ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
96 : 12

فَلَمَّاۤ اَنْ جَآءَ الْبَشِیْرُ اَلْقٰىهُ عَلٰی وَجْهِهٖ فَارْتَدَّ بَصِیْرًا ۚؕ— قَالَ اَلَمْ اَقُلْ لَّكُمْ ۚ— اِنِّیْۤ اَعْلَمُ مِنَ اللّٰهِ مَا لَا تَعْلَمُوْنَ ۟

ನಂತರ ಸುವಾರ್ತೆ ನೀಡುವವನು ಬಂದು ಆ ಅಂಗಿಯನ್ನು ಅವರ ಮುಖದ ಮೇಲೆ ಎಸೆದಾಗ ಅವರಿಗೆ ದೃಷ್ಟಿ ಮರಳಿ ಬಂತು. ಅವರು ಹೇಳಿದರು: “ನಾನು ಅಲ್ಲಾಹನಿಂದ ನೀವು ತಿಳಿಯದಿರುವ ವಿಷಯಗಳನ್ನು ತಿಳಿದಿದ್ದೇನೆಂದು ನಿಮಗೆ ಹೇಳಲಿಲ್ಲವೇ?” info
التفاسير:

external-link copy
97 : 12

قَالُوْا یٰۤاَبَانَا اسْتَغْفِرْ لَنَا ذُنُوْبَنَاۤ اِنَّا كُنَّا خٰطِـِٕیْنَ ۟

ಮಕ್ಕಳು ಹೇಳಿದರು: “ಅಪ್ಪಾ! ನಮ್ಮ ತಪ್ಪಿಗಾಗಿ ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಜಕ್ಕೂ ನಾವು ಪಾಪಿಗಳಾಗಿದ್ದೆವು.” info
التفاسير:

external-link copy
98 : 12

قَالَ سَوْفَ اَسْتَغْفِرُ لَكُمْ رَبِّیْ ؕ— اِنَّهٗ هُوَ الْغَفُوْرُ الرَّحِیْمُ ۟

ತಂದೆ ಹೇಳಿದರು: “ನಾನು ಸದ್ಯವೇ ನಿಮಗೋಸ್ಕರ ನನ್ನ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸುತ್ತೇನೆ. ನಿಜಕ್ಕೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.” info
التفاسير:

external-link copy
99 : 12

فَلَمَّا دَخَلُوْا عَلٰی یُوْسُفَ اٰوٰۤی اِلَیْهِ اَبَوَیْهِ وَقَالَ ادْخُلُوْا مِصْرَ اِنْ شَآءَ اللّٰهُ اٰمِنِیْنَ ۟ؕ

ನಂತರ ಅವರೆಲ್ಲರೂ ಯೂಸುಫರ ಬಳಿಗೆ ತೆರಳಿದಾಗ ಅವರು ತಮ್ಮ ತಂದೆ-ತಾಯಿಯನ್ನು ತಮ್ಮ ಬಳಿಗೆ ಸೆಳೆದುಕೊಂಡರು. ಅವರು ಹೇಳಿದರು: “ಅಲ್ಲಾಹು ಇಚ್ಛಿಸಿದರೆ ಸುರಕ್ಷಿತವಾಗಿ ಈಜಿಪ್ಟನ್ನು ಪ್ರವೇಶಿಸಿರಿ.” info
التفاسير:

external-link copy
100 : 12

وَرَفَعَ اَبَوَیْهِ عَلَی الْعَرْشِ وَخَرُّوْا لَهٗ سُجَّدًا ۚ— وَقَالَ یٰۤاَبَتِ هٰذَا تَاْوِیْلُ رُءْیَایَ مِنْ قَبْلُ ؗ— قَدْ جَعَلَهَا رَبِّیْ حَقًّا ؕ— وَقَدْ اَحْسَنَ بِیْۤ اِذْ اَخْرَجَنِیْ مِنَ السِّجْنِ وَجَآءَ بِكُمْ مِّنَ الْبَدْوِ مِنْ بَعْدِ اَنْ نَّزَغَ الشَّیْطٰنُ بَیْنِیْ وَبَیْنَ اِخْوَتِیْ ؕ— اِنَّ رَبِّیْ لَطِیْفٌ لِّمَا یَشَآءُ ؕ— اِنَّهٗ هُوَ الْعَلِیْمُ الْحَكِیْمُ ۟

ಅವರು ತಮ್ಮ ತಂದೆ-ತಾಯಿಯನ್ನು ಸಿಂಹಾಸನಕ್ಕೇರಿಸಿ ಕೂರಿಸಿದರು. ಅವರೆಲ್ಲರೂ ಯೂಸುಫರ ಮುಂದೆ ಸಾಷ್ಟಾಂಗ ಮಾಡುತ್ತಾ ಬಿದ್ದರು. ಯೂಸುಫ್ ಹೇಳಿದರು: “ಅಪ್ಪಾಜಿ! ಇದೇ ನಾನು ಆವತ್ತು ಕಂಡ ಕನಸಿನ ವ್ಯಾಖ್ಯಾನ. ನನ್ನ ಪರಿಪಾಲಕನು (ಅಲ್ಲಾಹು) ಅದನ್ನು ನಿಜಗೊಳಿಸಿದ್ದಾನೆ. ನನ್ನನ್ನು ಕಾರಾಗೃಹದಿಂದ ಹೊರತಂದಾಗ, ಮತ್ತು ನನ್ನ ಹಾಗೂ ನನ್ನ ಸಹೋದರರ ಮಧ್ಯೆ ಶೈತಾನನು ದ್ವೇಷ ಮೂಡಿಸಿದ ನಂತರವೂ ನಿಮ್ಮನ್ನು ಮರುಭೂಮಿಯಿಂದ ಇಲ್ಲಿಗೆ ಕರೆತಂದಾಗ ಅವನು ನನಗೆ ಬಹಳ ಉಪಕಾರ ಮಾಡಿದ್ದಾನೆ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಅವನು ಬಯಸುವುದನ್ನು ಬಹಳ ನಾಜೂಕಾಗಿ ನಿರ್ವಹಿಸುತ್ತಾನೆ. ನಿಜಕ್ಕೂ ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.” info
التفاسير:

external-link copy
101 : 12

رَبِّ قَدْ اٰتَیْتَنِیْ مِنَ الْمُلْكِ وَعَلَّمْتَنِیْ مِنْ تَاْوِیْلِ الْاَحَادِیْثِ ۚ— فَاطِرَ السَّمٰوٰتِ وَالْاَرْضِ ۫— اَنْتَ وَلِیّٖ فِی الدُّنْیَا وَالْاٰخِرَةِ ۚ— تَوَفَّنِیْ مُسْلِمًا وَّاَلْحِقْنِیْ بِالصّٰلِحِیْنَ ۟

“ಓ ನನ್ನ ಪರಿಪಾಲಕನೇ! ನೀನು ನನಗೆ ಸಾಮ್ರಾಜ್ಯವನ್ನು ನೀಡಿದೆ ಮತ್ತು ಕನಸಿನ ವ್ಯಾಖ್ಯಾನಗಳನ್ನು ಕಲಿಸಿಕೊಟ್ಟೆ. ಭೂಮ್ಯಾಕಾಶಗಳ ಸೃಷ್ಟಿಕರ್ತನೇ! ಇಹಲೋಕದಲ್ಲೂ ಪರಲೋಕದಲ್ಲೂ ನೀನೇ ನನ್ನ ರಕ್ಷಕ. ಮುಸ್ಲಿಮನಾಗಿರುವ ಸ್ಥಿತಿಯಲ್ಲೇ ನನ್ನ ಪ್ರಾಣವನ್ನು ವಶಪಡಿಸು ಮತ್ತು ನನ್ನನ್ನು ನೀತಿವಂತರೊಡನೆ ಸೇರಿಸು.” info
التفاسير:

external-link copy
102 : 12

ذٰلِكَ مِنْ اَنْۢبَآءِ الْغَیْبِ نُوْحِیْهِ اِلَیْكَ ۚ— وَمَا كُنْتَ لَدَیْهِمْ اِذْ اَجْمَعُوْۤا اَمْرَهُمْ وَهُمْ یَمْكُرُوْنَ ۟

(ಪ್ರವಾದಿಯವರೇ) ಇವೆಲ್ಲವೂ ಅದೃಶ್ಯ ಸಮಾಚಾರಗಳಲ್ಲಿ ಸೇರಿದ್ದಾಗಿವೆ. ನಾವು ನಿಮಗೆ ಇದನ್ನು ದೇವವಾಣಿಯ ಮೂಲಕ ತಿಳಿಸುತ್ತಿದ್ದೇವೆ. ಅವರು ತಮ್ಮ ಯೋಜನೆಯನ್ನು ರೂಪಿಸಿ ಒಮ್ಮತದಿಂದ ನಿರ್ಧರಿಸಿದಾಗ ನೀವು ಅವರ ಬಳಿಯಲ್ಲಿರಲಿಲ್ಲ. info
التفاسير:

external-link copy
103 : 12

وَمَاۤ اَكْثَرُ النَّاسِ وَلَوْ حَرَصْتَ بِمُؤْمِنِیْنَ ۟

ನೀವು ಎಷ್ಟೇ ಹಂಬಲಿಸಿದರೂ ಜನರಲ್ಲಿ ಹೆಚ್ಚಿನವರು ಸತ್ಯವಿಶ್ವಾಸಿಗಳಾಗುವುದಿಲ್ಲ. info
التفاسير: