クルアーンの対訳 - カンナダ語対訳 - Hamza Batur

ಗಾಫಿರ್

external-link copy
1 : 40

حٰمٓ ۟ۚ

ಹಾ-ಮೀಮ್. info
التفاسير:

external-link copy
2 : 40

تَنْزِیْلُ الْكِتٰبِ مِنَ اللّٰهِ الْعَزِیْزِ الْعَلِیْمِ ۟ۙ

ಈ ಗ್ರಂಥವು ಪ್ರಬಲನು ಮತ್ತು ಸರ್ವಜ್ಞನಾದ ಅಲ್ಲಾಹನ ಕಡೆಯಿಂದ ಅವತೀರ್ಣವಾಗಿದೆ. info
التفاسير:

external-link copy
3 : 40

غَافِرِ الذَّنْۢبِ وَقَابِلِ التَّوْبِ شَدِیْدِ الْعِقَابِ ذِی الطَّوْلِ ؕ— لَاۤ اِلٰهَ اِلَّا هُوَ ؕ— اِلَیْهِ الْمَصِیْرُ ۟

ಅವನು ಪಾಪವನ್ನು ಕ್ಷಮಿಸುವವನು, ಪಶ್ಚಾತ್ತಾಪವನ್ನು ಸ್ವೀಕರಿಸುವವನು, ಕಠಿಣವಾಗಿ ಶಿಕ್ಷಿಸುವವನು ಮತ್ತು ಅಪಾರ ಸಾಮರ್ಥ್ಯವುಳ್ಳವನಾಗಿದ್ದಾನೆ. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಗಮ್ಯಸ್ಥಾನವು ಅವನ ಬಳಿಗೇ ಆಗಿದೆ. info
التفاسير:

external-link copy
4 : 40

مَا یُجَادِلُ فِیْۤ اٰیٰتِ اللّٰهِ اِلَّا الَّذِیْنَ كَفَرُوْا فَلَا یَغْرُرْكَ تَقَلُّبُهُمْ فِی الْبِلَادِ ۟

ಅಲ್ಲಾಹನ ವಚನಗಳ ಬಗ್ಗೆ ಸತ್ಯನಿಷೇಧಿಗಳು ಮಾತ್ರ ತರ್ಕಿಸುತ್ತಾರೆ. ಅವರು ಊರುಗಳಲ್ಲಿ ಸ್ವೇಚ್ಛವಾಗಿ ವಿಹರಿಸುವುದು ನಿಮ್ಮನ್ನು ಮರುಳುಗೊಳಿಸದಿರಲಿ. info
التفاسير:

external-link copy
5 : 40

كَذَّبَتْ قَبْلَهُمْ قَوْمُ نُوْحٍ وَّالْاَحْزَابُ مِنْ بَعْدِهِمْ ۪— وَهَمَّتْ كُلُّ اُمَّةٍ بِرَسُوْلِهِمْ لِیَاْخُذُوْهُ وَجٰدَلُوْا بِالْبَاطِلِ لِیُدْحِضُوْا بِهِ الْحَقَّ فَاَخَذْتُهُمْ ۫— فَكَیْفَ كَانَ عِقَابِ ۟

ಅವರಿಗಿಂತ ಮೊದಲು ನೂಹರ ಜನರು ಮತ್ತು ಅವರ ನಂತರದ ಪಂಗಡಗಳು (ಪ್ರವಾದಿಗಳನ್ನು) ನಿಷೇಧಿಸಿದ್ದರು. ಎಲ್ಲಾ ಸಮುದಾಯಗಳ ಜನರೂ ತಮ್ಮ ಸಂದೇಶವಾಹಕರನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದರು. ಸತ್ಯವನ್ನು ನಾಶ ಮಾಡಲು ಅವರು ಅಸತ್ಯದ ಮೂಲಕ ತರ್ಕಿಸಿದರು. ಆದ್ದರಿಂದ ನಾನು ಅವರನ್ನು ಹಿಡಿದು ಶಿಕ್ಷಿಸಿದೆನು. ಆಗ ನನ್ನ ಶಿಕ್ಷೆಯು ಹೇಗಿತ್ತು! info
التفاسير:

external-link copy
6 : 40

وَكَذٰلِكَ حَقَّتْ كَلِمَتُ رَبِّكَ عَلَی الَّذِیْنَ كَفَرُوْۤا اَنَّهُمْ اَصْحٰبُ النَّارِ ۟

ಈ ರೀತಿ ಸತ್ಯನಿಷೇಧಿಗಳ ಮೇಲೆ ಅವರು ನರಕವಾಸಿಗಳು ಎಂಬ ತಮ್ಮ ಪರಿಪಾಲಕನ (ಅಲ್ಲಾಹನ) ವಚನವು ಖಾತ್ರಿಯಾಗಿ ಬಿಟ್ಟಿದೆ. info
التفاسير:

external-link copy
7 : 40

اَلَّذِیْنَ یَحْمِلُوْنَ الْعَرْشَ وَمَنْ حَوْلَهٗ یُسَبِّحُوْنَ بِحَمْدِ رَبِّهِمْ وَیُؤْمِنُوْنَ بِهٖ وَیَسْتَغْفِرُوْنَ لِلَّذِیْنَ اٰمَنُوْا ۚ— رَبَّنَا وَسِعْتَ كُلَّ شَیْءٍ رَّحْمَةً وَّعِلْمًا فَاغْفِرْ لِلَّذِیْنَ تَابُوْا وَاتَّبَعُوْا سَبِیْلَكَ وَقِهِمْ عَذَابَ الْجَحِیْمِ ۟

ಸಿಂಹಾಸನವನ್ನು ಹೊರುವವರು ಮತ್ತು ಅದರ ಸುತ್ತಲಲ್ಲಿರುವವರು (ದೇವದೂತರು‍ಗಳು) ಅವರ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುವುದರೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ. ಅವರು ಅವನಲ್ಲಿ ವಿಶ್ವಾಸವಿಟ್ಟಿದ್ದಾರೆ ಮತ್ತು ಸತ್ಯವಿಶ್ವಾಸಿಗಳಿಗಾಗಿ ಕ್ಷಮೆಯಾಚನೆ ಮಾಡುತ್ತಾ ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನೀನು ನಿನ್ನ ದಯೆ ಮತ್ತು ಜ್ಞಾನದ ಮೂಲಕ ಎಲ್ಲಾ ವಸ್ತುಗಳನ್ನು ಆವರಿಸಿಕೊಂಡಿರುವೆ. ಆದ್ದರಿಂದ ಪಶ್ಚಾತ್ತಾಪಪಡುವವರನ್ನು ಮತ್ತು ನಿನ್ನ ಮಾರ್ಗವನ್ನು ಹಿಂಬಾಲಿಸುವವರನ್ನು ಕ್ಷಮಿಸು. ಅವರನ್ನು ನರಕ ಶಿಕ್ಷೆಯಿಂದ ಪಾರು ಮಾಡು. info
التفاسير: