ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
65 : 12

وَلَمَّا فَتَحُوْا مَتَاعَهُمْ وَجَدُوْا بِضَاعَتَهُمْ رُدَّتْ اِلَیْهِمْ ؕ— قَالُوْا یٰۤاَبَانَا مَا نَبْغِیْ ؕ— هٰذِهٖ بِضَاعَتُنَا رُدَّتْ اِلَیْنَا ۚ— وَنَمِیْرُ اَهْلَنَا وَنَحْفَظُ اَخَانَا وَنَزْدَادُ كَیْلَ بَعِیْرٍ ؕ— ذٰلِكَ كَیْلٌ یَّسِیْرٌ ۟

ಅವರು ತಮ್ಮ ಹಸುಬೆಗಳನ್ನು ಬಿಚ್ಚಿದಾಗ ತಮ್ಮ ಸರಕುಗಳನ್ನು ಕಂಡರು. ಅದನ್ನು ಅವರಿಗೆ ಹಿಂದಿರುಗಿಸಲಾಗಿತ್ತು. ಅವರು ಹೇಳಿದರು: “ಅಪ್ಪಾ! ನಮಗೆ ಇನ್ನೇನು ಬೇಕು? ಇಗೋ ನಮ್ಮ ಸರಕುಗಳನ್ನು ನಮಗೇ ಮರಳಿಸಲಾಗಿದೆ. ಆದರೂ ನಾವು ನಮ್ಮ ಕುಟುಂಬಕ್ಕೆ ಆಹಾರ ಸಾಮಗ್ರಿಗಳನ್ನು ತರುವೆವು ಮತ್ತು ನಮ್ಮ ಸಹೋದರನನ್ನು ಕಾಪಾಡುವೆವು. ಒಂದು ಒಂಟೆ ಹೊರುವ ಧಾನ್ಯಗಳನ್ನು ಹೆಚ್ಚಿಗೆ ತರುವೆವು. ಅದು ಬಹಳ ಸುಲಭದ ಅಳತೆಯಾಗಿದೆ.”[1] info

[1] ಇದರ ಒಂದು ಅರ್ಥವೇನೆಂದರೆ ಅರಸನಿಗೆ ಒಂದು ಒಂಟೆ ಹೊರುವ ಧಾನ್ಯಗಳನ್ನು ಹೆಚ್ಚಿಗೆ ಕೊಡುವುದು ಕಷ್ಟದ ವಿಷಯವೇನಲ್ಲ. ಇನ್ನೊಂದು ಅರ್ಥವೇನೆಂದರೆ ನಾವು ಈಗಾಗಲೇ ತಂದಿರುವ ಧಾನ್ಯಗಳು ನಮಗೆ ಸುಲಭದಲ್ಲಿ ಸಿಕ್ಕಿದ ಧಾನ್ಯಗಳಾಗಿವೆ. ನಾವು ತಮ್ಮನನ್ನು ಕರೆದುಕೊಂಡು ಹೋದರೆ ನಮಗೆ ಇದಕ್ಕಿಂತಲೂ ಹೆಚ್ಚು ಧಾನ್ಯ ಸಿಗುತ್ತದೆ.

التفاسير: