ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
246 : 2

اَلَمْ تَرَ اِلَی الْمَلَاِ مِنْ بَنِیْۤ اِسْرَآءِیْلَ مِنْ بَعْدِ مُوْسٰی ۘ— اِذْ قَالُوْا لِنَبِیٍّ لَّهُمُ ابْعَثْ لَنَا مَلِكًا نُّقَاتِلْ فِیْ سَبِیْلِ اللّٰهِ ؕ— قَالَ هَلْ عَسَیْتُمْ اِنْ كُتِبَ عَلَیْكُمُ الْقِتَالُ اَلَّا تُقَاتِلُوْا ؕ— قَالُوْا وَمَا لَنَاۤ اَلَّا نُقَاتِلَ فِیْ سَبِیْلِ اللّٰهِ وَقَدْ اُخْرِجْنَا مِنْ دِیَارِنَا وَاَبْنَآىِٕنَا ؕ— فَلَمَّا كُتِبَ عَلَیْهِمُ الْقِتَالُ تَوَلَّوْا اِلَّا قَلِیْلًا مِّنْهُمْ ؕ— وَاللّٰهُ عَلِیْمٌۢ بِالظّٰلِمِیْنَ ۟

ಮೂಸಾರ ಕಾಲಾನಂತರ ಇಸ್ರಾಯೇಲ್ ಮಕ್ಕಳಲ್ಲಿ ಸೇರಿದ ಕೆಲವು ಮುಖಂಡರನ್ನು ನೀವು ನೋಡಿಲ್ಲವೇ? ಅವರು ತಮ್ಮ ಪ್ರವಾದಿಯೊಂದಿಗೆ, "ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ನಮಗೆ ಒಬ್ಬ ರಾಜನನ್ನು ನೇಮಿಸಿಕೊಡಿ" ಎಂದು ಹೇಳಿದ ಸಂದರ್ಭ. ಅವರು (ಪ್ರವಾದಿ) ಹೇಳಿದರು: "ನಿಮ್ಮ ಮೇಲೆ ಯುದ್ಧವು ಕಡ್ಡಾಯವಾದ ನಂತರ ನೀವೇನಾದರೂ ಯುದ್ಧ ಮಾಡದವರಾಗಿ ಬಿಟ್ಟರೆ?" ಅವರು ಹೇಳಿದರು: "ನಮ್ಮನ್ನು ನಮ್ಮ ಮನೆಗಳಿಂದ ಓಡಿಸಲಾಗಿರುವ ಮತ್ತು ನಮ್ಮಿಂದ ನಮ್ಮ ಮಕ್ಕಳನ್ನು ಬೇರ್ಪಡಿಸಲಾಗಿರುವ ಈ ಸ್ಥಿತಿಯಲ್ಲಿ ನಾವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ಸಾಧ್ಯವೇ?" ಆದರೆ ಅವರ ಮೇಲೆ ಯುದ್ಧವು ಕಡ್ಡಾಯವಾದಾಗ ಅವರಲ್ಲಿ ಕೆಲವರ ಹೊರತು ಉಳಿದವರೆಲ್ಲರೂ ಮುಖ ತಿರುಗಿಸಿ ನಡೆದರು. ಅಲ್ಲಾಹನಿಗೆ ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದೆ. info
التفاسير: