Fassarar Ma'anonin Alqura'ni - Fassarar Kanadiy - Hamza Batur

Lambar shafi:close

external-link copy
43 : 68

خَاشِعَةً اَبْصَارُهُمْ تَرْهَقُهُمْ ذِلَّةٌ ؕ— وَقَدْ كَانُوْا یُدْعَوْنَ اِلَی السُّجُوْدِ وَهُمْ سٰلِمُوْنَ ۟

ಅವರ ಕಣ್ಣುಗಳು ತಗ್ಗಿಕೊಂಡಿರುವುವು ಮತ್ತು ಅವಮಾನವು ಅವರನ್ನು ಆವರಿಸಿಕೊಂಡಿರುವುದು. ವಾಸ್ತವದಲ್ಲಿ ಅವರು ಇಹಲೋಕದಲ್ಲಿ ಸುಸ್ಥಿತಿಯಲ್ಲಿದ್ದಾಗಲೂ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುತ್ತಿತ್ತು. info
التفاسير:

external-link copy
44 : 68

فَذَرْنِیْ وَمَنْ یُّكَذِّبُ بِهٰذَا الْحَدِیْثِ ؕ— سَنَسْتَدْرِجُهُمْ مِّنْ حَیْثُ لَا یَعْلَمُوْنَ ۟ۙ

ಆದ್ದರಿಂದ ನನ್ನನ್ನು ಮತ್ತು ಈ ಮಾತನ್ನು (ಕುರ್‌ಆನನ್ನು) ನಿಷೇಧಿಸುವವನನ್ನು ಬಿಟ್ಟುಬಿಡಿ.[1] ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಹಿಡಿಯುವೆವು. info

[1] ಅಂದರೆ ಅವರ ವಿಷಯವನ್ನು ನಾನು ನೋಡಿಕೊಳ್ಳುತ್ತೇನೆ.

التفاسير:

external-link copy
45 : 68

وَاُمْلِیْ لَهُمْ ؕ— اِنَّ كَیْدِیْ مَتِیْنٌ ۟

ನಾನು ಅವರಿಗೆ ಕಾಲಾವಕಾಶ ನೀಡುವೆನು. ನಿಶ್ಚಯವಾಗಿಯೂ ನನ್ನ ತಂತ್ರವು ಬಲಿಷ್ಠವಾಗಿದೆ. info
التفاسير:

external-link copy
46 : 68

اَمْ تَسْـَٔلُهُمْ اَجْرًا فَهُمْ مِّنْ مَّغْرَمٍ مُّثْقَلُوْنَ ۟ۚ

ನೀವು ಅವರೊಡನೆ ಪ್ರತಿಫಲವನ್ನು ಕೇಳಿ ಅವರು (ಅದನ್ನು ನೀಡಲು ಸಾಧ್ಯವಾಗದೆ) ಸಾಲದ ಹೊರೆಯನ್ನು ಹೊರುತ್ತಿದ್ದಾರೆಯೇ? info
التفاسير:

external-link copy
47 : 68

اَمْ عِنْدَهُمُ الْغَیْبُ فَهُمْ یَكْتُبُوْنَ ۟

ಅವರ ಬಳಿ ಅದೃಶ್ಯ ಜ್ಞಾನವಿದ್ದು ಅವರು ಅದನ್ನು ಬರೆಯುತ್ತಿದ್ದಾರೆಯೇ? info
التفاسير:

external-link copy
48 : 68

فَاصْبِرْ لِحُكْمِ رَبِّكَ وَلَا تَكُنْ كَصَاحِبِ الْحُوْتِ ۘ— اِذْ نَادٰی وَهُوَ مَكْظُوْمٌ ۟ؕ

ಆದ್ದರಿಂದ, ನಿಮ್ಮ ಪರಿಪಾಲಕನ (ಅಲ್ಲಾಹನ) ತೀರ್ಮಾನಕ್ಕಾಗಿ ತಾಳ್ಮೆಯಿಂದಿರಿ. ನೀವು ಮೀನಿನ ಸಂಗಡಿಗನಂತೆ (ಯೂನುಸರಂತೆ) ಆಗಬೇಡಿ. ತೀವ್ರ ದುಃಖಿತನಾಗಿದ್ದ ಸ್ಥಿತಿಯಲ್ಲಿ ಅವರು ಕರೆದು ಪ್ರಾರ್ಥಿಸಿದ ಸಂದರ್ಭ. info
التفاسير:

external-link copy
49 : 68

لَوْلَاۤ اَنْ تَدٰرَكَهٗ نِعْمَةٌ مِّنْ رَّبِّهٖ لَنُبِذَ بِالْعَرَآءِ وَهُوَ مَذْمُوْمٌ ۟

ಅವರ ಪರಿಪಾಲಕನ (ಅಲ್ಲಾಹನ) ಅನುಗ್ರಹವು ಅವರನ್ನು ತಲುಪದಿರುತ್ತಿದ್ದರೆ, ಅವರನ್ನು ಆಕ್ಷೇಪಿತ ಸ್ಥಿತಿಯಲ್ಲಿ ಬಯಲು ತೀರಕ್ಕೆ ಎಸೆಯಲಾಗುತ್ತಿತ್ತು. info
التفاسير:

external-link copy
50 : 68

فَاجْتَبٰىهُ رَبُّهٗ فَجَعَلَهٗ مِنَ الصّٰلِحِیْنَ ۟

ಅವರ ಪರಿಪಾಲಕ (ಅಲ್ಲಾಹು) ಅವರನ್ನು ಆರಿಸಿದನು ಮತ್ತು ಅವರನ್ನು ನೀತಿವಂತರಲ್ಲಿ ಸೇರಿಸಿದನು. info
التفاسير:

external-link copy
51 : 68

وَاِنْ یَّكَادُ الَّذِیْنَ كَفَرُوْا لَیُزْلِقُوْنَكَ بِاَبْصَارِهِمْ لَمَّا سَمِعُوا الذِّكْرَ وَیَقُوْلُوْنَ اِنَّهٗ لَمَجْنُوْنٌ ۟ۘ

ಸತ್ಯನಿಷೇಧಿಗಳು ಈ ಉಪದೇಶವನ್ನು (ಕುರ್‌ಆನನ್ನು) ಕೇಳಿದಾಗ, ತಮ್ಮ ಕೆಟ್ಟದೃಷ್ಟಿಗಳಿಂದ ನಿಮ್ಮನ್ನು ಇನ್ನೇನು ಜಾರುವಂತೆ ಮಾಡುವುದರಲ್ಲಿದ್ದರು.[1] ಅವರು ಹೇಳುತ್ತಿದ್ದರು: “ನಿಶ್ಚಯವಾಗಿಯೂ ಅವನೊಬ್ಬ ಮಾನಸಿಕ ಅಸ್ವಸ್ಥ.” info

[1] ಅಂದರೆ ನಿಮಗೆ ಅಲ್ಲಾಹನ ಸಂರಕ್ಷಣೆಯಿಲ್ಲದಿರುತ್ತಿದ್ದರೆ ನೀವು ಸತ್ಯನಿಷೇಧಿಗಳ ಕೆಟ್ಟದೃಷ್ಟಿಗೆ ಬಲಿಯಾಗುತ್ತಿದ್ದಿರಿ.

التفاسير:

external-link copy
52 : 68

وَمَا هُوَ اِلَّا ذِكْرٌ لِّلْعٰلَمِیْنَ ۟۠

ಇದು (ಕುರ್‌ಆನ್) ಸರ್ವಲೋಕಗಳ ಜನರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ. info
التفاسير: