ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
177 : 2

لَیْسَ الْبِرَّ اَنْ تُوَلُّوْا وُجُوْهَكُمْ قِبَلَ الْمَشْرِقِ وَالْمَغْرِبِ وَلٰكِنَّ الْبِرَّ مَنْ اٰمَنَ بِاللّٰهِ وَالْیَوْمِ الْاٰخِرِ وَالْمَلٰٓىِٕكَةِ وَالْكِتٰبِ وَالنَّبِیّٖنَ ۚ— وَاٰتَی الْمَالَ عَلٰی حُبِّهٖ ذَوِی الْقُرْبٰی وَالْیَتٰمٰی وَالْمَسٰكِیْنَ وَابْنَ السَّبِیْلِ ۙ— وَالسَّآىِٕلِیْنَ وَفِی الرِّقَابِ ۚ— وَاَقَامَ الصَّلٰوةَ وَاٰتَی الزَّكٰوةَ ۚ— وَالْمُوْفُوْنَ بِعَهْدِهِمْ اِذَا عٰهَدُوْا ۚ— وَالصّٰبِرِیْنَ فِی الْبَاْسَآءِ وَالضَّرَّآءِ وَحِیْنَ الْبَاْسِ ؕ— اُولٰٓىِٕكَ الَّذِیْنَ صَدَقُوْا ؕ— وَاُولٰٓىِٕكَ هُمُ الْمُتَّقُوْنَ ۟

ಒಳಿತು ಎಂದರೆ ನೀವು ನಿಮ್ಮ ಮುಖಗಳನ್ನು ಪೂರ್ವಕ್ಕೆ ಅಥವಾ ಪಶ್ಚಿಮಕ್ಕೆ ತಿರುಗಿಸುವುದಲ್ಲ. ಬದಲಿಗೆ, ಒಳಿತಿನಲ್ಲಿರುವವನು ಯಾರೆಂದರೆ ಅಲ್ಲಾಹನಲ್ಲಿ, ಅಂತ್ಯದಿನದಲ್ಲಿ, ದೇವದೂತರುಗಳಲ್ಲಿ, ಗ್ರಂಥದಲ್ಲಿ ಮತ್ತು ಪ್ರವಾದಿಗಳಲ್ಲಿ ವಿಶ್ವಾಸವಿಡುವವನು, ಧನದ ಮೇಲೆ ಪ್ರೀತಿಯಿದ್ದೂ ಸಹ ಅದನ್ನು ಸಂಬಂಧಿಕರಿಗೆ, ಅನಾಥರಿಗೆ, ನಿರ್ಗತಿಕರಿಗೆ, ದಾರಿಹೋಕನಿಗೆ, ಬೇಡುವವರಿಗೆ ಮತ್ತು ಗುಲಾಮ ವಿಮೋಚನೆಗೆ ಖರ್ಚು ಮಾಡುವವನು, ನಮಾಝನ್ನು ಸಂಸ್ಥಾಪಿಸುವವನು, ಝಕಾತ್ ನೀಡುವವನು, ಕರಾರು ಮಾಡಿದರೆ ಅದನ್ನು ನೆರವೇರಿಸುವವನು ಮತ್ತು ಬಡತನ, ಸಂಕಷ್ಟ ಹಾಗೂ ಯುದ್ಧಗಳ ಸಂದರ್ಭಗಳಲ್ಲಿ ತಾಳ್ಮೆಯಿಂದಿರುವವರು. ಅವರೇ (ನಿಜವಾದ) ಸತ್ಯವಂತರು ಮತ್ತು ಅವರೇ ದೇವಭಯವುಳ್ಳವರು. info
التفاسير: