ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
98 : 18

قَالَ هٰذَا رَحْمَةٌ مِّنْ رَّبِّیْ ۚ— فَاِذَا جَآءَ وَعْدُ رَبِّیْ جَعَلَهٗ دَكَّآءَ ۚ— وَكَانَ وَعْدُ رَبِّیْ حَقًّا ۟ؕ

ದುಲ್-ಕರ್ನೈನ್ ಹೇಳಿದರು: “ಇದು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ದಯೆಯಾಗಿದೆ. ನನ್ನ ಪರಿಪಾಲಕನ (ಅಲ್ಲಾಹನ) ವಾಗ್ದಾನವು ಬಂದರೆ ಅವನು ಅದನ್ನು ನುಚ್ಚುನೂರು ಮಾಡುವನು. ನನ್ನ ಪರಿಪಾಲಕನ (ಅಲ್ಲಾಹನ) ವಾಗ್ದಾನವು ಸತ್ಯವಾಗಿದೆ.” info
التفاسير:

external-link copy
99 : 18

وَتَرَكْنَا بَعْضَهُمْ یَوْمَىِٕذٍ یَّمُوْجُ فِیْ بَعْضٍ وَّنُفِخَ فِی الصُّوْرِ فَجَمَعْنٰهُمْ جَمْعًا ۟ۙ

(ಅಂದು) ಅವರು ಪರಸ್ಪರ ಉಕ್ಕೇರುವಂತೆ ಅವರನ್ನು ಬಿಟ್ಟುಬಿಡುವೆವು. ಕಹಳೆಯಲ್ಲಿ ಊದಲಾಗುವುದು. ಆಗ ನಾವು ಅವರೆಲ್ಲರನ್ನೂ ಒಟ್ಟಾಗಿ ಸೇರಿಸುವೆವು. info
التفاسير:

external-link copy
100 : 18

وَّعَرَضْنَا جَهَنَّمَ یَوْمَىِٕذٍ لِّلْكٰفِرِیْنَ عَرْضَا ۟ۙ

ಅಂದು ನಾವು ಸತ್ಯನಿಷೇಧಿಗಳಿಗೆ ನರಕವನ್ನು ನೇರವಾಗಿ ತೋರಿಸುವೆವು. info
التفاسير:

external-link copy
101 : 18

١لَّذِیْنَ كَانَتْ اَعْیُنُهُمْ فِیْ غِطَآءٍ عَنْ ذِكْرِیْ وَكَانُوْا لَا یَسْتَطِیْعُوْنَ سَمْعًا ۟۠

ಅವರು ಯಾರೆಂದರೆ, ಅವರ ಕಣ್ಣುಗಳಿಗೆ ನನ್ನ ನೆನಪು ಬರದಂತೆ ಪರದೆ ಹಾಕಲಾದವರು. ಸತ್ಯಕ್ಕೆ ಕಿವಿಗೊಡಲು ಕೂಡ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. info
التفاسير:

external-link copy
102 : 18

اَفَحَسِبَ الَّذِیْنَ كَفَرُوْۤا اَنْ یَّتَّخِذُوْا عِبَادِیْ مِنْ دُوْنِیْۤ اَوْلِیَآءَ ؕ— اِنَّاۤ اَعْتَدْنَا جَهَنَّمَ لِلْكٰفِرِیْنَ نُزُلًا ۟

ನನ್ನನ್ನು ಬಿಟ್ಟು ನನ್ನ ದಾಸರನ್ನು ರಕ್ಷಕರನ್ನಾಗಿ ಸ್ವೀಕರಿಸಬಹುದೆಂದು ಸತ್ಯನಿಷೇಧಿಗಳು ಭಾವಿಸಿದ್ದಾರೆಯೇ? ನಿಶ್ಚಯವಾಗಿಯೂ ನಾವು ಸತ್ಯನಿಷೇಧಿಗಳಿಗೆ ಆತಿಥ್ಯವಾಗಿ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ. info
التفاسير:

external-link copy
103 : 18

قُلْ هَلْ نُنَبِّئُكُمْ بِالْاَخْسَرِیْنَ اَعْمَالًا ۟ؕ

(ಪ್ರವಾದಿಯವರೇ) ಕೇಳಿರಿ: “ಕರ್ಮಗಳ ವಿಷಯದಲ್ಲಿ ಅತಿ ಹೆಚ್ಚು ನಷ್ಟದಲ್ಲಿರುವವರು ಯಾರೆಂದು ನಾವು ನಿಮಗೆ ತಿಳಿಸಿಕೊಡಲೇ? info
التفاسير:

external-link copy
104 : 18

اَلَّذِیْنَ ضَلَّ سَعْیُهُمْ فِی الْحَیٰوةِ الدُّنْیَا وَهُمْ یَحْسَبُوْنَ اَنَّهُمْ یُحْسِنُوْنَ صُنْعًا ۟

ಅವರು ಯಾರೆಂದರೆ, ಇಹಲೋಕ ಜೀವನದಲ್ಲಿ ತಮ್ಮ ಪರಿಶ್ರಮಗಳನ್ನು ವ್ಯರ್ಥಗೊಳಿಸಿದವರು. ಅವರು ತಾವು ಅತ್ಯುತ್ತಮ ಕರ್ಮಗಳನ್ನು ಮಾಡುತ್ತಿದ್ದೇವೆಂಬ ಭಾವನೆಯಲ್ಲಿದ್ದಾರೆ.” info
التفاسير:

external-link copy
105 : 18

اُولٰٓىِٕكَ الَّذِیْنَ كَفَرُوْا بِاٰیٰتِ رَبِّهِمْ وَلِقَآىِٕهٖ فَحَبِطَتْ اَعْمَالُهُمْ فَلَا نُقِیْمُ لَهُمْ یَوْمَ الْقِیٰمَةِ وَزْنًا ۟

ಅವರೇ ತಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಮತ್ತು ಅವನನ್ನು ಭೇಟಿಯಾಗುವುದನ್ನು ನಿಷೇಧಿಸಿದವರು. ಆದ್ದರಿಂದ ಅವರ ಕರ್ಮಗಳು ವ್ಯರ್ಥವಾದವು. ಪುನರುತ್ಥಾನ ದಿನದಂದು ನಾವು ಅವರಿಗೆ ಯಾವುದೇ ತೂಕವನ್ನು (ಪ್ರಾಮುಖ್ಯತೆಯನ್ನು) ನೀಡುವುದಿಲ್ಲ. info
التفاسير:

external-link copy
106 : 18

ذٰلِكَ جَزَآؤُهُمْ جَهَنَّمُ بِمَا كَفَرُوْا وَاتَّخَذُوْۤا اٰیٰتِیْ وَرُسُلِیْ هُزُوًا ۟

ಅದೇ ಅವರ ಸ್ಥಿತಿ! ಅವರು ನಿಷೇಧಿಸಿದ ಕಾರಣ ಮತ್ತು ನನ್ನ ವಚನಗಳನ್ನು ಹಾಗೂ ನನ್ನ ಸಂದೇಶವಾಹಕರುಗಳನ್ನು ತಮಾಷೆಯಾಗಿ ಸ್ವೀಕರಿಸಿದ ಕಾರಣ ಅವರಿಗಿರುವ ಪ್ರತಿಫಲವು ನರಕವಾಗಿದೆ. info
التفاسير:

external-link copy
107 : 18

اِنَّ الَّذِیْنَ اٰمَنُوْا وَعَمِلُوا الصّٰلِحٰتِ كَانَتْ لَهُمْ جَنّٰتُ الْفِرْدَوْسِ نُزُلًا ۟ۙ

ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಆತಿಥ್ಯವಾಗಿ ಫಿರ್ದೌಸ್ (ಅತ್ಯುನ್ನತ) ಸ್ವರ್ಗೋದ್ಯಾನಗಳಿವೆ. info
التفاسير:

external-link copy
108 : 18

خٰلِدِیْنَ فِیْهَا لَا یَبْغُوْنَ عَنْهَا حِوَلًا ۟

ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದರಿಂದ ಸ್ಥಳಾಂತರಗೊಳ್ಳಲು ಅವರು ಯಾವತ್ತೂ ಬಯಸುವುದಿಲ್ಲ. info
التفاسير:

external-link copy
109 : 18

قُلْ لَّوْ كَانَ الْبَحْرُ مِدَادًا لِّكَلِمٰتِ رَبِّیْ لَنَفِدَ الْبَحْرُ قَبْلَ اَنْ تَنْفَدَ كَلِمٰتُ رَبِّیْ وَلَوْ جِئْنَا بِمِثْلِهٖ مَدَدًا ۟

ಹೇಳಿರಿ: “ನನ್ನ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಬರೆಯಲು ಸಮುದ್ರ ಜಲವನ್ನು ಶಾಯಿಯಾಗಿ ಬಳಸಿದರೆ, ನನ್ನ ಪರಿಪಾಲಕನ (ಅಲ್ಲಾಹನ) ವಚನಗಳು ಮುಗಿಯುವ ಮೊದಲೇ ಸಮುದ್ರದ ನೀರು ಮುಗಿಯುವುದು ನಿಶ್ಚಿತ. ನಾವು ಅದರಂತಿರುವ ಇನ್ನೊಂದನ್ನು ಸಹಾಯಕ್ಕಾಗಿ ತಂದರೂ ಸಹ.” info
التفاسير:

external-link copy
110 : 18

قُلْ اِنَّمَاۤ اَنَا بَشَرٌ مِّثْلُكُمْ یُوْحٰۤی اِلَیَّ اَنَّمَاۤ اِلٰهُكُمْ اِلٰهٌ وَّاحِدٌ ۚ— فَمَنْ كَانَ یَرْجُوْا لِقَآءَ رَبِّهٖ فَلْیَعْمَلْ عَمَلًا صَالِحًا وَّلَا یُشْرِكْ بِعِبَادَةِ رَبِّهٖۤ اَحَدًا ۟۠

(ಪ್ರವಾದಿಯವರೇ) ಹೇಳಿರಿ: “ನಾನು ನಿಮ್ಮಂತಹ ಒಬ್ಬ ಮನುಷ್ಯ ಮಾತ್ರವಾಗಿದ್ದೇನೆ. ನಿಮ್ಮ ದೇವನು ಏಕೈಕ ದೇವನೆಂದು ನನಗೆ ದೇವವಾಣಿ ನೀಡಲಾಗುತ್ತಿದೆ. ಆದ್ದರಿಂದ ಯಾರು ತನ್ನ ಪರಿಪಾಲಕನ (ಅಲ್ಲಾಹನ) ಭೇಟಿಯನ್ನು ನಿರೀಕ್ಷಿಸುತ್ತಾನೋ ಅವನು ಸತ್ಕರ್ಮಗಳನ್ನು ಮಾಡಲಿ ಮತ್ತು ತನ್ನ ಪರಿಪಾಲಕನ (ಅಲ್ಲಾಹನ) ಆರಾಧನೆಯಲ್ಲಿ ಯಾರನ್ನೂ ಸಹಭಾಗಿಯಾಗಿ ಮಾಡದಿರಲಿ.” info
التفاسير: