ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
17 : 18

وَتَرَی الشَّمْسَ اِذَا طَلَعَتْ تَّزٰوَرُ عَنْ كَهْفِهِمْ ذَاتَ الْیَمِیْنِ وَاِذَا غَرَبَتْ تَّقْرِضُهُمْ ذَاتَ الشِّمَالِ وَهُمْ فِیْ فَجْوَةٍ مِّنْهُ ؕ— ذٰلِكَ مِنْ اٰیٰتِ اللّٰهِ ؕ— مَنْ یَّهْدِ اللّٰهُ فَهُوَ الْمُهْتَدِ ۚ— وَمَنْ یُّضْلِلْ فَلَنْ تَجِدَ لَهٗ وَلِیًّا مُّرْشِدًا ۟۠

ಸೂರ್ಯ ಉದಯಿಸುವಾಗ ಅದು ಅವರ ಗುಹೆಯ ಬಲಭಾಗಕ್ಕೆ ಚಲಿಸುವುದನ್ನು ಮತ್ತು ಸೂರ್ಯ ಅಸ್ತಮಿಸುವಾಗ ಅದು ಅವರನ್ನು ದಾಟಿ ಎಡಭಾಗಕ್ಕೆ ಚಲಿಸುವುದನ್ನು ನೀವು ಕಾಣುವಿರಿ.[1] ಅವರು ಆ ಗುಹೆಯ ವಿಸ್ತಾರವಾದ ಭಾಗದಲ್ಲಿದ್ದಾರೆ. ಅದು ಅಲ್ಲಾಹನ ದೃಷ್ಟಾಂತಗಳಲ್ಲಿ ಒಂದಾಗಿದೆ. ಅಲ್ಲಾಹು ಯಾರಿಗೆ ಸನ್ಮಾರ್ಗವನ್ನು ತೋರಿಸುತ್ತಾನೋ ಅವನು ಸನ್ಮಾರ್ಗವನ್ನು ಪಡೆಯುತ್ತಾನೆ. ಅವನು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಸರಿಯಾದ ಮಾರ್ಗವನ್ನು ತೋರಿಸಿಕೊಡುವ ಯಾವುದೇ ರಕ್ಷಕನನ್ನು ನೀವು ಎಂದಿಗೂ ಕಾಣಲಾರಿರಿ. info

[1] ಅಂದರೆ ಇಡೀ ದಿನ ಬಿಸಿಲು ಆ ಗುಹೆಯೊಳಗೆ ಬೀಳದಂತೆ ಅದನ್ನು ವಿನ್ಯಾಸಗೊಳಿಸಲಾಗಿತ್ತು.

التفاسير: