[1] ಅಂದರೆ ದೇವದೂತರುಗಳು, ಪ್ರವಾದಿಗಳು ಮತ್ತು ಮಹಾಪುರುಷರು. ಬಹುದೇವಾರಾಧಕರಲ್ಲಿ ಅನೇಕರು ದೇವದೂತರುಗಳನ್ನು ಆರಾಧಿಸುತ್ತಿದ್ದರು. ಯಹೂದಿಗಳು ಪ್ರವಾದಿ ಉಝೈರ್ (ಎಜ್ರಾ) ರನ್ನು ಮತ್ತು ಕ್ರೈಸ್ತರು ಪ್ರವಾದಿ ಈಸಾ (ಯೇಸು) ರನ್ನು ಅಲ್ಲಾಹನ ಪುತ್ರರೆಂದು ಕರೆದು ಆರಾಧಿಸುತ್ತಾರೆ. ಕೆಲವರು ಸಮಾಧಿಗಳಲ್ಲಿರುವ ಮಹಾಪುರುಷರನ್ನು ಆರಾಧಿಸುತ್ತಾರೆ. ವಾಸ್ತವವಾಗಿ ಇವರೆಲ್ಲರೂ ಅಲ್ಲಾಹನ ಇಷ್ಟದಾಸರಾಗಿದ್ದಾರೆ ಮತ್ತು ಅಲ್ಲಾಹನಿಗೆ ಸಮೀಪವಾಗುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ನೀವು ಅವರನ್ನು ಆರಾಧಿಸುತ್ತಿರುವ ಬಗ್ಗೆ ಅವರಿಗೆ ಯಾವುದೇ ಜ್ಞಾನವಿಲ್ಲ.