ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
87 : 12

یٰبَنِیَّ اذْهَبُوْا فَتَحَسَّسُوْا مِنْ یُّوْسُفَ وَاَخِیْهِ وَلَا تَایْـَٔسُوْا مِنْ رَّوْحِ اللّٰهِ ؕ— اِنَّهٗ لَا یَایْـَٔسُ مِنْ رَّوْحِ اللّٰهِ اِلَّا الْقَوْمُ الْكٰفِرُوْنَ ۟

ನನ್ನ ಪ್ರೀತಿಯ ಮಕ್ಕಳೇ! ಹೊರಡಿ. ಯೂಸುಫ್ ಮತ್ತು ಅವನ ತಮ್ಮನನ್ನು ಹುಡುಕಿರಿ. ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗಬೇಡಿ. ನಿಶ್ಚಯವಾಗಿಯೂ ಸತ್ಯನಿಷೇಧಿಗಳ ಹೊರತು ಬೇರೆ ಯಾರೂ ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗುವುದಿಲ್ಲ.” info
التفاسير:

external-link copy
88 : 12

فَلَمَّا دَخَلُوْا عَلَیْهِ قَالُوْا یٰۤاَیُّهَا الْعَزِیْزُ مَسَّنَا وَاَهْلَنَا الضُّرُّ وَجِئْنَا بِبِضَاعَةٍ مُّزْجٰىةٍ فَاَوْفِ لَنَا الْكَیْلَ وَتَصَدَّقْ عَلَیْنَا ؕ— اِنَّ اللّٰهَ یَجْزِی الْمُتَصَدِّقِیْنَ ۟

ನಂತರ ಅವರು ಯೂಸುಫರ ಬಳಿಗೆ ತೆರಳಿ ಹೇಳಿದರು: “ಓ ಅಝೀಝರೇ! ನಮಗೂ ನಮ್ಮ ಕುಟುಂಬಕ್ಕೂ ತೊಂದರೆಯಾಗಿದೆ. ನಾವು ಕಳಪೆ ಸರಕುಗಳನ್ನು ತಂದಿದ್ದೇವೆ. ನಮಗೆ (ಧಾನ್ಯಗಳನ್ನು) ಪೂರ್ಣವಾಗಿ ಅಳೆದುಕೊಡಿ. ನಮಗೆ ದಾನ ಮಾಡಿ. ದಾನ ಮಾಡುವವರಿಗೆ ಅಲ್ಲಾಹು ಖಂಡಿತ ಪ್ರತಿಫಲವನ್ನು ನೀಡುತ್ತಾನೆ.” info
التفاسير:

external-link copy
89 : 12

قَالَ هَلْ عَلِمْتُمْ مَّا فَعَلْتُمْ بِیُوْسُفَ وَاَخِیْهِ اِذْ اَنْتُمْ جٰهِلُوْنَ ۟

ಯೂಸುಫ್ ಹೇಳಿದರು: “ನೀವು ಅವಿವೇಕಿಗಳಾಗಿದ್ದಾಗ ನೀವು ಯೂಸುಫ್ ಮತ್ತು ಅವನ ತಮ್ಮನಿಗೆ ಏನು ಮಾಡಿದ್ದೇರೆಂದು ನಿಮಗೆ ತಿಳಿದಿದೆಯೇ?” info
التفاسير:

external-link copy
90 : 12

قَالُوْۤا ءَاِنَّكَ لَاَنْتَ یُوْسُفُ ؕ— قَالَ اَنَا یُوْسُفُ وَهٰذَاۤ اَخِیْ ؗ— قَدْ مَنَّ اللّٰهُ عَلَیْنَا ؕ— اِنَّهٗ مَنْ یَّتَّقِ وَیَصْبِرْ فَاِنَّ اللّٰهَ لَا یُضِیْعُ اَجْرَ الْمُحْسِنِیْنَ ۟

ಅವರು ಕೇಳಿದರು: “ನಿಜಕ್ಕೂ ಯೂಸುಫ್ ನೀವೇ ಏನು?” ಯೂಸುಫ್ ಹೇಳಿದರು: “ಹೌದು, ನಾನೇ ಯೂಸುಫ್. ಇದು ನನ್ನ ತಮ್ಮ. ಅಲ್ಲಾಹು ನಮಗೆ ಉಪಕಾರ ಮಾಡಿದ್ದಾನೆ. ನಿಜವಾಗಿಯೂ ಅಲ್ಲಾಹನನ್ನು ಭಯಪಡುವವರು ಮತ್ತು ತಾಳ್ಮೆಯಿಂದಿರುವವರು ಯಾರೋ—ಅಂತಹ ಒಳಿತು ಮಾಡುವ ಜನರ ಪ್ರತಿಫಲವನ್ನು ಅಲ್ಲಾಹು ಖಂಡಿತ ವ್ಯರ್ಥಗೊಳಿಸುವುದಿಲ್ಲ.” info
التفاسير:

external-link copy
91 : 12

قَالُوْا تَاللّٰهِ لَقَدْ اٰثَرَكَ اللّٰهُ عَلَیْنَا وَاِنْ كُنَّا لَخٰطِـِٕیْنَ ۟

ಅವರು ಹೇಳಿದರು: “ಅಲ್ಲಾಹನಾಣೆ! ಅಲ್ಲಾಹು ನಮಗಿಂತಲೂ ಹೆಚ್ಚು ನಿನಗೆ ಶ್ರೇಷ್ಠತೆಯನ್ನು ನೀಡಿದ್ದಾನೆ. ನಾವಂತೂ ಖಂಡಿತ ತಪ್ಪಿತಸ್ಥರಾಗಿದ್ದೆವು.” info
التفاسير:

external-link copy
92 : 12

قَالَ لَا تَثْرِیْبَ عَلَیْكُمُ الْیَوْمَ ؕ— یَغْفِرُ اللّٰهُ لَكُمْ ؗ— وَهُوَ اَرْحَمُ الرّٰحِمِیْنَ ۟

ಯೂಸುಫ್ ಹೇಳಿದರು: “ಇಂದು ನಿಮ್ಮ ಮೇಲೆ ಯಾವುದೇ ದೋಷಾರೋಪಣೆಯಿಲ್ಲ. ಅಲ್ಲಾಹು ನಿಮ್ಮನ್ನು ಕ್ಷಮಿಸಲಿ. ಅವನು ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನಾಗಿದ್ದಾನೆ. info
التفاسير:

external-link copy
93 : 12

اِذْهَبُوْا بِقَمِیْصِیْ هٰذَا فَاَلْقُوْهُ عَلٰی وَجْهِ اَبِیْ یَاْتِ بَصِیْرًا ۚ— وَاْتُوْنِیْ بِاَهْلِكُمْ اَجْمَعِیْنَ ۟۠

ನನ್ನ ಈ ಅಂಗಿಯನ್ನು ತೆಗೆದುಕೊಂಡು ಹೋಗಿ ನನ್ನ ತಂದೆಯ ಮುಖದ ಮೇಲೆ ಎಸೆಯಿರಿ. ಆಗ ಅವರಿಗೆ ದೃಷ್ಟಿ ಮರಳಿ ಬರುತ್ತದೆ. ನಿಮ್ಮ ಸಂಪೂರ್ಣ ಕುಟುಂಬವನ್ನು ಕರೆದುಕೊಂಡು ಬನ್ನಿ.” info
التفاسير:

external-link copy
94 : 12

وَلَمَّا فَصَلَتِ الْعِیْرُ قَالَ اَبُوْهُمْ اِنِّیْ لَاَجِدُ رِیْحَ یُوْسُفَ لَوْلَاۤ اَنْ تُفَنِّدُوْنِ ۟

ದಾರಿಗ ತಂಡವು (ಈಜಿಪ್ಟಿನಿಂದ) ನಿರ್ಗಮಿಸಿದಾಗ, ಇತ್ತ ಅವರ ತಂದೆ ಹೇಳಿದರು: “ನಿಜಕ್ಕೂ ನನಗೆ ಯೂಸುಫನ ಪರಿಮಳ ಬರುತ್ತಿದೆ. ನೀವು ನನ್ನನ್ನು ಹುಚ್ಚನೆಂದು ಭಾವಿಸದಿದ್ದರೆ!” info
التفاسير:

external-link copy
95 : 12

قَالُوْا تَاللّٰهِ اِنَّكَ لَفِیْ ضَلٰلِكَ الْقَدِیْمِ ۟

ಅವರ ಬಳಿಯಿದ್ದವರು ಹೇಳಿದರು: “ಅಲ್ಲಾಹನಾಣೆ! ನಿಜಕ್ಕೂ ನೀವು ನಿಮ್ಮ ಹಳೇ ಭ್ರಮೆಯಲ್ಲೇ ಇದ್ದೀರಿ”. info
التفاسير: