क़ुरआन के अर्थों का अनुवाद - कन्नड़ अनुवाद - हमज़ा बतूर

पृष्ठ संख्या:close

external-link copy
6 : 61

وَاِذْ قَالَ عِیْسَی ابْنُ مَرْیَمَ یٰبَنِیْۤ اِسْرَآءِیْلَ اِنِّیْ رَسُوْلُ اللّٰهِ اِلَیْكُمْ مُّصَدِّقًا لِّمَا بَیْنَ یَدَیَّ مِنَ التَّوْرٰىةِ وَمُبَشِّرًا بِرَسُوْلٍ یَّاْتِیْ مِنْ بَعْدِی اسْمُهٗۤ اَحْمَدُ ؕ— فَلَمَّا جَآءَهُمْ بِالْبَیِّنٰتِ قَالُوْا هٰذَا سِحْرٌ مُّبِیْنٌ ۟

ಮರ್ಯಮರ ಮಗ ಈಸಾ ಹೇಳಿದ ಸಂದರ್ಭ: “ಓ ಇಸ್ರಾಯೇಲ್ ಮಕ್ಕಳೇ! ನಾನು ನನಗಿಂತ ಮೊದಲು ಅವತೀರ್ಣವಾದ ತೌರಾತನ್ನು ದೃಢೀಕರಿಸಲು ಮತ್ತು ನನ್ನ ನಂತರ ಬರುವ ಅಹ್ಮದ್[1] ಎಂಬ ಹೆಸರಿನ ಒಬ್ಬ ಸಂದೇಶವಾಹಕರ ಬಗ್ಗೆ ನಿಮಗೆ ಸುವಾರ್ತೆ ತಿಳಿಸಲು ನಿಮ್ಮ ಬಳಿಗೆ ಕಳುಹಿಸಲಾಗಿರುವ ಅಲ್ಲಾಹನ ಸಂದೇಶವಾಹಕನಾಗಿದ್ದೇನೆ.” ಆದರೆ ಅವರು (ಈಸಾ) ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಾಗ ಅವರು ಹೇಳಿದರು: “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.” info

[1] ಅಹ್ಮದ್ ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರ ಇನ್ನೊಂದು ಹೆಸರು.

التفاسير:

external-link copy
7 : 61

وَمَنْ اَظْلَمُ مِمَّنِ افْتَرٰی عَلَی اللّٰهِ الْكَذِبَ وَهُوَ یُدْعٰۤی اِلَی الْاِسْلَامِ ؕ— وَاللّٰهُ لَا یَهْدِی الْقَوْمَ الظّٰلِمِیْنَ ۟ۚ

ಅಲ್ಲಾಹನ ಮೇಲೆ ಸುಳ್ಳಾರೋಪಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ವಾಸ್ತವವಾಗಿ ಅವನನ್ನು ಇಸ್ಲಾಂ ಧರ್ಮಕ್ಕೆ ಆಮಂತ್ರಿಸಲಾಗುತ್ತಿದೆ. ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. info
التفاسير:

external-link copy
8 : 61

یُرِیْدُوْنَ لِیُطْفِـُٔوْا نُوْرَ اللّٰهِ بِاَفْوَاهِهِمْ ؕ— وَاللّٰهُ مُتِمُّ نُوْرِهٖ وَلَوْ كَرِهَ الْكٰفِرُوْنَ ۟

ಅವರು ತಮ್ಮ ಬಾಯಿಯ ಮೂಲಕ ಅಲ್ಲಾಹನ ಬೆಳಕನ್ನು ನಂದಿಸಲು ಬಯಸುತ್ತಾರೆ. ಆದರೆ ಅಲ್ಲಾಹು ತನ್ನ ಬೆಳಕನ್ನು ಪೂರ್ಣಗೊಳಿಸಿ ಬಿಡುವನು. ಸತ್ಯನಿಷೇಧಿಗಳು ಎಷ್ಟು ದ್ವೇಷಿಸಿದರೂ ಸಹ. info
التفاسير:

external-link copy
9 : 61

هُوَ الَّذِیْۤ اَرْسَلَ رَسُوْلَهٗ بِالْهُدٰی وَدِیْنِ الْحَقِّ لِیُظْهِرَهٗ عَلَی الدِّیْنِ كُلِّهٖ ۙ— وَلَوْ كَرِهَ الْمُشْرِكُوْنَ ۟۠

ಅವನೇ ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿದವನು. ಈ ಧರ್ಮವು ಇತರೆಲ್ಲಾ ಧರ್ಮಗಳ ಮೇಲೆ ಜಯಗಳಿಸುವಂತೆ ಮಾಡುವುದಕ್ಕಾಗಿ. ಬಹುದೇವಾರಾಧಕರು ಎಷ್ಟು ದ್ವೇಷಿಸಿದರೂ ಸಹ. info
التفاسير:

external-link copy
10 : 61

یٰۤاَیُّهَا الَّذِیْنَ اٰمَنُوْا هَلْ اَدُلُّكُمْ عَلٰی تِجَارَةٍ تُنْجِیْكُمْ مِّنْ عَذَابٍ اَلِیْمٍ ۟

ಓ ಸತ್ಯವಿಶ್ವಾಸಿಗಳೇ! ಯಾತನಾಮಯ ಶಿಕ್ಷೆಯಿಂದ ನಿಮ್ಮನ್ನು ಪಾರು ಮಾಡುವ ಒಂದು ವ್ಯಾಪಾರದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ? info
التفاسير:

external-link copy
11 : 61

تُؤْمِنُوْنَ بِاللّٰهِ وَرَسُوْلِهٖ وَتُجَاهِدُوْنَ فِیْ سَبِیْلِ اللّٰهِ بِاَمْوَالِكُمْ وَاَنْفُسِكُمْ ؕ— ذٰلِكُمْ خَیْرٌ لَّكُمْ اِنْ كُنْتُمْ تَعْلَمُوْنَ ۟ۙ

ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ನಿಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ತಿಳಿದವರಾಗಿದ್ದರೆ ಅದೇ ನಿಮ್ಮ ಅತ್ಯುತ್ತಮವಾಗಿದೆ. info
التفاسير:

external-link copy
12 : 61

یَغْفِرْ لَكُمْ ذُنُوْبَكُمْ وَیُدْخِلْكُمْ جَنّٰتٍ تَجْرِیْ مِنْ تَحْتِهَا الْاَنْهٰرُ وَمَسٰكِنَ طَیِّبَةً فِیْ جَنّٰتِ عَدْنٍ ؕ— ذٰلِكَ الْفَوْزُ الْعَظِیْمُ ۟ۙ

ಅಲ್ಲಾಹು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಮತ್ತು ಶಾಶ್ವತ ವಾಸದ ಸ್ವರ್ಗೋದ್ಯಾನಗಳಲ್ಲಿರುವ ಪರಿಶುದ್ಧ ವಸತಿಗಳಿಗೆ ನಿಮ್ಮನ್ನು ಪ್ರವೇಶ ಮಾಡಿಸುವನು. ಅದೇ ಅತಿದೊಡ್ಡ ವಿಜಯ. info
التفاسير:

external-link copy
13 : 61

وَاُخْرٰی تُحِبُّوْنَهَا ؕ— نَصْرٌ مِّنَ اللّٰهِ وَفَتْحٌ قَرِیْبٌ ؕ— وَبَشِّرِ الْمُؤْمِنِیْنَ ۟

ನೀವು ಇಷ್ಟಪಡುವ ಇನ್ನೊಂದು ಅನುಗ್ರಹವನ್ನು ಅವನು ನಿಮಗೆ ದಯಪಾಲಿಸುವನು. ಅದು ಅಲ್ಲಾಹನ ಸಹಾಯ ಮತ್ತು ಹತ್ತಿರದಲ್ಲೇ ಇರುವ ವಿಜಯವಾಗಿದೆ. ಸತ್ಯವಿಶ್ವಾಸಿಗಳಿಗೆ ಸುವಾರ್ತೆಯನ್ನು ತಿಳಿಸಿರಿ. info
التفاسير:

external-link copy
14 : 61

یٰۤاَیُّهَا الَّذِیْنَ اٰمَنُوْا كُوْنُوْۤا اَنْصَارَ اللّٰهِ كَمَا قَالَ عِیْسَی ابْنُ مَرْیَمَ لِلْحَوَارِیّٖنَ مَنْ اَنْصَارِیْۤ اِلَی اللّٰهِ ؕ— قَالَ الْحَوَارِیُّوْنَ نَحْنُ اَنْصَارُ اللّٰهِ فَاٰمَنَتْ طَّآىِٕفَةٌ مِّنْ بَنِیْۤ اِسْرَآءِیْلَ وَكَفَرَتْ طَّآىِٕفَةٌ ۚ— فَاَیَّدْنَا الَّذِیْنَ اٰمَنُوْا عَلٰی عَدُوِّهِمْ فَاَصْبَحُوْا ظٰهِرِیْنَ ۟۠

ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನ ಸಹಾಯಕರಾಗಿರಿ. ಮರ್ಯಮರ ಮಗ ಈಸಾ ಹವಾರಿಗಳೊಡನೆ ಕೇಳಿದಂತೆ: “ಅಲ್ಲಾಹನ ಮಾರ್ಗದಲ್ಲಿ ನನಗೆ ಸಹಾಯಕರಾಗಿ ಯಾರಿದ್ದೀರಿ?” ಹವಾರಿಗಳು ಉತ್ತರಿಸಿದರು: “ನಾವು ಅಲ್ಲಾಹನ ಮಾರ್ಗದಲ್ಲಿ ಸಹಾಯ ಮಾಡುತ್ತೇವೆ.” ನಂತರ ಇಸ್ರಾಯೇಲ್ ಮಕ್ಕಳಲ್ಲಿ ಸೇರಿದ ಒಂದು ಗುಂಪು ವಿಶ್ವಾಸವಿಟ್ಟರೆ ಇನ್ನೊಂದು ಗುಂಪು ನಿಷೇಧಿಸಿತು. ಆಗ ನಾವು ಸತ್ಯವಿಶ್ವಾಸಿಗಳಿಗೆ ಅವರ ವೈರಿಗಳ ವಿರುದ್ಧ ಬೆಂಬಲವನ್ನು ನೀಡಿದೆವು. ತನ್ನಿಮಿತ್ತ ಅವರು ವಿಜಯಿಗಳಾದರು. info
التفاسير: