क़ुरआन के अर्थों का अनुवाद - कन्नड़ अनुवाद - हमज़ा बतूर

ಅಲ್ -ಅಹ್ಕಾಫ್

external-link copy
1 : 46

حٰمٓ ۟ۚ

ಹಾ-ಮೀಮ್. info
التفاسير:

external-link copy
2 : 46

تَنْزِیْلُ الْكِتٰبِ مِنَ اللّٰهِ الْعَزِیْزِ الْحَكِیْمِ ۟

ಈ ಗ್ರಂಥವು ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹನಿಂದ ಅವತೀರ್ಣವಾಗಿದೆ. info
التفاسير:

external-link copy
3 : 46

مَا خَلَقْنَا السَّمٰوٰتِ وَالْاَرْضَ وَمَا بَیْنَهُمَاۤ اِلَّا بِالْحَقِّ وَاَجَلٍ مُّسَمًّی ؕ— وَالَّذِیْنَ كَفَرُوْا عَمَّاۤ اُنْذِرُوْا مُعْرِضُوْنَ ۟

ನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಸತ್ಯ ಸಮೇತವಾಗಿ ಮತ್ತು ಒಂದು ನಿಶ್ಚಿತ ಅವಧಿಗಾಗಿ ಮಾತ್ರ ಸೃಷ್ಟಿಸಿದ್ದೇವೆ. ಸತ್ಯನಿಷೇಧಿಗಳು ಅವರಿಗೆ ನೀಡಲಾಗುತ್ತಿರುವ ಎಚ್ಚರಿಕೆಯನ್ನು ಕಡೆಗಣಿಸಿ ವಿಮುಖರಾಗುತ್ತಿದ್ದಾರೆ. info
التفاسير:

external-link copy
4 : 46

قُلْ اَرَءَیْتُمْ مَّا تَدْعُوْنَ مِنْ دُوْنِ اللّٰهِ اَرُوْنِیْ مَاذَا خَلَقُوْا مِنَ الْاَرْضِ اَمْ لَهُمْ شِرْكٌ فِی السَّمٰوٰتِ ؕ— اِیْتُوْنِیْ بِكِتٰبٍ مِّنْ قَبْلِ هٰذَاۤ اَوْ اَثٰرَةٍ مِّنْ عِلْمٍ اِنْ كُنْتُمْ صٰدِقِیْنَ ۟

ಹೇಳಿರಿ: “ಅಲ್ಲಾಹನನ್ನು ಬಿಟ್ಟು ನೀವು ಕರೆದು ಪ್ರಾರ್ಥಿಸುತ್ತಿರುವವರ ಬಗ್ಗೆ ನೀವು ಆಲೋಚಿಸಿ ನೋಡಿದ್ದೀರಾ? ಅವರು ಭೂಮಿಯಲ್ಲಿ ಏನು ಸೃಷ್ಟಿಸಿದ್ದಾರೆಂದು ನನಗೆ ತೋರಿಸಿಕೊಡಿ. ಅಥವಾ ಆಕಾಶಗಳ ಸೃಷ್ಟಿಯಲ್ಲಿ ಅವರಿಗೆ ಏನಾದರೂ ಪಾಲುದಾರಿಕೆಯಿದೆಯೇ? ನೀವು ಸತ್ಯವಂತರಾಗಿದ್ದರೆ ಇದಕ್ಕಿಂತ ಮೊದಲಿನ ಯಾವುದಾದರೂ ಗ್ರಂಥವನ್ನು ಅಥವಾ ಜ್ಞಾನದ ಅವಶೇಷವನ್ನು ನನಗೆ ತಂದು ತೋರಿಸಿ.” info
التفاسير:

external-link copy
5 : 46

وَمَنْ اَضَلُّ مِمَّنْ یَّدْعُوْا مِنْ دُوْنِ اللّٰهِ مَنْ لَّا یَسْتَجِیْبُ لَهٗۤ اِلٰی یَوْمِ الْقِیٰمَةِ وَهُمْ عَنْ دُعَآىِٕهِمْ غٰفِلُوْنَ ۟

ಅಲ್ಲಾಹನನ್ನು ಬಿಟ್ಟು, ಪುನರುತ್ಥಾನ ದಿನದವರೆಗೆ ತನಗೆ ಉತ್ತರ ನೀಡದ ದೇವರುಗಳನ್ನು ಕರೆದು ಪ್ರಾರ್ಥಿಸುವವನಿಗಿಂತಲೂ ಹೆಚ್ಚು ದಾರಿತಪ್ಪಿದವನು ಯಾರು? ಅವರಿಗೆ ಇವರ ಪ್ರಾರ್ಥನೆಯ ಬಗ್ಗೆ ಯಾವುದೇ ಅರಿವಿಲ್ಲ. info
التفاسير: