ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
38 : 12

وَاتَّبَعْتُ مِلَّةَ اٰبَآءِیْۤ اِبْرٰهِیْمَ وَاِسْحٰقَ وَیَعْقُوْبَ ؕ— مَا كَانَ لَنَاۤ اَنْ نُّشْرِكَ بِاللّٰهِ مِنْ شَیْءٍ ؕ— ذٰلِكَ مِنْ فَضْلِ اللّٰهِ عَلَیْنَا وَعَلَی النَّاسِ وَلٰكِنَّ اَكْثَرَ النَّاسِ لَا یَشْكُرُوْنَ ۟

ನಾನು ನನ್ನ ಪೂರ್ವ ಪಿತಾಮಹರಾದ ಇಬ್ರಾಹೀಮ್, ಇಸ್‍ಹಾಕ್ ಮತ್ತು ಯಾಕೂಬರ ಮಾರ್ಗವನ್ನು ಹಿಂಬಾಲಿಸಿದ್ದೇನೆ. ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು ನಮಗೆ ಅರ್ಹವಾದುದಲ್ಲ. ಇದು ನಮ್ಮ ಮತ್ತು ಸಂಪೂರ್ಣ ಮಾನವರ ಮೇಲಿರುವ ಅಲ್ಲಾಹನ ವಿಶೇಷ ಅನುಗ್ರಹವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ. info
التفاسير:

external-link copy
39 : 12

یٰصَاحِبَیِ السِّجْنِ ءَاَرْبَابٌ مُّتَفَرِّقُوْنَ خَیْرٌ اَمِ اللّٰهُ الْوَاحِدُ الْقَهَّارُ ۟ؕ

ಓ ನನ್ನ ಕಾರಾಗೃಹದ ಗೆಳೆಯರೇ! ಅನೇಕ ವಿಭಿನ್ನ ದೇವರುಗಳು ಉತ್ತಮವೋ, ಅಥವಾ ಮಹಾ ಶಕ್ತಿಶಾಲಿಯಾದ ಏಕೈಕ ಅಲ್ಲಾಹನೋ? info
التفاسير:

external-link copy
40 : 12

مَا تَعْبُدُوْنَ مِنْ دُوْنِهٖۤ اِلَّاۤ اَسْمَآءً سَمَّیْتُمُوْهَاۤ اَنْتُمْ وَاٰبَآؤُكُمْ مَّاۤ اَنْزَلَ اللّٰهُ بِهَا مِنْ سُلْطٰنٍ ؕ— اِنِ الْحُكْمُ اِلَّا لِلّٰهِ ؕ— اَمَرَ اَلَّا تَعْبُدُوْۤا اِلَّاۤ اِیَّاهُ ؕ— ذٰلِكَ الدِّیْنُ الْقَیِّمُ وَلٰكِنَّ اَكْثَرَ النَّاسِ لَا یَعْلَمُوْنَ ۟

ನೀವು ಅಲ್ಲಾಹನನ್ನು ಬಿಟ್ಟು ಯಾವೆಲ್ಲಾ ದೇವರುಗಳನ್ನು ಆರಾಧಿಸುತ್ತಿದ್ದೀರೋ ಅವರು ಕೇವಲ ನೀವು ಮತ್ತು ನಿಮ್ಮ ಪೂರ್ವಜರು ನಾಮಕರಣ ಮಾಡಿದ ಕೆಲವು ಹೆಸರುಗಳಲ್ಲದೆ ಇನ್ನೇನೂ ಅಲ್ಲ. ಅಲ್ಲಾಹು ಅವರ ಬಗ್ಗೆ ಯಾವುದೇ ಸಾಕ್ಷ್ಯಾಧಾರವನ್ನು ಅವತೀರ್ಣಗೊಳಿಸಿಲ್ಲ. ಆಜ್ಞಾಧಿಕಾರವಿರುವುದು ಅಲ್ಲಾಹನಿಗೆ ಮಾತ್ರ. ನೀವು ಅವನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬಾರದೆಂದು ಅವನು ಆಜ್ಞಾಪಿಸಿದ್ದಾನೆ. ಅದೇ ನೇರ ಧರ್ಮ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. info
التفاسير:

external-link copy
41 : 12

یٰصَاحِبَیِ السِّجْنِ اَمَّاۤ اَحَدُكُمَا فَیَسْقِیْ رَبَّهٗ خَمْرًا ۚ— وَاَمَّا الْاٰخَرُ فَیُصْلَبُ فَتَاْكُلُ الطَّیْرُ مِنْ رَّاْسِهٖ ؕ— قُضِیَ الْاَمْرُ الَّذِیْ فِیْهِ تَسْتَفْتِیٰنِ ۟ؕ

ಓ ನನ್ನ ಕಾರಾಗೃಹದ ಗೆಳೆಯರೇ! ನಿಮ್ಮಲ್ಲೊಬ್ಬನು ತನ್ನ ಅರಸನಿಗೆ ಮದ್ಯವನ್ನು ಕುಡಿಸುವನು.[1] ಇನ್ನೊಬ್ಬನನ್ನು ಶಿಲುಬೆಗೇರಿಸಲಾಗುವುದು. ಆಗ ಹಕ್ಕಿಗಳು ಅವನ ತಲೆಯನ್ನು ಕುಕ್ಕಿ ತಿನ್ನುವುವು. ನೀವಿಬ್ಬರು ತೀರ್ಪು ಕೇಳುವ ಆ ವಿಷಯವು ಈಗಾಗಲೇ ತೀರ್ಮಾನಿಸಲ್ಪಟ್ಟಿದೆ.” info

[1] ಅಂದರೆ ಅವನು ಸೆರೆಮನೆಯಿಂದ ಬಿಡುಗಡೆಯಾದ ನಂತರ ಅರಸನಿಗೆ ಮದ್ಯ ಬಡಿಸುವ ಕೆಲಸಕ್ಕೆ ಸೇರಿಕೊಳ್ಳುವನು.

التفاسير:

external-link copy
42 : 12

وَقَالَ لِلَّذِیْ ظَنَّ اَنَّهٗ نَاجٍ مِّنْهُمَا اذْكُرْنِیْ عِنْدَ رَبِّكَ ؗ— فَاَنْسٰىهُ الشَّیْطٰنُ ذِكْرَ رَبِّهٖ فَلَبِثَ فِی السِّجْنِ بِضْعَ سِنِیْنَ ۟۠

ಅವರಿಬ್ಬರಲ್ಲಿ ಬಿಡುಗಡೆಯಾಗುವನೆಂಬ ಗುಮಾನಿಯಿದ್ದ ವ್ಯಕ್ತಿಯೊಡನೆ ಅವರು ಹೇಳಿದರು: “ನಿನ್ನ ಅರಸನಿಗೆ ನನ್ನ ಬಗ್ಗೆ ನೆನಪು ಮಾಡು.” ಆದರೆ ಅವನ ಅರಸನ ಬಳಿ ಯೂಸುಫರ ಬಗ್ಗೆ ನೆನಪು ಮಾಡುವುದನ್ನು ಶೈತಾನನು ಮರೆಸಿ ಬಿಟ್ಟನು. ಆದ್ದರಿಂದ ಅವರು ಅನೇಕ ವರ್ಷಗಳ ಕಾಲ ಕಾರಾಗೃಹದಲ್ಲೇ ಉಳಿದರು. info
التفاسير:

external-link copy
43 : 12

وَقَالَ الْمَلِكُ اِنِّیْۤ اَرٰی سَبْعَ بَقَرٰتٍ سِمَانٍ یَّاْكُلُهُنَّ سَبْعٌ عِجَافٌ وَّسَبْعَ سُنْۢبُلٰتٍ خُضْرٍ وَّاُخَرَ یٰبِسٰتٍ ؕ— یٰۤاَیُّهَا الْمَلَاُ اَفْتُوْنِیْ فِیْ رُءْیَایَ اِنْ كُنْتُمْ لِلرُّءْیَا تَعْبُرُوْنَ ۟

ಅರಸ ಹೇಳಿದನು: “ಏಳು ಕೊಬ್ಬಿದ ಹಸುಗಳನ್ನು ಏಳು ಬಡಕಲು ಹಸುಗಳು ತಿನ್ನುವುದನ್ನು ಮತ್ತು ಏಳು ಹಸಿರು ತೆನೆಗಳು ಹಾಗೂ ಏಳು ಒಣ ತೆನೆಗಳನ್ನು ನಾನು (ಕನಸಿನಲ್ಲಿ) ಕಂಡಿದ್ದೇನೆ. ಓ ಸರದಾರರೇ! ನನ್ನ ಈ ಕನಸಿನ ಅರ್ಥವೇನೆಂದು ತಿಳಿಸಿಕೊಡಿ. ನೀವು ಕನಸುಗಳ ವ್ಯಾಖ್ಯಾನವನ್ನು ತಿಳಿದವರಾಗಿದ್ದರೆ.” info
التفاسير: