Traduzione dei Significati del Sacro Corano - Traduzione canadese - Hamza Batoor

Numero di pagina:close

external-link copy
58 : 2

وَاِذْ قُلْنَا ادْخُلُوْا هٰذِهِ الْقَرْیَةَ فَكُلُوْا مِنْهَا حَیْثُ شِئْتُمْ رَغَدًا وَّادْخُلُوا الْبَابَ سُجَّدًا وَّقُوْلُوْا حِطَّةٌ نَّغْفِرْ لَكُمْ خَطٰیٰكُمْ ؕ— وَسَنَزِیْدُ الْمُحْسِنِیْنَ ۟

ನಾವು ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಈ ಊರನ್ನು ಪ್ರವೇಶಿಸಿರಿ.[1] ಇಲ್ಲಿ ನೀವು ಇಚ್ಛಿಸುವ ಎಲ್ಲಾ ಕಡೆಗಳಿಂದ ಯಥೇಷ್ಟವಾಗಿ ತಿನ್ನಿರಿ. ಸಾಷ್ಟಾಂಗ ಮಾಡುತ್ತಾ[2] ದ್ವಾರವನ್ನು ಪ್ರವೇಶಿಸಿರಿ ಮತ್ತು ‘ಹಿತ್ತ’[3] ಎಂದು ಹೇಳಿರಿ. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು ಮತ್ತು ಸತ್ಕರ್ಮವೆಸಗುವವರಿಗೆ ಪ್ರತಿಫಲವನ್ನು ಹೆಚ್ಚಿಸುವೆವು.” info

[1] ಹೆಚ್ಚಿನ ವ್ಯಾಖ್ಯಾನಕಾರರ ಅಭಿಪ್ರಾಯ ಪ್ರಕಾರ ಆ ಊರು ಬೈತುಲ್ ಮುಕದ್ದಸ್. [2] ಸಾಷ್ಟಾಂಗ ಮಾಡುತ್ತಾ ಪ್ರವೇಶಿಸಿರಿ ಎಂದರೆ ತಲೆಬಾಗುತ್ತಾ ಪ್ರವೇಶಿಸಿರಿ ಎಂದು ಕೆಲವರು ಅರ್ಥ ನೀಡಿದ್ದಾರೆ. ಕೆಲವರು ಇದನ್ನು ಅಕ್ಷರಾರ್ಥದಲ್ಲಿ ಗೌರವದ ರೂಪದಲ್ಲಿ ಸಾಷ್ಟಾಂಗ ಮಾಡುತ್ತಾ ಪ್ರವೇಶಿಸಿರಿ ಎಂದು ಅರ್ಥ ನೀಡಿದ್ದಾರೆ. [3] ಹಿತ್ತ ಎಂದರೆ ನಮ್ಮ ಪಾಪಗಳನ್ನು ಮನ್ನಿಸು ಎಂದರ್ಥ.

التفاسير:

external-link copy
59 : 2

فَبَدَّلَ الَّذِیْنَ ظَلَمُوْا قَوْلًا غَیْرَ الَّذِیْ قِیْلَ لَهُمْ فَاَنْزَلْنَا عَلَی الَّذِیْنَ ظَلَمُوْا رِجْزًا مِّنَ السَّمَآءِ بِمَا كَانُوْا یَفْسُقُوْنَ ۟۠

ಆದರೆ ಆ ಅಕ್ರಮಿಗಳು ಅವರಿಗೆ ಹೇಳಲಾದ ಮಾತನ್ನು ಬದಲಾಯಿಸಿದರು.[1] ಆದ್ದರಿಂದ, ನಾವು ಆ ಅಕ್ರಮಿಗಳ ಮೇಲೆ—ಅವರು ಮಾಡುತ್ತಿದ್ದ ದುಷ್ಕರ್ಮಗಳ ನಿಮಿತ್ತ—ಆಕಾಶದಿಂದ ಶಿಕ್ಷೆಯನ್ನು ಇಳಿಸಿದೆವು. info

[1] ಅವರು ಸಾಷ್ಟಾಂಗ ಮಾಡುತ್ತಾ ಪ್ರವೇಶಿಸುವುದಕ್ಕೆ ಬದಲು, ಬಟ್ಟೆಯನ್ನು ನೆಲದಲ್ಲಿ ಎಳೆಯುತ್ತಾ ಎದೆಯುಬ್ಬಿಸಿ ಅಹಂಕಾರದಿಂದ ಪ್ರವೇಶಿಸಿದರು. ಹಿತ್ತ ಎಂದು ಹೇಳುವುದರ ಬದಲಿಗೆ ಬೇರೊಂದು ಮಾತನ್ನು ಹೇಳಿದರು. ಇದರಿಂದ ಅವರ ಅಹಂಕಾರ ಮತ್ತು ದೈವಿಕ ಆಜ್ಞೆಗೆ ಅವರು ತೋರುತ್ತಿದ್ದ ತಿರಸ್ಕಾರವನ್ನು ಅರ್ಥೈಸಬಹುದು.

التفاسير:

external-link copy
60 : 2

وَاِذِ اسْتَسْقٰی مُوْسٰی لِقَوْمِهٖ فَقُلْنَا اضْرِبْ بِّعَصَاكَ الْحَجَرَ ؕ— فَانْفَجَرَتْ مِنْهُ اثْنَتَا عَشْرَةَ عَیْنًا ؕ— قَدْ عَلِمَ كُلُّ اُنَاسٍ مَّشْرَبَهُمْ ؕ— كُلُوْا وَاشْرَبُوْا مِنْ رِّزْقِ اللّٰهِ وَلَا تَعْثَوْا فِی الْاَرْضِ مُفْسِدِیْنَ ۟

ಮೂಸಾ ತಮ್ಮ ಜನರಿಗಾಗಿ ನೀರನ್ನು ಬೇಡಿದ ಸಂದರ್ಭ. ನಾವು ಹೇಳಿದೆವು: “ನಿಮ್ಮ ಕೈಯಲ್ಲಿರುವ ಕೋಲಿನಿಂದ ಆ ಬಂಡೆಯ ಮೇಲೆ ಹೊಡೆಯಿರಿ.” ಆಗ ಅದರಿಂದ ಹನ್ನೆರಡು ಚಿಲುಮೆಗಳು ಚಿಮ್ಮಿ ಹರಿದವು.[1] ಎಲ್ಲಾ ಜನರೂ (ಗೋತ್ರಗಳೂ) ತಮ್ಮ ನೀರಿನ ಸ್ಥಳವನ್ನು ತಿಳಿದುಕೊಂಡರು. (ನಾವು ಹೇಳಿದೆವು): “ಅಲ್ಲಾಹು ಒದಗಿಸಿದ ಆಹಾರದಿಂದ ತಿನ್ನಿರಿ ಮತ್ತು ಕುಡಿಯಿರಿ; ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಾ ಅಲೆಯಬೇಡಿ." info

[1] ಇಸ್ರಾಯೇಲ್ ಮಕ್ಕಳ ಹನ್ನೆರಡು ಗೋತ್ರಗಳಿಗೆ ಹನ್ನೆರಡು ಚಿಲುಮೆಗಳು.

التفاسير:

external-link copy
61 : 2

وَاِذْ قُلْتُمْ یٰمُوْسٰی لَنْ نَّصْبِرَ عَلٰی طَعَامٍ وَّاحِدٍ فَادْعُ لَنَا رَبَّكَ یُخْرِجْ لَنَا مِمَّا تُنْۢبِتُ الْاَرْضُ مِنْ بَقْلِهَا وَقِثَّآىِٕهَا وَفُوْمِهَا وَعَدَسِهَا وَبَصَلِهَا ؕ— قَالَ اَتَسْتَبْدِلُوْنَ الَّذِیْ هُوَ اَدْنٰی بِالَّذِیْ هُوَ خَیْرٌ ؕ— اِهْبِطُوْا مِصْرًا فَاِنَّ لَكُمْ مَّا سَاَلْتُمْ ؕ— وَضُرِبَتْ عَلَیْهِمُ الذِّلَّةُ وَالْمَسْكَنَةُ وَبَآءُوْ بِغَضَبٍ مِّنَ اللّٰهِ ؕ— ذٰلِكَ بِاَنَّهُمْ كَانُوْا یَكْفُرُوْنَ بِاٰیٰتِ اللّٰهِ وَیَقْتُلُوْنَ النَّبِیّٖنَ بِغَیْرِ الْحَقِّ ؕ— ذٰلِكَ بِمَا عَصَوْا وَّكَانُوْا یَعْتَدُوْنَ ۟۠

ನೀವು ಹೇಳಿದ ಸಂದರ್ಭ(ವನ್ನು ಸ್ಮರಿಸಿ): “ಓ ಮೂಸಾ! ಒಂದೇ ರೀತಿಯ ಆಹಾರವನ್ನು ಸಹಿಸಿಕೊಂಡಿರಲು ನಮಗೆ ಸಾಧ್ಯವೇ ಇಲ್ಲ. ಆದ್ದರಿಂದ ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ. ಅವನು ನಮಗೆ ಭೂಮಿಯಲ್ಲಿ ಬೆಳೆಯುವ ಸೊಪ್ಪು, ಸೌತೆ, ಗೋಧಿ, ಮಸೂರ ಮತ್ತು ಈರುಳ್ಳಿಯನ್ನು ಉತ್ಪಾದಿಸಿಕೊಡಲಿ.” ಮೂಸಾ ಹೇಳಿದರು: “ಅತ್ಯುತ್ತಮ ವಸ್ತುವನ್ನು ಬಿಟ್ಟು ಕಳಪೆ ವಸ್ತುವನ್ನು ಏಕೆ ಕೇಳುತ್ತೀರಿ? ನೀವು ಯಾವುದಾದರೂ ನಗರಕ್ಕೆ ಹೋಗಿರಿ. ಅಲ್ಲಿ ನೀವು ಕೇಳಿದ್ದೆಲ್ಲವೂ ನಿಮಗೆ ಸಿಗುವುದು.” (ಅವರ ದರ್ಪದಿಂದಾಗಿ) ಅವರ ಮೇಲೆ ಅಪಮಾನ ಹಾಗೂ ಬಡತನವನ್ನು ಹೊದಿಸಲಾಯಿತು; ಅವರು ಅಲ್ಲಾಹನ ಕೋಪದೊಂದಿಗೆ ಮರಳಿದರು. ಅದೇಕೆಂದರೆ, ಅವರು ಅಲ್ಲಾಹನ ವಚನಗಳನ್ನು ನಿಷೇಧಿಸುತ್ತಿದ್ದರು ಮತ್ತು ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುತ್ತಿದ್ದರು. ಅದು ಅವರ ಅವಿಧೇಯತೆ ಮತ್ತು ಅತಿರೇಕದ ಫಲಿತಾಂಶವಾಗಿತ್ತು. info
التفاسير: