ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
21 : 18

وَكَذٰلِكَ اَعْثَرْنَا عَلَیْهِمْ لِیَعْلَمُوْۤا اَنَّ وَعْدَ اللّٰهِ حَقٌّ وَّاَنَّ السَّاعَةَ لَا رَیْبَ فِیْهَا ۚۗ— اِذْ یَتَنَازَعُوْنَ بَیْنَهُمْ اَمْرَهُمْ فَقَالُوا ابْنُوْا عَلَیْهِمْ بُنْیَانًا ؕ— رَبُّهُمْ اَعْلَمُ بِهِمْ ؕ— قَالَ الَّذِیْنَ غَلَبُوْا عَلٰۤی اَمْرِهِمْ لَنَتَّخِذَنَّ عَلَیْهِمْ مَّسْجِدًا ۟

ಈ ರೀತಿ ನಾವು ಅವರ ಬಗ್ಗೆ ಜನರಿಗೆ ಸುಳಿವು ನೀಡಿದೆವು. ಅಲ್ಲಾಹನ ವಾಗ್ದಾನವು ಸತ್ಯವಾಗಿದೆ ಮತ್ತು ಅಂತ್ಯದಿನವು ಸಂಭವಿಸುತ್ತದೆಯೆಂಬ ವಿಷಯದಲ್ಲಿ ಸಂಶಯವೇ ಇಲ್ಲ ಎಂದು ಜನರು ತಿಳಿಯುವುದಕ್ಕಾಗಿ. ಅವರು ಗುಹಾವಾಸಿಗಳ ಬಗ್ಗೆ ಪರಸ್ಪರ ತರ್ಕಿಸುತ್ತಿದ್ದ ಸಂದರ್ಭ. ಅವರು ಹೇಳಿದರು: “ಇವರ ಗುಹೆಯ ಮೇಲೆ ಒಂದು ಕಟ್ಟಡವನ್ನು ನಿರ್ಮಿಸಿರಿ. ಅವರ ಬಗ್ಗೆ ಅವರ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ.” ಅವರ ವಿಷಯದಲ್ಲಿ ಪ್ರಾಬಲ್ಯ ಪಡೆದವರು ಹೇಳಿದರು: “ನಿಶ್ಚಯವಾಗಿಯೂ ನಾವು ಅವರ ಗುಹೆಯ ಬಳಿ ಒಂದು ಮಸೀದಿಯನ್ನು ನಿರ್ಮಿಸುತ್ತೇವೆ.” info
التفاسير: