ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
33 : 13

اَفَمَنْ هُوَ قَآىِٕمٌ عَلٰی كُلِّ نَفْسٍ بِمَا كَسَبَتْ ۚ— وَجَعَلُوْا لِلّٰهِ شُرَكَآءَ ؕ— قُلْ سَمُّوْهُمْ ؕ— اَمْ تُنَبِّـُٔوْنَهٗ بِمَا لَا یَعْلَمُ فِی الْاَرْضِ اَمْ بِظَاهِرٍ مِّنَ الْقَوْلِ ؕ— بَلْ زُیِّنَ لِلَّذِیْنَ كَفَرُوْا مَكْرُهُمْ وَصُدُّوْا عَنِ السَّبِیْلِ ؕ— وَمَنْ یُّضْلِلِ اللّٰهُ فَمَا لَهٗ مِنْ هَادٍ ۟

ಪ್ರತಿಯೊಬ್ಬ ಮನುಷ್ಯನು ಮಾಡಿದ ಕರ್ಮಗಳ ಮೇಲ್ನೋಟ ವಹಿಸುವ ಅಲ್ಲಾಹು (ಏನೂ ತಿಳಿಯದವನೇ?) ಅವರು (ಇತರ ದೇವರುಗಳನ್ನು) ಅಲ್ಲಾಹನಿಗೆ ಸಹಭಾಗಿಗಳಾಗಿ ಮಾಡಿದರು. ಹೇಳಿರಿ: “ಅವರ ಹೆಸರನ್ನು ಹೇಳಿರಿ. ಭೂಮಿಯಲ್ಲಿ ಅಲ್ಲಾಹನಿಗೆ ತಿಳಿಯದಿರುವ ವಿಷಯವನ್ನು ನೀವು ಅವನಿಗೆ ತಿಳಿಸುತ್ತಿದ್ದೀರಾ? ಅಥವಾ ನೀವು ಕೇವಲ ಊಹಿಸಿ ಹಾಗೆ ಹೇಳುತ್ತಿದ್ದೀರಾ?”[1] ಅಲ್ಲ, ವಾಸ್ತವವಾಗಿ ಸತ್ಯನಿಷೇಧಿಗಳಿಗೆ ಅವರ ತಂತ್ರಗಳನ್ನು ಆಕರ್ಷಕವಾಗಿ ತೋರಿಸಲಾಗಿದೆ ಮತ್ತು ಅವರನ್ನು ಸತ್ಯಮಾರ್ಗದಿಂದ ತಡೆಯಲಾಗಿದೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ದಾರಿ ತೋರಿಸುವವರು ಯಾರೂ ಇಲ್ಲ. info

[1] ಅಂದರೆ ಅಲ್ಲಾಹನ ಹೊರತು ಬೇರೆ ದೇವರುಗಳಿದ್ದಾರೆಂಬ ವಿಷಯ ಅಲ್ಲಾಹನಿಗೆ ತಿಳಿದಿಲ್ಲ. ನೀವು ಆರಾಧಿಸುತ್ತಿರುವ ವಿಗ್ರಹಗಳು ದೇವರುಗಳೆಂಬುದಕ್ಕೆ ಯಾವುದೇ ಆಧಾರವಿಲ್ಲ. ನೀವು ಹೇಳುತ್ತಿರುವ ನಿಮ್ಮ ದೇವರುಗಳ ಹೆಸರುಗಳನ್ನು ಅಲ್ಲಾಹು ಅವನ ಗ್ರಂಥಗಳಲ್ಲಿ ಅವತೀರ್ಣಗೊಳಿಸಿಲ್ಲ. ಅವು ನೀವು ಮತ್ತು ಪೂರ್ವಜರು ಇಟ್ಟ ಹೆಸರುಗಳಾಗಿವೆ.

التفاسير: