કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

ಅತ್ತಗಾಬುನ್

external-link copy
1 : 64

یُسَبِّحُ لِلّٰهِ مَا فِی السَّمٰوٰتِ وَمَا فِی الْاَرْضِ ۚ— لَهُ الْمُلْكُ وَلَهُ الْحَمْدُ ؗ— وَهُوَ عَلٰی كُلِّ شَیْءٍ قَدِیْرٌ ۟

ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಸಾರ್ವಭೌಮತ್ವವು ಅವನಿಗೆ ಸೇರಿದ್ದು ಮತ್ತು ಸರ್ವಸ್ತುತಿಯು ಅವನಿಗೆ ಮೀಸಲು. ಅವನು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير:

external-link copy
2 : 64

هُوَ الَّذِیْ خَلَقَكُمْ فَمِنْكُمْ كَافِرٌ وَّمِنْكُمْ مُّؤْمِنٌ ؕ— وَاللّٰهُ بِمَا تَعْمَلُوْنَ بَصِیْرٌ ۟

ಅವನೇ ನಿಮ್ಮನ್ನು ಸೃಷ್ಟಿಸಿದವನು. ನಿಮ್ಮಲ್ಲಿ ಸತ್ಯನಿಷೇಧಿಗಳಿದ್ದಾರೆ ಮತ್ತು ಸತ್ಯವಿಶ್ವಾಸಿಗಳೂ ಇದ್ದಾರೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ. info
التفاسير:

external-link copy
3 : 64

خَلَقَ السَّمٰوٰتِ وَالْاَرْضَ بِالْحَقِّ وَصَوَّرَكُمْ فَاَحْسَنَ صُوَرَكُمْ ۚ— وَاِلَیْهِ الْمَصِیْرُ ۟

ಅವನು ಭೂಮ್ಯಾಕಾಶಗಳನ್ನು ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ಅವನು ನಿಮಗೆ ರೂಪವನ್ನು ನೀಡಿದ್ದಾನೆ ಮತ್ತು ನಿಮ್ಮ ರೂಪಗಳನ್ನು ಅತ್ಯುತ್ತಮಗೊಳಿಸಿದ್ದಾನೆ. ಗಮ್ಯಸ್ಥಾನವು ಅವನ ಬಳಿಯಲ್ಲೇ ಆಗಿದೆ. info
التفاسير:

external-link copy
4 : 64

یَعْلَمُ مَا فِی السَّمٰوٰتِ وَالْاَرْضِ وَیَعْلَمُ مَا تُسِرُّوْنَ وَمَا تُعْلِنُوْنَ ؕ— وَاللّٰهُ عَلِیْمٌۢ بِذَاتِ الصُّدُوْرِ ۟

ಭೂಮ್ಯಾಕಾಶಗಳಲ್ಲಿರುವುದೆಲ್ಲವನ್ನೂ ಅವನು ತಿಳಿದಿದ್ದಾನೆ. ನೀವು ಮುಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅವನು ತಿಳಿಯುತ್ತಾನೆ. ಅಲ್ಲಾಹು ಎದೆಗಳ ಒಳಗಿರುವುದನ್ನು ತಿಳಿಯುತ್ತಾನೆ. info
التفاسير:

external-link copy
5 : 64

اَلَمْ یَاْتِكُمْ نَبَؤُا الَّذِیْنَ كَفَرُوْا مِنْ قَبْلُ ؗ— فَذَاقُوْا وَبَالَ اَمْرِهِمْ وَلَهُمْ عَذَابٌ اَلِیْمٌ ۟

ಇದಕ್ಕಿಂತ ಮೊದಲು ಸತ್ಯವನ್ನು ನಿಷೇಧಿಸಿದವರ ಸಮಾಚಾರವು ನಿಮಗೆ ತಲುಪಿಲ್ಲವೇ? ಅವರು ಅವರ ದುಷ್ಕರ್ಮಗಳ ರುಚಿಯನ್ನು ನೋಡಿದರು. ಅವರಿಗೆ (ಪರಲೋಕದಲ್ಲಿ) ಯಾತನಾಮಯ ಶಿಕ್ಷೆಯಿದೆ. info
التفاسير:

external-link copy
6 : 64

ذٰلِكَ بِاَنَّهٗ كَانَتْ تَّاْتِیْهِمْ رُسُلُهُمْ بِالْبَیِّنٰتِ فَقَالُوْۤا اَبَشَرٌ یَّهْدُوْنَنَا ؗ— فَكَفَرُوْا وَتَوَلَّوْا وَّاسْتَغْنَی اللّٰهُ ؕ— وَاللّٰهُ غَنِیٌّ حَمِیْدٌ ۟

ಅದೇಕೆಂದರೆ, ಅವರ ಬಳಿಗೆ ಸಂದೇಶವಾಹಕರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬರುತ್ತಿದ್ದರು. ಆದರೆ ಅವರು ಕೇಳಿದರು: “ಒಬ್ಬ ಮನುಷ್ಯ ನಮಗೆ ದಾರಿ ತೋರಿಸುವುದೇ?” ಅವರು ನಿಷೇಧಿಸಿದರು ಮತ್ತು ಮುಖ ತಿರುಗಿಸಿ ನಡೆದರು. ಅಲ್ಲಾಹು ಅವರ ಬಗ್ಗೆ ನಿರಪೇಕ್ಷನಾದನು. ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ. info
التفاسير:

external-link copy
7 : 64

زَعَمَ الَّذِیْنَ كَفَرُوْۤا اَنْ لَّنْ یُّبْعَثُوْا ؕ— قُلْ بَلٰی وَرَبِّیْ لَتُبْعَثُنَّ ثُمَّ لَتُنَبَّؤُنَّ بِمَا عَمِلْتُمْ ؕ— وَذٰلِكَ عَلَی اللّٰهِ یَسِیْرٌ ۟

ತಮ್ಮನ್ನು ಪುನಃ ಜೀವ ನೀಡಿ ಎಬ್ಬಿಸಲಾಗುವುದಿಲ್ಲ ಎಂದು ಸತ್ಯನಿಷೇಧಿಗಳು ವಾದಿಸಿದರು. ಹೇಳಿರಿ: “ಹೌದು! ನನ್ನ ಪರಿಪಾಲಕನ ಮೇಲಾಣೆ! ಖಂಡಿತವಾಗಿಯೂ ನಿಮಗೆ ಜೀವ ನೀಡಿ ಎಬ್ಬಿಸಲಾಗುವುದು. ನಂತರ ನೀವು ಮಾಡಿದ ಕರ್ಮಗಳ ಬಗ್ಗೆ ನಿಮಗೆ ಖಂಡಿತ ತಿಳಿಸಲಾಗುವುದು. ಅದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.” info
التفاسير:

external-link copy
8 : 64

فَاٰمِنُوْا بِاللّٰهِ وَرَسُوْلِهٖ وَالنُّوْرِ الَّذِیْۤ اَنْزَلْنَا ؕ— وَاللّٰهُ بِمَا تَعْمَلُوْنَ خَبِیْرٌ ۟

ಆದ್ದರಿಂದ ನೀವು ಅಲ್ಲಾಹನಲ್ಲಿ, ಅವನ ಸಂದೇಶವಾಹಕರಲ್ಲಿ ಮತ್ತು ನಾವು ಅವತೀರ್ಣಗೊಳಿಸಿದ ಬೆಳಕಿನಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿಡಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ. info
التفاسير:

external-link copy
9 : 64

یَوْمَ یَجْمَعُكُمْ لِیَوْمِ الْجَمْعِ ذٰلِكَ یَوْمُ التَّغَابُنِ ؕ— وَمَنْ یُّؤْمِنْ بِاللّٰهِ وَیَعْمَلْ صَالِحًا یُّكَفِّرْ عَنْهُ سَیِّاٰتِهٖ وَیُدْخِلْهُ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَاۤ اَبَدًا ؕ— ذٰلِكَ الْفَوْزُ الْعَظِیْمُ ۟

ಒಟ್ಟುಗೂಡಿಸುವ ಆ ದಿನಕ್ಕಾಗಿ (ಪುನರುತ್ಥಾನ ದಿನಕ್ಕಾಗಿ) ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವ ದಿನ! ಅದು ಸೋಲು-ಗೆಲುವಿನ ದಿನವಾಗಿದೆ. ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಮತ್ತು ಸತ್ಕರ್ಮವೆಸಗುತ್ತಾನೋ ಅವನ ಪಾಪಗಳನ್ನು ಅಲ್ಲಾಹು ಅಳಿಸುತ್ತಾನೆ ಮತ್ತು ಅವನನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುತ್ತಾನೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದೇ ಮಹಾ ವಿಜಯ. info
التفاسير: