કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

પેજ નંબર:close

external-link copy
131 : 7

فَاِذَا جَآءَتْهُمُ الْحَسَنَةُ قَالُوْا لَنَا هٰذِهٖ ۚ— وَاِنْ تُصِبْهُمْ سَیِّئَةٌ یَّطَّیَّرُوْا بِمُوْسٰی وَمَنْ مَّعَهٗ ؕ— اَلَاۤ اِنَّمَا طٰٓىِٕرُهُمْ عِنْدَ اللّٰهِ وَلٰكِنَّ اَكْثَرَهُمْ لَا یَعْلَمُوْنَ ۟

ಅವರಿಗೆ ಒಳಿತುಂಟಾದರೆ, “ಇದು ನಮ್ಮ ಸಿಗಬೇಕಾದ ಹಕ್ಕು” ಎಂದು ಅವರು ಹೇಳುತ್ತಾರೆ. ಅವರಿಗೆ ಕೆಡುಕು ಬಾಧಿಸಿದರೆ ಮೂಸಾ ಮತ್ತು ಅವರ ಅನುಯಾಯಿಗಳನ್ನು ಅಪಶಕುನವಾಗಿ ಕಾಣುತ್ತಾರೆ. ತಿಳಿಯಿರಿ! ಅವರ ಶಕುನವು ಅಲ್ಲಾಹನ ಬಳಿಯಲ್ಲಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. info
التفاسير:

external-link copy
132 : 7

وَقَالُوْا مَهْمَا تَاْتِنَا بِهٖ مِنْ اٰیَةٍ لِّتَسْحَرَنَا بِهَا ۙ— فَمَا نَحْنُ لَكَ بِمُؤْمِنِیْنَ ۟

ಅವರು ಹೇಳಿದರು: “ನೀನು ನಮ್ಮನ್ನು ಮೋಡಿ ಮಾಡಲು ಯಾವುದೇ ದೃಷ್ಟಾಂತವನ್ನು ತಂದರೂ ನಾವು ನಿನ್ನಲ್ಲಿ ವಿಶ್ವಾಸವಿಡುವುದಿಲ್ಲ.” info
التفاسير:

external-link copy
133 : 7

فَاَرْسَلْنَا عَلَیْهِمُ الطُّوْفَانَ وَالْجَرَادَ وَالْقُمَّلَ وَالضَّفَادِعَ وَالدَّمَ اٰیٰتٍ مُّفَصَّلٰتٍ ۫— فَاسْتَكْبَرُوْا وَكَانُوْا قَوْمًا مُّجْرِمِیْنَ ۟

ಆಗ ನಾವು ಅವರ ವಿರುದ್ಧ ಪ್ರವಾಹ, ಮಿಡತೆ, ಹೇನು, ಕಪ್ಪೆಗಳು ಮತ್ತು ರಕ್ತವನ್ನು ಸ್ಪಷ್ಟ ದೃಷ್ಟಾಂತಗಳಾಗಿ ಕಳುಹಿಸಿದೆವು. ಆದರೆ ಅವರು ಅಹಂಕಾರದಿಂದ ವರ್ತಿಸಿದರು. ಅವರು ಅಪರಾಧವೆಸಗಿದ ಜನರಾಗಿದ್ದರು. info
التفاسير:

external-link copy
134 : 7

وَلَمَّا وَقَعَ عَلَیْهِمُ الرِّجْزُ قَالُوْا یٰمُوْسَی ادْعُ لَنَا رَبَّكَ بِمَا عَهِدَ عِنْدَكَ ۚ— لَىِٕنْ كَشَفْتَ عَنَّا الرِّجْزَ لَنُؤْمِنَنَّ لَكَ وَلَنُرْسِلَنَّ مَعَكَ بَنِیْۤ اِسْرَآءِیْلَ ۟ۚ

ಶಿಕ್ಷೆಯು ಅವರ ಮೇಲೆರಗಿದಾಗ ಅವರು ಹೇಳಿದರು: “ಓ ಮೂಸಾ! ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ನೀಡಿದ ಭರವಸೆಯಂತೆ ನೀವು ಅವನನ್ನು ಕರೆದು ಪ್ರಾರ್ಥಿಸಿರಿ. ನೀವು ಈ ಶಿಕ್ಷೆಯನ್ನು ನಮ್ಮಿಂದ ನಿವಾರಿಸಿದರೆ ನಾವು ಖಂಡಿತ ವಿಶ್ವಾಸವಿಡುವೆವು ಮತ್ತು ಇಸ್ರಾಯೇಲ್ ಮಕ್ಕಳನ್ನು ಖಂಡಿತ ನಿಮ್ಮ ಜೊತೆಗೆ ಕಳುಹಿಸಿಕೊಡುವೆವು.” info
التفاسير:

external-link copy
135 : 7

فَلَمَّا كَشَفْنَا عَنْهُمُ الرِّجْزَ اِلٰۤی اَجَلٍ هُمْ بٰلِغُوْهُ اِذَا هُمْ یَنْكُثُوْنَ ۟

ಆದರೆ ಅವರು ತಲುಪಬೇಕಾದ ಒಂದು ಅವಧಿಯ ತನಕ ನಾವು ಅವರಿಂದ ಶಿಕ್ಷೆಯನ್ನು ನಿವಾರಿಸಿದಾಗ, ಅಗೋ ಅವರು ಮಾತು ತಪ್ಪುತ್ತಿದ್ದಾರೆ. info
التفاسير:

external-link copy
136 : 7

فَانْتَقَمْنَا مِنْهُمْ فَاَغْرَقْنٰهُمْ فِی الْیَمِّ بِاَنَّهُمْ كَذَّبُوْا بِاٰیٰتِنَا وَكَانُوْا عَنْهَا غٰفِلِیْنَ ۟

ಆದ್ದರಿಂದ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರನ್ನು ಸಮುದ್ರದಲ್ಲಿ ಮುಳುಗಿಸಿ ಬಿಟ್ಟೆವು. ಏಕೆಂದರೆ, ಅವರು ನಮ್ಮ ವಚನಗಳನ್ನು ನಿಷೇಧಿಸಿದ್ದರು ಮತ್ತು ಅವುಗಳ ಬಗ್ಗೆ ನಿರ್ಲಕ್ಷ್ಯರಾಗಿದ್ದರು. info
التفاسير:

external-link copy
137 : 7

وَاَوْرَثْنَا الْقَوْمَ الَّذِیْنَ كَانُوْا یُسْتَضْعَفُوْنَ مَشَارِقَ الْاَرْضِ وَمَغَارِبَهَا الَّتِیْ بٰرَكْنَا فِیْهَا ؕ— وَتَمَّتْ كَلِمَتُ رَبِّكَ الْحُسْنٰی عَلٰی بَنِیْۤ اِسْرَآءِیْلَ ۙ۬— بِمَا صَبَرُوْا ؕ— وَدَمَّرْنَا مَا كَانَ یَصْنَعُ فِرْعَوْنُ وَقَوْمُهٗ وَمَا كَانُوْا یَعْرِشُوْنَ ۟

ದಬ್ಬಾಳಿಕೆಗೆ ಗುರಿಯಾದ ಜನರನ್ನು (ಇಸ್ರಾಯೇಲ್ ಮಕ್ಕಳನ್ನು) ನಾವು ಸಮೃದ್ಧಗೊಳಿಸಿದ ಭೂಮಿಯ ಪೂರ್ವ ಮತ್ತು ಪಶ್ಚಿಮ ಭಾಗಗಳ ಉತ್ತರಾಧಿಕಾರಿಗಳಾಗಿ ಮಾಡಿದೆವು. ಇಸ್ರಾಯೇಲ್ ಮಕ್ಕಳು ತಾಳ್ಮೆ ತೋರಿದ ಕಾರಣ ಅವರಿಗೆ ಸಂಬಂಧಿಸಿದ ನಿಮ್ಮ ಪರಿಪಾಲಕನ (ಅಲ್ಲಾಹನ) ಉತ್ತಮ ವಚನವು ನೆರವೇರಿತು. ಫರೋಹ ಮತ್ತು ಅವನ ಜನರು ನಿರ್ಮಿಸಿದ್ದನ್ನು ಮತ್ತು ಅವರು ಎತ್ತರಿಸಿ ಕಟ್ಟಿದ್ದನ್ನು ನಾವು ನಾಶ ಮಾಡಿದೆವು. info
التفاسير: