Traduzione dei Significati del Sacro Corano - Traduzione canadese - Hamza Batoor

Numero di pagina:close

external-link copy
10 : 5

وَالَّذِیْنَ كَفَرُوْا وَكَذَّبُوْا بِاٰیٰتِنَاۤ اُولٰٓىِٕكَ اَصْحٰبُ الْجَحِیْمِ ۟

ಸತ್ಯನಿಷೇಧಿಗಳು ಮತ್ತು ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ—ಅವರೇ ನರಕವಾಸಿಗಳು. info
التفاسير:

external-link copy
11 : 5

یٰۤاَیُّهَا الَّذِیْنَ اٰمَنُوا اذْكُرُوْا نِعْمَتَ اللّٰهِ عَلَیْكُمْ اِذْ هَمَّ قَوْمٌ اَنْ یَّبْسُطُوْۤا اِلَیْكُمْ اَیْدِیَهُمْ فَكَفَّ اَیْدِیَهُمْ عَنْكُمْ ۚ— وَاتَّقُوا اللّٰهَ ؕ— وَعَلَی اللّٰهِ فَلْیَتَوَكَّلِ الْمُؤْمِنُوْنَ ۟۠

ಓ ಸತ್ಯವಿಶ್ವಾಸಿಗಳೇ! ಜನರು ನಿಮ್ಮ ವಿರುದ್ಧ ತಮ್ಮ ಕೈಗಳನ್ನು ಚಾಚಲು ಮುಂದಾದ ಸಂದರ್ಭ, ಅವರ ಕೈಗಳನ್ನು ನಿಮ್ಮಿಂದ ತಡೆಯುವ ಮೂಲಕ ಅಲ್ಲಾಹು ನಿಮಗೆ ನೀಡಿದ ಅನುಗ್ರಹವನ್ನು ಸ್ಮರಿಸಿರಿ. ಅಲ್ಲಾಹನನ್ನು ಭಯಪಡಿರಿ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ. info
التفاسير:

external-link copy
12 : 5

وَلَقَدْ اَخَذَ اللّٰهُ مِیْثَاقَ بَنِیْۤ اِسْرَآءِیْلَ ۚ— وَبَعَثْنَا مِنْهُمُ اثْنَیْ عَشَرَ نَقِیْبًا ؕ— وَقَالَ اللّٰهُ اِنِّیْ مَعَكُمْ ؕ— لَىِٕنْ اَقَمْتُمُ الصَّلٰوةَ وَاٰتَیْتُمُ الزَّكٰوةَ وَاٰمَنْتُمْ بِرُسُلِیْ وَعَزَّرْتُمُوْهُمْ وَاَقْرَضْتُمُ اللّٰهَ قَرْضًا حَسَنًا لَّاُكَفِّرَنَّ عَنْكُمْ سَیِّاٰتِكُمْ وَلَاُدْخِلَنَّكُمْ جَنّٰتٍ تَجْرِیْ مِنْ تَحْتِهَا الْاَنْهٰرُ ۚ— فَمَنْ كَفَرَ بَعْدَ ذٰلِكَ مِنْكُمْ فَقَدْ ضَلَّ سَوَآءَ السَّبِیْلِ ۟

ಅಲ್ಲಾಹು ಇಸ್ರಾಯೇಲ್ ಮಕ್ಕಳಿಂದ ಈಗಾಗಲೇ ಕರಾರನ್ನು ಪಡೆದಿದ್ದಾನೆ. ನಾವು ಅವರಲ್ಲಿ ಹನ್ನೆರಡು ಜನರನ್ನು ಮುಖಂಡರನ್ನಾಗಿ ಮಾಡಿ ಕಳುಹಿಸಿದೆವು. ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ ನಾನು ನಿಮ್ಮ ಜೊತೆಯಲ್ಲಿದ್ದೇನೆ. ನೀವು ನಮಾಝ್ ಸಂಸ್ಥಾಪಿಸಿದರೆ, ಝಕಾತ್ ನೀಡಿದರೆ, ನನ್ನ ಸಂದೇಶವಾಹಕರುಗಳಲ್ಲಿ ವಿಶ್ವಾಸವಿಟ್ಟರೆ, ಅವರಿಗೆ ಬೆಂಬಲ ನೀಡಿದರೆ ಮತ್ತು ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡಿದರೆ, ನಿಶ್ಚಯವಾಗಿಯೂ ನಾನು ನಿಮ್ಮ ಪಾಪಗಳನ್ನು ಅಳಿಸುವೆನು ಮತ್ತು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ನಿಮ್ಮನ್ನು ಪ್ರವೇಶ ಮಾಡಿಸುವೆನು. ಆದರೆ ಅದರ ಬಳಿಕವೂ ನಿಮ್ಮಲ್ಲಿ ಸತ್ಯವನ್ನು ನಿಷೇಧಿಸುವವನು ನೇರ ಮಾರ್ಗದಿಂದ ತಪ್ಪಿ ಹೋಗಿದ್ದಾನೆ.” info
التفاسير:

external-link copy
13 : 5

فَبِمَا نَقْضِهِمْ مِّیْثَاقَهُمْ لَعَنّٰهُمْ وَجَعَلْنَا قُلُوْبَهُمْ قٰسِیَةً ۚ— یُحَرِّفُوْنَ الْكَلِمَ عَنْ مَّوَاضِعِهٖ ۙ— وَنَسُوْا حَظًّا مِّمَّا ذُكِّرُوْا بِهٖ ۚ— وَلَا تَزَالُ تَطَّلِعُ عَلٰی خَآىِٕنَةٍ مِّنْهُمْ اِلَّا قَلِیْلًا مِّنْهُمْ فَاعْفُ عَنْهُمْ وَاصْفَحْ ؕ— اِنَّ اللّٰهَ یُحِبُّ الْمُحْسِنِیْنَ ۟

ಅವರು ಕರಾರು ಉಲ್ಲಂಘಿಸಿದ ಕಾರಣ ನಾವು ಅವರನ್ನು ಶಪಿಸಿದೆವು ಮತ್ತು ಅವರ ಹೃದಯಗಳನ್ನು ಕಠೋರಗೊಳಿಸಿದೆವು. ಅವರು ವಚನಗಳನ್ನು ಅದರ ಸ್ಥಾನದಿಂದ ವಿರೂಪಗೊಳಿಸುತ್ತಾರೆ.[1] ಅವರಿಗೆ ಉಪದೇಶ ಮಾಡಲಾದ ಒಂದಂಶವನ್ನು ಅವರು ಮರೆತೇ ಬಿಟ್ಟರು. ಅವರು ಮಾಡುವ ವಂಚನೆಯನ್ನು ನೀವು ಗಮನಿಸುತ್ತಲೇ ಇರುವಿರಿ—ಅವರಲ್ಲಿ ಕೆಲವರ ಹೊರತು. ಆದ್ದರಿಂದ ಅವರನ್ನು ಕ್ಷಮಿಸಿರಿ ಮತ್ತು (ಅವರ ತಪ್ಪನ್ನು) ಕಡೆಗಣಿಸಿರಿ. ನಿಶ್ಚಯವಾಗಿಯೂ ಒಳಿತು ಮಾಡುವವರನ್ನು ಅಲ್ಲಾಹು ಇಷ್ಟಪಡುತ್ತಾನೆ. info

[1] ಅಂದರೆ ಅವರು ಗ್ರಂಥದ ವಚನಗಳನ್ನು ಅಸಾಂದರ್ಭಿಕವಾಗಿ ಉಲ್ಲೇಖಿಸುತ್ತಾರೆ ಮತ್ತು ತಪ್ಪು ಅರ್ಥಗಳನ್ನು ನೀಡುತ್ತಾರೆ; ಅಥವಾ ವಚನಗಳನ್ನೇ ತಿದ್ದಿ ಬದಲಾಯಿಸುತ್ತಾರೆ.

التفاسير: