Terjemahan makna Alquran Alkarim - Terjemahan Berbahasa Kannada - Hamzah Batur

external-link copy
157 : 7

اَلَّذِیْنَ یَتَّبِعُوْنَ الرَّسُوْلَ النَّبِیَّ الْاُمِّیَّ الَّذِیْ یَجِدُوْنَهٗ مَكْتُوْبًا عِنْدَهُمْ فِی التَّوْرٰىةِ وَالْاِنْجِیْلِ ؗ— یَاْمُرُهُمْ بِالْمَعْرُوْفِ وَیَنْهٰىهُمْ عَنِ الْمُنْكَرِ وَیُحِلُّ لَهُمُ الطَّیِّبٰتِ وَیُحَرِّمُ عَلَیْهِمُ الْخَبٰٓىِٕثَ وَیَضَعُ عَنْهُمْ اِصْرَهُمْ وَالْاَغْلٰلَ الَّتِیْ كَانَتْ عَلَیْهِمْ ؕ— فَالَّذِیْنَ اٰمَنُوْا بِهٖ وَعَزَّرُوْهُ وَنَصَرُوْهُ وَاتَّبَعُوا النُّوْرَ الَّذِیْۤ اُنْزِلَ مَعَهٗۤ ۙ— اُولٰٓىِٕكَ هُمُ الْمُفْلِحُوْنَ ۟۠

ಅವರು ಯಾರೆಂದರೆ, ತಮ್ಮ ಬಳಿಯಿರುವ ತೌರಾತ್‍ ಮತ್ತು ಇಂಜೀಲ್‍ನಲ್ಲಿ ಉಲ್ಲೇಖವಿರುವುದಾಗಿ ಕಾಣುವ ಅನಕ್ಷರಸ್ಥ ಪ್ರವಾದಿಯಾದ ಸಂದೇಶವಾಹಕರನ್ನು (ಪ್ರವಾದಿ ಮುಹಮ್ಮದರನ್ನು) ಅನುಸರಿಸುವವರು. ಆ ಪ್ರವಾದಿ ಅವರಿಗೆ ಒಳಿತನ್ನು ಆದೇಶಿಸುತ್ತಾರೆ ಮತ್ತು ಕೆಡುಕನ್ನು ವಿರೋಧಿಸುತ್ತಾರೆ. ಅವರಿಗೆ ಉತ್ತಮ ವಸ್ತುಗಳನ್ನು ಅನುಮತಿಸುತ್ತಾರೆ ಮತ್ತು ಕೆಟ್ಟ ವಸ್ತುಗಳನ್ನು ನಿಷೇಧಿಸುತ್ತಾರೆ. ಅವರ ಭಾರವನ್ನು ಕೆಳಗಿಳಿಸಿ ಅವರ ಮೇಲೆ ಹೊರಿಸಲಾಗಿದ್ದ ಸಂಕೋಲೆಗಳನ್ನು ಕಳಚುತ್ತಾರೆ. ಆ ಪ್ರವಾದಿಯಲ್ಲಿ ವಿಶ್ವಾಸವಿಡುವವರು, ಅವರನ್ನು ಬೆಂಬಲಿಸುವವರು, ಸಹಾಯ ಮಾಡುವವರು ಮತ್ತು ಅವರೊಂದಿಗೆ ಅವತೀರ್ಣವಾದ ಬೆಳಕನ್ನು ಅನುಸರಿಸುವವರು ಯಾರೋ—ಅವರೇ ಯಶಸ್ವಿಯಾದವರು. info
التفاسير: