ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
31 : 12

فَلَمَّا سَمِعَتْ بِمَكْرِهِنَّ اَرْسَلَتْ اِلَیْهِنَّ وَاَعْتَدَتْ لَهُنَّ مُتَّكَاً وَّاٰتَتْ كُلَّ وَاحِدَةٍ مِّنْهُنَّ سِكِّیْنًا وَّقَالَتِ اخْرُجْ عَلَیْهِنَّ ۚ— فَلَمَّا رَاَیْنَهٗۤ اَكْبَرْنَهٗ وَقَطَّعْنَ اَیْدِیَهُنَّ ؗ— وَقُلْنَ حَاشَ لِلّٰهِ مَا هٰذَا بَشَرًا ؕ— اِنْ هٰذَاۤ اِلَّا مَلَكٌ كَرِیْمٌ ۟

ಮಹಿಳೆಯರ ಈ ಪುಕಾರು ಕೇಳಿದಾಗ ಆಕೆ ಅವರ ಬಳಿಗೆ ಆಳುಗಳನ್ನು ಕಳುಹಿಸಿ ಬರಮಾಡಿಸಿದಳು. ನಂತರ ಅವರಿಗೆ ಒರಗಿ ಕೂರುವ ಆಸನಗಳ ವ್ಯವಸ್ಥೆ ಮಾಡಿ, ಅವರೆಲ್ಲರಿಗೂ ಒಂದೊಂದು ಚೂರಿಯನ್ನು ನೀಡಿದಳು. ನಂತರ ಯೂಸುಫರನ್ನು ಕರೆದು, “ಇವರ ಮಂದೆ ಬಾ” ಎಂದಳು. ಯೂಸುಫರನ್ನು ಕಂಡಾಗ ಆ ಮಹಿಳೆಯರು ಹುಬ್ಬೇರಿಸಿದರು ಮತ್ತು ತಮ್ಮ ಕೈಗಳನ್ನೇ ಕೊಯ್ದರು. ಅವರು (ಬೆರಗಾಗಿ) ಹೇಳಿದರು: “ಅಲ್ಲಾಹು ಪರಿಶುದ್ಧನು! ಇವನು ಮನುಷ್ಯನೇ ಅಲ್ಲ! ಇವನೊಬ್ಬ ಶ್ರೇಷ್ಠ ದೇವದೂತನೇ ಸರಿ!” info
التفاسير:

external-link copy
32 : 12

قَالَتْ فَذٰلِكُنَّ الَّذِیْ لُمْتُنَّنِیْ فِیْهِ ؕ— وَلَقَدْ رَاوَدْتُّهٗ عَنْ نَّفْسِهٖ فَاسْتَعْصَمَ ؕ— وَلَىِٕنْ لَّمْ یَفْعَلْ مَاۤ اٰمُرُهٗ لَیُسْجَنَنَّ وَلَیَكُوْنًا مِّنَ الصّٰغِرِیْنَ ۟

ಅವಳು ಹೇಳಿದಳು: “ಯಾರ ವಿಷಯದಲ್ಲಿ ನೀವು ನನ್ನ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಿರೋ ಅವನೇ ಈತ! ನಾನು ಅವನನ್ನು ಪುಸಲಾಯಿಸಿದ್ದೆ. ಆದರೆ ಆತ ಅದಕ್ಕೆ ಒಪ್ಪದೆ ಪಾರಾಗಿಬಿಟ್ಟ. ನಾನು ಅವನಿಗೆ ಆಜ್ಞಾಪಿಸುವುದನ್ನು ಅವನು ನೆರವೇರಿಸದಿದ್ದರೆ, ಅವನನ್ನು ಕಾರಾಗೃಹಕ್ಕೆ ತಳ್ಳಲಾಗುವುದು ಮತ್ತು ಅವನು ಅವಮಾನಕ್ಕೊಳಗಾದವರಲ್ಲಿ ಸೇರುವನು.” info
التفاسير:

external-link copy
33 : 12

قَالَ رَبِّ السِّجْنُ اَحَبُّ اِلَیَّ مِمَّا یَدْعُوْنَنِیْۤ اِلَیْهِ ۚ— وَاِلَّا تَصْرِفْ عَنِّیْ كَیْدَهُنَّ اَصْبُ اِلَیْهِنَّ وَاَكُنْ مِّنَ الْجٰهِلِیْنَ ۟

ಯೂಸುಫ್ ಹೇಳಿದರು: “ಓ ನನ್ನ ಪರಿಪಾಲಕನೇ! ಇವರು ನನ್ನನ್ನು ಯಾವುದರ ಕಡೆಗೆ ಕರೆಯುತ್ತಿದ್ದಾರೋ ಅದಕ್ಕಿಂತಲೂ ನನಗೆ ಕಾರಾಗೃಹವೇ ಹೆಚ್ಚು ಇಷ್ಟ. ನೀನು ನನ್ನನ್ನು ಇವರ ಪಿತೂರಿಯಿಂದ ದೂರ ಸರಿಸದಿದ್ದರೆ ನಾನು ಅವರ ಕಡೆಗೆ ವಾಲುವೆನು ಮತ್ತು ಅವಿವೇಕಿಗಳಲ್ಲಿ ಸೇರಿದವನಾಗುವೆನು.” info
التفاسير:

external-link copy
34 : 12

فَاسْتَجَابَ لَهٗ رَبُّهٗ فَصَرَفَ عَنْهُ كَیْدَهُنَّ ؕ— اِنَّهٗ هُوَ السَّمِیْعُ الْعَلِیْمُ ۟

ಆಗ ಅವರ ಪರಿಪಾಲಕನು (ಅಲ್ಲಾಹು) ಅವರ ಪ್ರಾರ್ಥನೆಗೆ ಉತ್ತರಿಸಿದನು ಮತ್ತು ಆ ಮಹಿಳೆಯರ ಪಿತೂರಿಯಿಂದ ಅವರನ್ನು ದೂರ ಸರಿಸಿದನು. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. info
التفاسير:

external-link copy
35 : 12

ثُمَّ بَدَا لَهُمْ مِّنْ بَعْدِ مَا رَاَوُا الْاٰیٰتِ لَیَسْجُنُنَّهٗ حَتّٰی حِیْنٍ ۟۠

ನಂತರ ಆ ಎಲ್ಲಾ ಸಾಕ್ಷ್ಯಾಧಾರಗಳನ್ನು ನೋಡಿದ ಬಳಿಕವೂ ಯೂಸುಫರನ್ನು ಒಂದು ಅವಧಿಯ ತನಕ ಕಾರಾಗೃಹದಲ್ಲಿಡುವುದು ಲೇಸೆಂದು ಅವರಿಗೆ ತೋಚಿತು.[1] info

[1] ಯೂಸುಫರ (ಅವರ ಮೇಲೆ ಶಾಂತಿಯಿರಲಿ) ನಿರಪರಾಧಿತ್ವವು ಸಾಬೀತಾದ ಬಳಿಕವೂ ಅವರನ್ನು ಒಂದು ಅವಧಿಯ ತನಕ ಸೆರೆಯಲ್ಲಿಡುವುದು ಲೇಸೆಂದು ಆಕೆಯ ಗಂಡನಿಗೆ (ಮಂತ್ರಿಗೆ) ತೋರಿತು. ಬಹುಶಃ ಇದು ಯೂಸುಫರನ್ನು (ಅವರ ಮೇಲೆ ಶಾಂತಿಯಿರಲಿ) ತನ್ನ ಹೆಂಡತಿಯಿಂದ ದೂರವಿಡುವ ಉದ್ದೇಶದಿಂದಾಗಿರಬಹುದು.

التفاسير:

external-link copy
36 : 12

وَدَخَلَ مَعَهُ السِّجْنَ فَتَیٰنِ ؕ— قَالَ اَحَدُهُمَاۤ اِنِّیْۤ اَرٰىنِیْۤ اَعْصِرُ خَمْرًا ۚ— وَقَالَ الْاٰخَرُ اِنِّیْۤ اَرٰىنِیْۤ اَحْمِلُ فَوْقَ رَاْسِیْ خُبْزًا تَاْكُلُ الطَّیْرُ مِنْهُ ؕ— نَبِّئْنَا بِتَاْوِیْلِهٖ ۚ— اِنَّا نَرٰىكَ مِنَ الْمُحْسِنِیْنَ ۟

ಯೂಸುಫರೊಂದಿಗೆ ಇಬ್ಬರು ಯುವಕರು ಕೂಡ ಕಾರಾಗೃಹಕ್ಕೆ ಪ್ರವೇಶ ಮಾಡಿದರು. ಅವರಲ್ಲೊಬ್ಬನು ಹೇಳಿದನು: “ನಾನು ಮದ್ಯ (ದ್ರಾಕ್ಷಾರಸ) ಹಿಂಡುತ್ತಿರುವಂತೆ ನನಗೆ ಕನಸು ಬಿದ್ದಿದೆ.” ಇನ್ನೊಬ್ಬನು ಹೇಳಿದನು: “ನಾನು ನನ್ನ ತಲೆಯ ಮೇಲೆ ರೊಟ್ಟಿಯನ್ನು ಒಯ್ಯುತ್ತಿರುವಂತೆ ನನಗೆ ಕನಸು ಬಿದ್ದಿದೆ. ಹಕ್ಕಿಗಳು ಅದನ್ನು ಕುಕ್ಕಿ ತಿನ್ನುತ್ತಿದ್ದವು. ಇದರ ಅರ್ಥವೇನೆಂದು ನಮಗೆ ತಿಳಿಸಿಕೊಡಿ. ನಿಶ್ಚಯವಾಗಿಯೂ ನಾವು ನಿಮ್ಮನ್ನು ಸಜ್ಜನರಂತೆ ಕಾಣುತ್ತಿದ್ದೇವೆ.” info
التفاسير:

external-link copy
37 : 12

قَالَ لَا یَاْتِیْكُمَا طَعَامٌ تُرْزَقٰنِهٖۤ اِلَّا نَبَّاْتُكُمَا بِتَاْوِیْلِهٖ قَبْلَ اَنْ یَّاْتِیَكُمَا ؕ— ذٰلِكُمَا مِمَّا عَلَّمَنِیْ رَبِّیْ ؕ— اِنِّیْ تَرَكْتُ مِلَّةَ قَوْمٍ لَّا یُؤْمِنُوْنَ بِاللّٰهِ وَهُمْ بِالْاٰخِرَةِ هُمْ كٰفِرُوْنَ ۟

ಯೂಸುಫ್ ಹೇಳಿದರು: “ನಿಮಗೆ ಒದಗಿಸಲಾಗುವ ಆಹಾರವು ನಿಮ್ಮ ಬಳಿಗೆ ಬರುವ ಮೊದಲೇ ನಾನು ಅದರ (ಕನಸಿನ) ವ್ಯಾಖ್ಯಾನವನ್ನು ನಿಮಗೆ ತಿಳಿಸಿಕೊಡುವೆನು. ನಾನು ಹೇಳುವ ವ್ಯಾಖ್ಯಾನವು ನನ್ನ ಪರಿಪಾಲಕನು (ಅಲ್ಲಾಹು) ನನಗೆ ಕಲಿಸಿಕೊಟ್ಟ ವಿಷಯಗಳಲ್ಲಿ ಸೇರಿದ್ದಾಗಿದೆ. ಅಲ್ಲಾಹನಲ್ಲಿ ವಿಶ್ವಾಸವಿಡದ ಮತ್ತು ಪರಲೋಕವನ್ನು ನಿಷೇಧಿಸುವ ಜನರ ಮಾರ್ಗವನ್ನು ನಿಶ್ಚಯವಾಗಿಯೂ ನಾನು ತೊರೆದಿದ್ದೇನೆ. info
التفاسير: