Terjemahan makna Alquran Alkarim - Terjemahan Berbahasa Kannada - Hamzah Batur

external-link copy
74 : 7

وَاذْكُرُوْۤا اِذْ جَعَلَكُمْ خُلَفَآءَ مِنْ بَعْدِ عَادٍ وَّبَوَّاَكُمْ فِی الْاَرْضِ تَتَّخِذُوْنَ مِنْ سُهُوْلِهَا قُصُوْرًا وَّتَنْحِتُوْنَ الْجِبَالَ بُیُوْتًا ۚ— فَاذْكُرُوْۤا اٰلَآءَ اللّٰهِ وَلَا تَعْثَوْا فِی الْاَرْضِ مُفْسِدِیْنَ ۟

ಆದ್ ಗೋತ್ರದವರ ಬಳಿಕ ಅವನು ನಿಮ್ಮನ್ನು ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದನ್ನು ಸ್ಮರಿಸಿರಿ. ಅವನು ನಿಮಗೆ ಭೂಮಿಯಲ್ಲಿ ವಾಸ್ತವ್ಯವನ್ನು ಮಾಡಿಕೊಟ್ಟನು. ನೀವು ಭೂಮಿಯ ಸಮತಟ್ಟು ಪ್ರದೇಶಗಳಲ್ಲಿ ಸೌಧಗಳನ್ನು ನಿರ್ಮಿಸುತ್ತೀರಿ ಮತ್ತು ಬೆಟ್ಟಗಳಲ್ಲಿ ಮನೆಗಳನ್ನು ಕೊರೆಯುತ್ತೀರಿ. ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ. ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಾ ಅಲ್ಲಾಹನ ಆಜ್ಞೋಲ್ಲಂಘನೆ ಮಾಡಬೇಡಿ.” info
التفاسير: