クルアーンの対訳 - カンナダ語対訳 - Hamza Batur

ページ番号:close

external-link copy
12 : 58

یٰۤاَیُّهَا الَّذِیْنَ اٰمَنُوْۤا اِذَا نَاجَیْتُمُ الرَّسُوْلَ فَقَدِّمُوْا بَیْنَ یَدَیْ نَجْوٰىكُمْ صَدَقَةً ؕ— ذٰلِكَ خَیْرٌ لَّكُمْ وَاَطْهَرُ ؕ— فَاِنْ لَّمْ تَجِدُوْا فَاِنَّ اللّٰهَ غَفُوْرٌ رَّحِیْمٌ ۟

ಓ ಸತ್ಯವಿಶ್ವಾಸಿಗಳೇ! ನೀವು ಸಂದೇಶವಾಹಕರೊಂದಿಗೆ ರಹಸ್ಯ ಮಾತುಕತೆ ನಡೆಸುವುದಾದರೆ ನಿಮ್ಮ ರಹಸ್ಯ ಮಾತುಕತೆಗೆ ಮೊದಲು ದಾನ ಮಾಡಿರಿ. ಅದು ನಿಮಗೆ ಉತ್ತಮವಾಗಿದೆ ಮತ್ತು ಹೆಚ್ಚು ಪರಿಶುದ್ಧವಾಗಿದೆ. ನಿಮಗೆ ದಾನ ಮಾಡಲು ಏನೂ ಸಿಗದಿದ್ದರೆ ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير:

external-link copy
13 : 58

ءَاَشْفَقْتُمْ اَنْ تُقَدِّمُوْا بَیْنَ یَدَیْ نَجْوٰىكُمْ صَدَقٰتٍ ؕ— فَاِذْ لَمْ تَفْعَلُوْا وَتَابَ اللّٰهُ عَلَیْكُمْ فَاَقِیْمُوا الصَّلٰوةَ وَاٰتُوا الزَّكٰوةَ وَاَطِیْعُوا اللّٰهَ وَرَسُوْلَهٗ ؕ— وَاللّٰهُ خَبِیْرٌ بِمَا تَعْمَلُوْنَ ۟۠

ರಹಸ್ಯ ಮಾತುಕತೆಗೆ ಮೊದಲು ದಾನ ಮಾಡುವುದರ ಬಗ್ಗೆ ನಿಮಗೆ ಭಯವಾಗುತ್ತಿದೆಯೇ? ನೀವು ಅದನ್ನು ಮಾಡದಿರುವುದರಿಂದ ಮತ್ತು ಅಲ್ಲಾಹು ನಿಮ್ಮನ್ನು ಕ್ಷಮಿಸಿರುವುದರಿಂದ ನೀವು ನಮಾಝ್ ಸಂಸ್ಥಾಪಿಸಿರಿ, ಝಕಾತ್ ನೀಡಿರಿ ಹಾಗೂ ಅಲ್ಲಾಹು ಹಾಗೂ ಅವನ ಸಂದೇಶವಾಹಕರನ್ನು ಅನುಸರಿಸಿರಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ. info
التفاسير:

external-link copy
14 : 58

اَلَمْ تَرَ اِلَی الَّذِیْنَ تَوَلَّوْا قَوْمًا غَضِبَ اللّٰهُ عَلَیْهِمْ ؕ— مَا هُمْ مِّنْكُمْ وَلَا مِنْهُمْ ۙ— وَیَحْلِفُوْنَ عَلَی الْكَذِبِ وَهُمْ یَعْلَمُوْنَ ۟ۚ

ಅಲ್ಲಾಹನ ಕೋಪಕ್ಕೆ ಪಾತ್ರರಾದ ಜನರೊಡನೆ (ಯಹೂದರೊಡನೆ) ಮೈತ್ರಿ ಮಾಡಿಕೊಂಡವರನ್ನು (ಕಪಟವಿಶ್ವಾಸಿಗಳನ್ನು) ನೀವು ನೋಡಿಲ್ಲವೇ? ಅವರು ನಿಮ್ಮಲ್ಲಿ ಸೇರಿದವರಲ್ಲ. ಅವರಲ್ಲಿ (ಯಹೂದರಲ್ಲಿ) ಸೇರಿದವರೂ ಅಲ್ಲ. ಅವರು ತಿಳಿದವರಾಗಿದ್ದೂ ಸುಳ್ಳಿನ ಆಧಾರದಲ್ಲಿ ಆಣೆ ಮಾಡುತ್ತಾರೆ. info
التفاسير:

external-link copy
15 : 58

اَعَدَّ اللّٰهُ لَهُمْ عَذَابًا شَدِیْدًا ؕ— اِنَّهُمْ سَآءَ مَا كَانُوْا یَعْمَلُوْنَ ۟

ಅಲ್ಲಾಹು ಅವರಿಗೆ ಕಠೋರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅವರು ಮಾಡುವ ಕೆಲಸವು ಅತಿ ನಿಕೃಷ್ಟವಾಗಿದೆ. info
التفاسير:

external-link copy
16 : 58

اِتَّخَذُوْۤا اَیْمَانَهُمْ جُنَّةً فَصَدُّوْا عَنْ سَبِیْلِ اللّٰهِ فَلَهُمْ عَذَابٌ مُّهِیْنٌ ۟

ಅವರು ತಮ್ಮ ಆಣೆಗಳನ್ನು ಗುರಾಣಿಯಾಗಿ ಮಾಡಿದ್ದಾರೆ ಮತ್ತು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಅವರಿಗೆ ಅವಮಾನಕರ ಶಿಕ್ಷೆಯಿದೆ. info
التفاسير:

external-link copy
17 : 58

لَنْ تُغْنِیَ عَنْهُمْ اَمْوَالُهُمْ وَلَاۤ اَوْلَادُهُمْ مِّنَ اللّٰهِ شَیْـًٔا ؕ— اُولٰٓىِٕكَ اَصْحٰبُ النَّارِ ؕ— هُمْ فِیْهَا خٰلِدُوْنَ ۟

ಅವರ ಆಸ್ತಿ ಅಥವಾ ಮಕ್ಕಳು ಅಲ್ಲಾಹನ ಬಳಿ ಅವರಿಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. info
التفاسير:

external-link copy
18 : 58

یَوْمَ یَبْعَثُهُمُ اللّٰهُ جَمِیْعًا فَیَحْلِفُوْنَ لَهٗ كَمَا یَحْلِفُوْنَ لَكُمْ وَیَحْسَبُوْنَ اَنَّهُمْ عَلٰی شَیْءٍ ؕ— اَلَاۤ اِنَّهُمْ هُمُ الْكٰذِبُوْنَ ۟

ಅಲ್ಲಾಹು ಅವರೆಲ್ಲರನ್ನೂ ಪುನರುತ್ಥಾನಗೊಳಿಸುವ ದಿನ! ಅವರು ನಿಮ್ಮ ಮುಂದೆ ಆಣೆ ಮಾಡುವಂತೆ ಅಲ್ಲಾಹನ ಮುಂದೆಯೂ ಆಣೆ ಮಾಡುವರು. ಅವರು (ಒಂದು ಆಧಾರದ) ಮೇಲಿದ್ದಾರೆಂದು ಅವರು ಭಾವಿಸುತ್ತಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅವರೇ ಸುಳ್ಳುಗಾರರು. info
التفاسير:

external-link copy
19 : 58

اِسْتَحْوَذَ عَلَیْهِمُ الشَّیْطٰنُ فَاَنْسٰىهُمْ ذِكْرَ اللّٰهِ ؕ— اُولٰٓىِٕكَ حِزْبُ الشَّیْطٰنِ ؕ— اَلَاۤ اِنَّ حِزْبَ الشَّیْطٰنِ هُمُ الْخٰسِرُوْنَ ۟

ಶೈತಾನನು ಅವರ ಮೇಲೆ ಪ್ರಾಬಲ್ಯ ಪಡೆದಿದ್ದಾನೆ ಮತ್ತು ಅವರು ಅಲ್ಲಾಹನ ಸ್ಮರಣೆಯನ್ನು ಮರೆಯುವಂತೆ ಮಾಡಿದ್ದಾನೆ. ಅವರೇ ಶೈತಾನನ ಪಂಗಡದವರು. ತಿಳಿಯಿರಿ! ನಿಶ್ಚಯವಾಗಿಯೂ ಶೈತಾನನ ಪಂಗಡದವರೇ ನಷ್ಟ ಹೊಂದಿದವರು. info
التفاسير:

external-link copy
20 : 58

اِنَّ الَّذِیْنَ یُحَآدُّوْنَ اللّٰهَ وَرَسُوْلَهٗۤ اُولٰٓىِٕكَ فِی الْاَذَلِّیْنَ ۟

ನಿಶ್ಚಯವಾಗಿಯೂ ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರು ಯಾರೋ ಅವರು ಅತ್ಯಂತ ಅವಮಾನಕರ ಸ್ಥಿತಿಯಲ್ಲಿರುವರು. info
التفاسير:

external-link copy
21 : 58

كَتَبَ اللّٰهُ لَاَغْلِبَنَّ اَنَا وَرُسُلِیْ ؕ— اِنَّ اللّٰهَ قَوِیٌّ عَزِیْزٌ ۟

“ನಿಶ್ಚಯವಾಗಿಯೂ ನಾನು ಮತ್ತು ನನ್ನ ಸಂದೇಶವಾಹಕರೇ ವಿಜಯಗಳಿಸುವವರು” ಎಂದು ಅಲ್ಲಾಹು ದಾಖಲಿಸಿದ್ದಾನೆ. ನಿಶ್ಚಯವಾಗಿಯೂ ಅಲ್ಲಾಹು ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ. info
التفاسير: