ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
79 : 12

قَالَ مَعَاذَ اللّٰهِ اَنْ نَّاْخُذَ اِلَّا مَنْ وَّجَدْنَا مَتَاعَنَا عِنْدَهٗۤ ۙ— اِنَّاۤ اِذًا لَّظٰلِمُوْنَ ۟۠

ಯೂಸುಫ್ ಹೇಳಿದರು: “ಅಲ್ಲಾಹನಿಗೆ ಶರಣು! ನಾವು ನಮ್ಮ ವಸ್ತುವನ್ನು ಯಾರಲ್ಲಿ ಪತ್ತೆ ಮಾಡಿದೆವೋ ಅವನನ್ನು ಬಿಟ್ಟು ಬೇರೊಬ್ಬನನ್ನು ಹಿಡಿಯುವುದೇ? ಹಾಗೇನಾದರೂ ಆದರೆ ನಾವು ನಿಜಕ್ಕೂ ಅಕ್ರಮಿಗಳಾಗುವೆವು.” info
التفاسير:

external-link copy
80 : 12

فَلَمَّا اسْتَیْـَٔسُوْا مِنْهُ خَلَصُوْا نَجِیًّا ؕ— قَالَ كَبِیْرُهُمْ اَلَمْ تَعْلَمُوْۤا اَنَّ اَبَاكُمْ قَدْ اَخَذَ عَلَیْكُمْ مَّوْثِقًا مِّنَ اللّٰهِ وَمِنْ قَبْلُ مَا فَرَّطْتُّمْ فِیْ یُوْسُفَ ۚ— فَلَنْ اَبْرَحَ الْاَرْضَ حَتّٰی یَاْذَنَ لِیْۤ اَبِیْۤ اَوْ یَحْكُمَ اللّٰهُ لِیْ ۚ— وَهُوَ خَیْرُ الْحٰكِمِیْنَ ۟

ನಂತರ ಅವರು ತಮ್ಮನ ಬಗ್ಗೆ ನಿರಾಶರಾದಾಗ, ಏಕಾಂತ ಸ್ಥಳದಲ್ಲಿ ಕುಳಿತು ಸಮಾಲೋಚನೆ ಮಾಡಿದರು. ಅವರಲ್ಲಿ ಹಿರಿಯವನು ಹೇಳಿದನು: “ನಿಮ್ಮ ತಂದೆ ನಿಮ್ಮಿಂದ ಅಲ್ಲಾಹನ ಹೆಸರಿನಲ್ಲಿ ಖಾತ್ರಿ ಪಡೆದದ್ದು ಮತ್ತು ಇದಕ್ಕೆ ಮೊದಲು ನೀವು ಯೂಸುಫರ ವಿಷಯದಲ್ಲಿ ತಪ್ಪೆಸಗಿದ್ದು ನಿಮಗೆ ತಿಳಿದಿಲ್ಲವೇ? ಆದ್ದರಿಂದ ನನ್ನ ತಂದೆ ನನಗೆ ಅಪ್ಪಣೆ ನೀಡುವ ತನಕ ಅಥವಾ ಅಲ್ಲಾಹು ನನ್ನ ವಿಷಯದಲ್ಲಿ ತೀರ್ಪು ನೀಡುವ ತನಕ ನಾನು ಈ ಸ್ಥಳದಿಂದ ಕದಲುವುದೇ ಇಲ್ಲ. ತೀರ್ಪು ನೀಡುವುದರಲ್ಲಿ ಅವನು ಅತಿಶ್ರೇಷ್ಠನಾಗಿದ್ದಾನೆ. info
التفاسير:

external-link copy
81 : 12

اِرْجِعُوْۤا اِلٰۤی اَبِیْكُمْ فَقُوْلُوْا یٰۤاَبَانَاۤ اِنَّ ابْنَكَ سَرَقَ ۚ— وَمَا شَهِدْنَاۤ اِلَّا بِمَا عَلِمْنَا وَمَا كُنَّا لِلْغَیْبِ حٰفِظِیْنَ ۟

ನೀವು ನಿಮ್ಮ ತಂದೆಯ ಬಳಿಗೆ ಮರಳಿ ಹೋಗಿ ಹೇಳಿರಿ: ಅಪ್ಪಾ! ನಿಜಕ್ಕೂ ನಿಮ್ಮ ಮಗ ಕಳ್ಳತನ ಮಾಡಿದ್ದಾನೆ. ನಮಗೇನು ತಿಳಿದಿದೆಯೋ ಅದನ್ನೇ ನಾವು ಸಾಕ್ಷಿ ನುಡಿದಿದ್ದೇವೆ. ನಮಗಂತೂ ಅದೃಶ್ಯ ವಿಷಯಗಳ ಬಗ್ಗೆ ಸಾಕ್ಷಿ ನುಡಿಯಲು ಸಾಧ್ಯವಿಲ್ಲ. info
التفاسير:

external-link copy
82 : 12

وَسْـَٔلِ الْقَرْیَةَ الَّتِیْ كُنَّا فِیْهَا وَالْعِیْرَ الَّتِیْۤ اَقْبَلْنَا فِیْهَا ؕ— وَاِنَّا لَصٰدِقُوْنَ ۟

ನಾವು ತೆರಳಿದ್ದ ಆ ನಗರದ ಜನರೊಡನೆ ಮತ್ತು ನಾವು ಜೊತೆಯಾಗಿ ಬಂದ ಆ ದಾರಿಗ ತಂಡದೊಡನೆ ಕೇಳಿರಿ. ಖಂಡಿತವಾಗಿಯೂ ನಾವು ಸತ್ಯವನ್ನೇ ಹೇಳುತ್ತಿದ್ದೇವೆ.” info
التفاسير:

external-link copy
83 : 12

قَالَ بَلْ سَوَّلَتْ لَكُمْ اَنْفُسُكُمْ اَمْرًا ؕ— فَصَبْرٌ جَمِیْلٌ ؕ— عَسَی اللّٰهُ اَنْ یَّاْتِیَنِیْ بِهِمْ جَمِیْعًا ؕ— اِنَّهٗ هُوَ الْعَلِیْمُ الْحَكِیْمُ ۟

ತಂದೆ ಹೇಳಿದರು: “ಅಲ್ಲ, ವಾಸ್ತವವಾಗಿ ನೀವು ನಿಮ್ಮ ಮನಸ್ಸಿನಲ್ಲಿಯೇ ಒಂದು ವಿಷಯವನ್ನು ಕಲ್ಪಿಸಿ ತಂದಿದ್ದೀರಿ. ಆದ್ದರಿಂದ ತಾಳ್ಮೆಯಿಂದಿರುವುದೇ ಉತ್ತಮ. ಅಲ್ಲಾಹು ಅವರೆಲ್ಲರನ್ನೂ ನನ್ನ ಬಳಿಗೆ ಕರೆತರಲೂಬಹುದು. ನಿಶ್ಚಯವಾಗಿಯೂ ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.” info
التفاسير:

external-link copy
84 : 12

وَتَوَلّٰی عَنْهُمْ وَقَالَ یٰۤاَسَفٰی عَلٰی یُوْسُفَ وَابْیَضَّتْ عَیْنٰهُ مِنَ الْحُزْنِ فَهُوَ كَظِیْمٌ ۟

ನಂತರ ಅವರು (ಯಾಕೂಬ್) ಮಕ್ಕಳಿಂದ ತಿರುಗಿ ನಡೆಯುತ್ತಾ, “ಅಯ್ಯೋ ಯೂಸುಫ್!” ಎಂದು ಮರುಗಿದರು. ದುಃಖದಿಂದ ಅವರ ಕಣ್ಣಿನ ಪಾಪೆಗಳು ಬಿಳಿಯಾಗಿದ್ದವು. ಅವರು ದುಃಖವನ್ನು ನುಂಗಿಕೊಳ್ಳುತ್ತಿದ್ದರು. info
التفاسير:

external-link copy
85 : 12

قَالُوْا تَاللّٰهِ تَفْتَؤُا تَذْكُرُ یُوْسُفَ حَتّٰی تَكُوْنَ حَرَضًا اَوْ تَكُوْنَ مِنَ الْهٰلِكِیْنَ ۟

ಮಕ್ಕಳು ಹೇಳಿದರು: “ಅಲ್ಲಾಹನಾಣೆ! ನೀವು ಸಂಪೂರ್ಣ ಸೊರಗಿ ಬಿಡುವ ತನಕ ಅಥವಾ ಪ್ರಾಣ ಕಳೆದುಕೊಳ್ಳುವ ತನಕ ಯೂಸುಫರನ್ನು ನೆನೆಯುತ್ತಲೇ ಇರುವಿರಿ!” info
التفاسير:

external-link copy
86 : 12

قَالَ اِنَّمَاۤ اَشْكُوْا بَثِّیْ وَحُزْنِیْۤ اِلَی اللّٰهِ وَاَعْلَمُ مِنَ اللّٰهِ مَا لَا تَعْلَمُوْنَ ۟

ತಂದೆ ಹೇಳಿದರು: “ನಾನು ನನ್ನ ನೋವು ಮತ್ತು ದುಃಖವನ್ನು ಅಲ್ಲಾಹನ ಮುಂದೆ ಮಾತ್ರ ತೋಡಿಕೊಳ್ಳುತ್ತೇನೆ. ನನಗೆ ಅಲ್ಲಾಹನಿಂದ ನೀವು ತಿಳಿಯದ ವಿಷಯಗಳು ತಿಳಿದಿವೆ. info
التفاسير: