿದಾಗಲೇ ಸುಸ್ತಾದೆವೇ? ಅಲ್ಲ, ವಾಸ್ತವವಾಗಿ ಅವರು ಹೊಸ ಸೃಷ್ಟಿಯ ಬಗ್ಗೆ ಸಂಶಯಪಡುತ್ತಾರೆ. info
التفاسير: