ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
228 : 2

وَالْمُطَلَّقٰتُ یَتَرَبَّصْنَ بِاَنْفُسِهِنَّ ثَلٰثَةَ قُرُوْٓءٍ ؕ— وَلَا یَحِلُّ لَهُنَّ اَنْ یَّكْتُمْنَ مَا خَلَقَ اللّٰهُ فِیْۤ اَرْحَامِهِنَّ اِنْ كُنَّ یُؤْمِنَّ بِاللّٰهِ وَالْیَوْمِ الْاٰخِرِ ؕ— وَبُعُوْلَتُهُنَّ اَحَقُّ بِرَدِّهِنَّ فِیْ ذٰلِكَ اِنْ اَرَادُوْۤا اِصْلَاحًا ؕ— وَلَهُنَّ مِثْلُ الَّذِیْ عَلَیْهِنَّ بِالْمَعْرُوْفِ ۪— وَلِلرِّجَالِ عَلَیْهِنَّ دَرَجَةٌ ؕ— وَاللّٰهُ عَزِیْزٌ حَكِیْمٌ ۟۠

ವಿಚ್ಛೇದಿತ ಮಹಿಳೆಯರು ಸ್ವಯಂ ಮೂರು ಋತುಸ್ರಾವಗಳ ತನಕ ಕಾಯಬೇಕು. ಅವರಿಗೆ ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿದ್ದರೆ ಅವರ ಗರ್ಭಗಳಲ್ಲಿ ಅಲ್ಲಾಹು ಸೃಷ್ಟಿಸಿರುವುದನ್ನು ಮುಚ್ಚಿಡುವುದು ಅವರಿಗೆ ಧರ್ಮಸಮ್ಮತವಲ್ಲ. ಅವರ ಗಂಡಂದಿರು ಅವರನ್ನು ಆ ಅವಧಿಯೊಳಗೆ ಮರಳಿ ಸ್ವೀಕರಿಸಲು ಪೂರ್ಣ ಹಕ್ಕುಳ್ಳವರಾಗಿದ್ದಾರೆ—ಅವರ (ಗಂಡಂದಿರ) ಉದ್ದೇಶವು ರಾಜಿ ಮಾಡುವುದಾಗಿದ್ದರೆ.[1] ಪುರುಷರಿಗೆ ಮಹಿಳೆಯರ ಮೇಲೆ ಹಕ್ಕುಗಳಿರುವಂತೆ ಮಹಿಳೆಯರಿಗೂ ಪುರುಷರ ಮೇಲೆ ಸ್ವೀಕಾರಾರ್ಹ ರೀತಿಯಲ್ಲಿರುವ ಹಕ್ಕುಗಳಿವೆ. ಆದರೆ ಪುರುಷರಿಗೆ ಮಹಿಳೆಯರಿಗಿಂತ ಹೆಚ್ಚಿನ ಒಂದು ಪದವಿಯಿದೆ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info

[1] ಪತ್ನಿಯನ್ನು ಮರಳಿ ಸ್ವೀಕರಿಸುವುದು ಒಳಿತಿನ ಉದ್ದೇಶದಿಂದಾಗಿದ್ದರೆ, ದೀಕ್ಷಾಕಾಲ (ಇದ್ದ) ಮುಗಿಯುವುದಕ್ಕೆ ಮೊದಲು ಪತ್ನಿಯನ್ನು ಮರಳಿ ಸ್ವೀಕರಿಸುವ ಪೂರ್ಣ ಹಕ್ಕು ಗಂಡನಿಗಿದೆ. ಅದನ್ನು ತಡೆಯುವ ಹಕ್ಕು ಹೆಂಡತಿಯ ಕಡೆಯವರಿಗಿಲ್ಲ.

التفاسير: